ಕೊಡಗು: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರುಬೈಸ್ನನ್ನ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಗೃಹಿಣಿ ಅಮೀರಾ(21) ಸಾವನ್ನಪ್ಪಿದ್ದರು. ಅಮಿರಾಳಿಗೆ ವಾಟ್ಸ್ ಆಯಪ್ನಲ್ಲೇ ಪತಿ ರುಬೈಸ್ ತಲಾಖ್ ಹೇಳಿದ್ದ ಎನ್ನಲಾಗಿದೆ. ಸದ್ಯ ರುಬೈಸ್ನನ್ನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಗಳ ಸಾವಿನ ಬಳಿಕ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ರುಬೈಸ್ನ ತಂದೆ ತಾಯಿ …
Read More »ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಏರ್ಪೋರ್ಟ್ಗೆ ಹೋಗಲು ಟ್ರ್ಯಾಕ್ಟರ್ ಮೊರೆಹೋದ ಪ್ಯಾಸೆಂಜರ್ಸ್
ಬೆಂಗಳೂರು: ಹಲವು ದಿನಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಬೆಂಗಳೂರಿಗರನ್ನ ಕಂಗೆಡಿಸಿದೆ. ಇಂದು ಕೂಡ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಇತ್ತ ದೇವನಹಳ್ಳಿ ಏರ್ಪೋರ್ಟ್ ಬಳಿಯೂ ಭಾರೀ ಮಳೆಯಾಗಿದ್ದು ಏರ್ಪೋರ್ಟ್ ಅರೈವಲ್ ಮತ್ತು ಡಿಪಾರ್ಚರ್ ವೇ, ಪಾರ್ಕಿಂಗ್ ಬಳಿಯೂ ಕೆರೆಯಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ಇತ್ತ ಏರ್ಪೋರ್ಟ್ಗೆ ಹೋಗುವ ಪ್ಯಾಸೆಂಜರ್ಗಳು ಏರ್ಪೋರ್ಟ್ಗೆ ತೆರಳಬೇಕಿದ್ದ ಬಸ್ ಸಿಗದೇ ಪರದಾಡುವಂತಾಗಿದೆ. ಈ ವೇಳೆ ದೇವರಂತೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್ಪೋರ್ಟ್ಗೆ ಹೋಗಲು …
Read More »ಬೆಳಗಾವಿ ಬೂಡಾದಲ್ಲಿ ಇನ್ನೂ ಇದೆ ಕೆಜೆಪಿ v/s ಬಿಜೆಪಿ ಸಮರ;
ಬೆಳಗಾವಿ (ಅಕ್ಟೋಬರ್. 11)- ಬೆಳಗಾವಿ ಜಿಲ್ಲೆಯ ರಾಜಕೀಯ ಪೈಪೋಟಿ, ಪರಸ್ಪರ ಹೋರಾಟಕ್ಕೆ ಹೆಸರಾಗಿದೆ. ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸ್ಥಾಪನೆ ಮಾಡಿದ ಕೆಜೆಪಿ ಪಕ್ಷದಲ್ಲಿ ವಿಲೀನಗೊಂಡು ವರ್ಷಗಳೇ ಉರುಳಿದೆ. ಆದರೆ ಇನ್ನೂ ಕೆಜೆಪಿ, ಬಿಜೆಪಿ ನಡುವೆ ಮಾತ್ರ ಇನ್ನೂ ಮುಸುಕಿನ ಗುದ್ದಾಟ ಇದೆ. ಇದಕ್ಕೆ ಸಾಕ್ಷಿ ಎಂಬತೆ ಇದೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಿರಿ ಹುದ್ದೆ. ಹಾಲಿ ಅಧ್ಯಕ್ಷ ಘೂಳಪ್ಪ ಹೊಸಮನಿ ವಿರುದ್ಧ ಬಿಜೆಪಿ ಶಾಸಕರು ಅಸಹಕಾರ ಆರಂಭಿಸಿದ್ದಾರೆ. …
Read More »ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಜಗಳ ಇನ್ನೂ ನಿಂತಿಲ್ಲ.
ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ತಾರಕಕ್ಕೇರಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಜಗಳ ಇನ್ನೂ ನಿಂತಿಲ್ಲ. ಹಾನಗಲ್ ಮತ್ತು ಸಿಂದಗಿ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕಿದ ಮೇಲಂತೂ ಸಿದ್ದರಾಮಯ್ಯ ಎಚ್ಡಿಕೆ ಮೇಲೆ ಕೆಂಡಕಾರಿದ್ದರು. ಈಗ ಇದು ತಾತ್ಕಾಲಿಕ ಕದನ ವಿರಾಮವೋ, ಮಾತಿನ ಸಮರವೋ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಈ ಪ್ರಶ್ನೆ ಹುಟ್ಟಿಕೊಂಡಿದ್ದೇ ತಡ ದಿಢೀರನೇ ಸಿದ್ದರಾಮಯ್ಯ ತಾತ್ಕಾಲಿಕ …
Read More »ಪ್ರಧಾನಿ ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು: ರಾಮಲಿಂಗಾರೆಡ್ಡಿ
ಅ.11: ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಜನ ಮೃತಪಟ್ಟರು. ಅದರ ಬಗ್ಗೆ ಬಿಜೆಪಿ ಧ್ವನಿ ಎತ್ತಲಿಲ್ಲ. ರೈತರ ಹತ್ಯೆಯಾಗಿದೆ, ಆಗಲೂ ಧ್ವನಿಯೆತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯಿಂದ ರೈತರಿಗೂ ನ್ಯಾಯ ಸಿಗಲ್ಲ. ಸಾಮಾನ್ಯ ಜನರಿಗೂ ನ್ಯಾಯ ಸಿಗಲ್ಲ. ಹಾಗಾಗಿ ಅವರು ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿಗಾರಿದರು. ಸೋಮವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ರೈತ ವಿರೋಧಿ ಕೃಷಿ ಕಾನೂನುಗಳು …
Read More »ಪೊಲೀಸ್ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ; ಯಾಕೆ?
ಹಾವೇರಿ: ಪೊಲೀಸ್ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ತಾಲೂಕು ಗಡಿ ಭಾಗದ ತರ್ಲಘಟ್ಟ ಗ್ರಾಮದಲ್ಲಿ ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತರು ಭೂಮಿಯಲ್ಲಿ ಸಾಗುವಳಿ ಮಾಡಲು ಮುಂದಾದ ವಿಷಯ ತಿಳಿದು ದುಂಡಸಿ ಅರಣ್ಯ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ತಡಸ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೂಡ ಸ್ಥಳಕ್ಕೆ ಹೋಗಿ …
Read More »ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ
ಚಿಕ್ಕಮಗಳೂರು, ಅ.11- ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಕ್ಷಯ್.ಎಂ.ಕೆ. ಆರೋಪಿ ಯನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗು ವುದು ಎಂದು ತಿಳಿಸಿದ್ದಾರೆ. 12 ವರ್ಷದ ಬಾಲಕಿಯು ಅಂಗಡಿಯಿಂದ ಸಾಮಗ್ರಿ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಮೀನು ವ್ಯಾಪಾರಿಯೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಬಲವಂತವಾಗಿ ತನ್ನ ಗೂq್ಸï ವಾಹನದಲ್ಲಿ ಕೂರಿಸಿಕೊಂಡು ಹೋಗಿ …
Read More »ಐಪಿಎಲ್‍ನಿಂದ RCB ಔಟ್
ಶಾರ್ಜಾ: ಬ್ಯಾಟಿಂಗ್ ನಲ್ಲಿ ಹೀನಾಯ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತು ಐಪಿಎಲ್‍ನಿಂದ ನಿರ್ಗಮಿಸಿದೆ. ಗೆಲ್ಲಲು 139 ರನ್‍ಗಳ ಸುಲಭದ ಗುರಿಯನ್ನು ಪಡೆದ ಕೋಲ್ಕತ್ತಾ 19.4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 139 ರನ್ ಹೊಡೆದು 4 ವಿಕೆಟ್‍ಗಳ ಜಯ ಸಾಧಿಸಿತು. ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ವಿಜೇತರಾದವರು ಶುಕ್ರವಾರ ಚೆನ್ನೈ ವಿರುದ್ಧ ಫೈನಲ್ …
Read More »3 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಭೂಮಿಪೂಜೆ: ಬಿ.ಶ್ರೀರಾಮುಲು
ಚಿತ್ರದುರ್ಗ: ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಇಂದು ಭೂಮಿಪೂಜೆ ಮಾಡಿದ್ದಾರೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಸೋಮವಾರ 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕುಸ್ಥಾಪನಾ ಸಮಾರಂಭ ನೆರೆವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ …
Read More »ಮದ್ವೆಯಾದ ಬಳಿಕ ಒಂಟಿಯಾಗಿ ಜೀವಿಸ್ತಿರೋದು ಅವರ ನಾಯಕ- ಸುಧಾಕರ್‌ಗೆ ನಿಂಬಾಳ್ಕರ್ ಟಾಂಗ್
ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆಗಳಿವೆಯಾ ಎಂದು ಸಚಿವ ಡಾ. ಕೆ ಸುಧಾಕರ್ ಅವರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ. ಆಧುನಿಕ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪುರುಷರಿಗೆ ಆಪ್ತ ಸಮಾಲೋಚನೆಯ ಅವಶ್ಯವಿದೆ. ವಿಶ್ವ ಮಾನಸಿಕ ಆರೋಗ್ಯ ದಿನದಂದು …
Read More »
Laxmi News 24×7