ಪ್ರತಿಭಟನಾನಿರತ ರೈತರ ಮೇಲೆ ದಾಳಿ ಮಾಡಲು ಆದೇಶಿಸುತ್ತಾ ಕ್ಯಾಮೆರಾದಲ್ಲಿ ಸಿಕ್ಕಿಹಾಕಿಕೊಂಡ ಹರಿಯಾಣಾ ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ‘ರೈತರ ತಲೆಗಳನ್ನು ಒಡೆಯಿರಿ’ ಎಂದು ಪೊಲೀಸ್ ಸಿಬ್ಬಂದಿಗೆ ಆದೇಶ ಕೊಟ್ಟ ಕರ್ನಲ್ ಜಿಲ್ಲೆಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಆಯುಶ್ ಸಿನ್ಹಾರನ್ನು ಹರಿಯಾಣಾ ಸರ್ಕಾರದ ನಾಗರಿಕ ಸಂಪನ್ಮೂಲ ಮಾಹಿತಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. “ಅದೇನೇ ಆಗಲಿ, ಯಾರೊಬ್ಬರೂ ಈ ಬ್ಯಾರಿಕೇಡ್‌ಗಳನ್ನು ದಾಟಕೂಡದು. ಸ್ಪಷ್ಟವಾಗಿ ಹೇಳುತ್ತೇನೆ, ಈ ಗೆರೆ ದಾಟಲು …
Read More »ಸೈಟ್, ಮನೆ, ಜಮೀನು, ಫ್ಲ್ಯಾಟ್ ಖರೀದಿಸುವವರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ಕಡಿತ ಸಾಧ್ಯತೆ
ಬೆಂಗಳೂರು: ನಿವೇಶನ, ಜಮೀನು, ಫ್ಲಾಟ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಭೂಮಿ ಮಾರ್ಗಸೂಚಿ ದರ ಕಡಿತಗೊಳಿಸಲು ಮುಂದಾಗಿದೆ. ಕೃಷಿ ಜಮೀನು, ಕೃಷಿಯೇತರ ಜಮೀನು, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಮಾರಾಟ ಮತ್ತು ಖರೀದಿಸುವಾಗ ಮಾರ್ಗಸೂಚಿ ದರ ಹೆಚ್ಚಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಕಡಿತಗೊಳಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕೊರೋನಾದಿಂದಾಗಿ ನೆಲಕಚ್ಚಿರುವ ರಿಯಲ್ ಎಸ್ಟೇಟ್ …
Read More »E-KYC : ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿದೆ. ಆದ್ದರಿಂದ ಜಿಲ್ಲೆಯ ಇನ್ನುಳಿದ ಪಡಿತರ ಚೀಟಿದಾರರು 2021ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ 983 ನ್ಯಾಯಬೆಲೆ …
Read More »ವಿಜಯಪುರ: ನಿಗೂಢ ಭಾರಿ ಶಬ್ದಕ್ಕೆ ನಿದ್ದೆಗೆಟ್ಟು ಜಾಗರಣೆ ಮಾಡಿದ ಜನ.!
ವಿಜಯಪುರ: ಜಿಲ್ಲೆಯ ಹಲವೆಡೆ ಬುಧವಾರ ರಾತ್ರಿ ಮತ್ತೆ ನಿಗೂಢ ಶಬ್ಧ ಕೇಳಿ ಬಂದಿದೆ. ಪರಿಣಾಮ ಭೂಕಂಪನದ ಅನುಭವ ಎಂದುಕೊಂಡ ಜನರು ಭಯದಿಂದ ಇಡೀ ರಾತ್ರಿ ಮನೆಯಿಂದ ಹೊರಗೆ ಓಡಿಬಂದು ನಿದ್ದೆ ಇಲ್ಲದೇ ಜಾಗರಣೆ ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಕರಿಭಂಟನಾಳ, ಪಿ.ಬಿ.ಹುಣಶ್ಯಾಳ ಗ್ರಾಮದಲ್ಲಿ ಬುಧವಾರ ರಾತ್ರಿ ಭೂಕಂಪದ ಮಾದರಿಯಲ್ಲಿ ಭಾರಿ ಸದ್ದು ಕೇಳಿಬಂದಿದೆ. ಮನೆಯಲ್ಲಿ ಪಾತ್ರೆಗಳು, ಇತರೆ ವಸ್ತುಗಳು ಅಲುಗಾಡಿ ಕೆಳಗೆ ಬಿದ್ದಿವೆ. ಇದರಿಂದ ಭಯಗೊಂಡ ಗ್ರಾಮದ ಜನರು ಮನೆಯಿಂದ ಹೊರಗೆ ಓಡಿ …
Read More »ಮೋದಿ ಸರ್ಕಾರವು ಬಂಡವಾಳಶಾಯಿ ಕೈಗೊಂಬೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಉದ್ಯಮಿಗಳ 7 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆ ಪೈಕಿ ಅದಾನಿ ಅವರದ್ದೇ 4.50 ಲಕ್ಷ ಕೋಟಿ ರೂ. ಎನ್ ಪಿಎ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಜಗತ್ತಿನ ಅಭಿವೃದ್ದಿ ಹೊಂದುವ ವೇಗದ ದೇಶಗಳಲ್ಲಿ ಭಾರತ 5ನೇ ಸ್ಥಾನದಲ್ಲಿತ್ತು. ಈಗ 193 ದೇಶಗಳ …
Read More »ʼಬಿಗ್ ಬಾಸ್ 13ʼ ರ ವಿಜೇತ ಸಿದ್ದಾರ್ಥ್ ಶುಕ್ಲಾ ಇನ್ನಿಲ್ಲ
ಜನಪ್ರಿಯ ರಿಯಾಲಿಟಿ ಶೋ ʼಬಿಗ್ ಬಾಸ್ 13ʼ ರ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ವಿಧಿವಶರಾಗಿದ್ದಾರೆ. 40 ವರ್ಷದ ಸಿದ್ದಾರ್ಥ್ ಶುಕ್ಲಾ ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಡ್ಯಾನ್ಸ್ ದಿವಾನೆ 3 ರಲ್ಲೂ ತಮ್ಮ ಗೆಳತಿ ಶೆಹನಾಜ್ ಗಿಲ್ ಜೊತೆ ಸಿದ್ದಾರ್ಥ್ ಶುಕ್ಲಾ ಕಾಣಿಸಿಕೊಂಡಿದ್ದರು. ಸಣ್ಣ ವಯಸ್ಸಿನಲ್ಲಿಯೇ ಸಿದ್ದಾರ್ಥ್ ಶುಕ್ಲಾ ಇಹಲೋಕ ತ್ಯಜಿಸಿರುವುದು ಚಿತ್ರರಂಗದವರನ್ನು ದಿಗ್ಬ್ರಮೆಗೊಳಿಸಿದೆ. ಡಿಸೆಂಬರ್ 12, 1980 ರಂದು ಮುಂಬೈನಲ್ಲಿ ಸಿದ್ದಾರ್ಥ್ ಶುಕ್ಲಾ ಜನಿಸಿದ್ದು, ಮೂಲತಃ ಉತ್ತರ …
Read More »ಜೆಡಿಎಸ್‌ದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ: ನಳಿನ್ ಕುಮಾರ್ ಕಟೀಲ್
ಮೈಸೂರು: ಜೆಡಿಎಸ್ ಪಕ್ಷದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಇಲ್ಲಿ ತಿರುಗೇಟು ನೀಡಿದರು. ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹಣ ವಸೂಲಿಗಾಗಿ ಆಗಾಗ್ಗೆ ರಾಜ್ಯಕ್ಕೆ ಬರುತ್ತಿರುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ತಿರುಗೇಟು ನೀಡಿದ್ದಾರೆ. ‘ತಮ್ಮ ಅನುಭವವನ್ನು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ರಾಜ್ಯ, ದೇಶ ಆಳಿದ ಇವರ ನಾಲಿಗೆ ಸರಿಯಾಗಿದ್ದಿದ್ದರೆ …
Read More »ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್
ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. …
Read More »ಬೆಲೆ ಏರಿಕೆ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ: ಡಿಕೆಶಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗುತ್ತಿದೆ. ಗ್ಯಾಸ್, ಆಟೋ ಗ್ಯಾಸ್ ದರ ಸಹಾ ಹೆಚ್ಚಳವಾಗುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ರೂಪಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಸಂಬಂಧ ಸೆಪ್ಟಂಬರ್ 5 ಹಾಗೂ 6 ರಂದು ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ಸದನದಲ್ಲೂ ಈ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಚಾಮರಾಜನಗರದಲ್ಲಿ ನೋ ವ್ಯಾಕ್ಸಿನ್ …
Read More »ಪಿಎಚ್‍ಡಿ ವ್ಯಾಸಂಗ ಬೇಡ ಎಂದ ಪಾಲಕರು- ಯುವತಿ ಆತ್ಮಹತ್ಯೆ
ಬಳ್ಳಾರಿ: ಪಿಎಚ್‍ಡಿ ವ್ಯಾಸಂಗ ಮಾಡುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ. ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಯು.ಎನ್. ಪೂಜಾ(24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪೂಜಾ ಎಂ.ಎಸ್ಸಿ ಮುಗಿಸಿಕೊಂಡು ಬಿ.ಎಡ್ ಮಾಡುತ್ತಿದ್ದರು. ಈಗ ಪಿಎಚ್‍ಡಿ ಮಾಡುವುದದಾಗಿ ತಂದೆಯೊಂದಿಗೆ ತನ್ನ ಅಭಿಪ್ರಾಯ ತಿಳಿಸಿದ್ದಾರೆ. ಅದಕ್ಕೆ ತಂದೆ ನಾಗರಾಜ್, ಪಿಎಚ್‍ಡಿ ಮಾಡುವುದು ಬೇಡ ಎಂದು ಹೇಳಿದ್ದಾರೆ.ತಂದೆ ಪಿಎಚ್‍ಡಿ ಮಾಡುವುದು …
Read More »
Laxmi News 24×7