Breaking News

ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ.

ಬೆಂಗಳೂರು: ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ. ಉಪಚುನಾವಣೆ ತರುವಾಯ ದೆಹಲಿಗೆ ತೆರಳುತ್ತೇನೆ. ಅಲ್ಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ …

Read More »

ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ.

ನವದೆಹಲಿ: ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ. ಕಾಮಗಾರಿಯ ನೈಪುಣ್ಯತೆಯನ್ನು ನೀರು ತುಂಬಿದ ಗಾಜಿನ ಲೋಟದ ಮೂಲಕ ಪರೀಕ್ಷೆ ಮೂಲಕ ಅದು ಜನರ ಮುಂದಿಟ್ಟಿದೆ. ಈ ವೇಳೆ ರೈಲು ವೇಗವಾಗಿ ಚಲಿಸಿದರೂ ಒಂದು ಹನಿ ನೀರು ಕೆಳಗೆ ಬಿದ್ದಿಲ್ಲ. ಈ ವಿಡಿಯೋವನ್ನು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರು ಟ್ವೀಟ್‌ ಮಾಡಿದ್ದು, ಈ ಮಾರ್ಗ ರೈಲು ಪ್ರಯಾಣ ಎಷ್ಟು ಸುಗಮವಾಗಿ ಇರಲಿದೆ …

Read More »

ಸಬರ್‌ಮತಿ ನದಿ ತೀರದಿಂದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್‌ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಲಿದ್ದಾರೆ.

ನವದೆಹಲಿ : ಗುಜರಾತಿನ ಸಬರ್‌ಮತಿ ನದಿ ತೀರದಿಂದ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್‌ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಲಿದ್ದಾರೆ. ಸರ್ದಾರ್‌ ಪಟೇಲ್‌ ಅವರ 146ನೇ ಜನ್ಮ ದಿನದ ನಿಮಿತ್ತ ಈ ಸೇವೆಯನ್ನು ಆರಂಭಿಸಲಾಗುತ್ತಿದೆ. ಸೀಪ್ಲೇನ್‌ ವಿಮಾನ ಅಹಮದಾಬಾದ್‌ನ ನದಿ ತೀರದಿಂದ 10.15 ನಿಮಿಷಕ್ಕೆ ಹಾರಾಟ ಕೈಗೊಳ್ಳಲಿದ್ದು, 10.45ಕ್ಕೆ ಕೆವಾಡಿಯಾ ತಲುಪಲಿದೆ. ಕೆವಾಡಿಯಾದ ಸರ್ದಾರ್‌ …

Read More »

ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ. ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು …

Read More »

B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ …

Read More »

ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ

ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …

Read More »

ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ

ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ.         ಚಂದ್ರಶೇಖರ ಹುಚ್ಚನ್ನವರ್‌ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.

Read More »

ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ.

ತುಮಕೂರು: ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ. ಸುಮಾರು 520 ಎಕರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆ ನೀರು ಹರಿಸಲಾಗಿತ್ತು. ಆದರೆ, ಹೇಮಾವತಿ ನದಿ ನೀರು ಕಾವೇರಿ ಕೊಳ್ಳದ ವ್ಯಾಪ್ತಿ ಎಂಬ ಕಾರಣಕ್ಕೆ ಅದನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಭದ್ರಾ ಮೇಲ್ದಂಡೆಯಿಂದ ನೀರು ಹರಿಸಲು ಯೋಜನೆ ರೂಪಿಸಲಾಗ್ತಿದೆ. ಈ ಹೆಗ್ಗಳಿಕೆಯನ್ನು ಕಾಂಗ್ರೆಸ್, ಜೆಡಿಎಸ್ ಹಾಗೂ …

Read More »

ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಸಾಯಿಸಿರುವ ಮಗ

ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು 19 ವರ್ಷದ ಮಗ ಕೊಲೆ ಮಾಡಿರುವ ಘಟನೆ ಮಥುರಾದಲ್ಲಿ ನಡೆದಿದೆ. ಮನೋಜ್ ಮಿಶ್ರಾ ಎಂಬುವವರೇ ಮಗನಿಂದಲೇ ಕೊಲೆಯಾದ ದುರ್ದೈವಿ. 12ನೇ ತರಗತಿ ಓದುತ್ತಿದ್ದ ಮಗನೇ ಕೊಲೆ ಮಾಡಿದವನು. ತಂದೆ ಗದರಿದ ಎಂಬ ಕಾರಣಕ್ಕೆ ಕೋಪಗೊಂಡು, ಕಬ್ಬಿಣದ ರಾಡ್‍ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆ ನಂತರ ಬಟ್ಟೆಯಿಂದ ಕತ್ತು ಹಿಸುಕಿದ್ದಾನೆ. ಕೊಲೆಯಾದ ನಂತರ ತಾಯಿಯ ನೆರವನಿಂದ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ್ದಾನೆ. …

Read More »

ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ

ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ …

Read More »