ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಗಂಟೆ ಬಾಕಿ ಇರುವಾಗ ಬೆಳಗಾವಿಯಲ್ಲಿ ಅಪಾರ ಪ್ರಮಾಣದಲ್ಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಬಕಾರಿ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ಸೇರಿ ಮಜಗಾಂವ ಕ್ರಾಸ್ ಹತ್ತಿರ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಒಂದು ಹುಂಡೈ ಐ-೨೦ ಕಾರ್ (ಸಂಖ್ಯೆ ಜಿಎ-೦೩ ಎಚ್-೮೬೪೪) ತಪಾಸಣೆ ಮಾಡಿದಾಗ ವಾಹನದಲ್ಲಿ ಅಪಾರ …
Read More »ಬೆಂಗಳೂರಿನ ಕಾರು ಅಪಘಾತ ಪ್ರಕರಣ: ಬಾರ್ನಲ್ಲಿ ಮದ್ಯ ಖರೀದಿ, ಕಾರಿನಲ್ಲೇ ಪಾರ್ಟಿ
ಬೆಂಗಳೂರು: ಕೋರಮಂಗಲದ 80 ಅಡಿ ರಸ್ತೆಯಲ್ಲಿ ಔಡಿ ಕ್ಯೂ3 ಕಾರು ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟ ಪ್ರಕರಣದ ಕುರಿತು ಆಗ್ನೇಯ ವಿಭಾಗದ (ಸಂಚಾರ) ಎಸಿಪಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಮೃತರು ಓಡಾಡಿದ್ದ ಸ್ಥಳಗಳ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದೆ. ‘ಕಾರು ಚಾಲಕನ ಅತಿವೇಗದ ಚಾಲನೆ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಚಾಲಕನ ವಿರುದ್ಧವೇ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಏಳು ಮಂದಿಯೂ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತ …
Read More »ಬೈಕ್-ಗೂಡ್ಸ್ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ
ಧಾರವಾಡ: ಬೈಕ್ ಮತ್ತು ಗೂಡ್ಸ್ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
Read More »ಸೆ.20ಕ್ಕೆ ಸಿಇಟಿ ಫಲಿತಾಂಶ ಸಾಧ್ಯತೆ?
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಸೆ.20ರಂದು ಹೊರಬೀಳುವ ಸಾಧ್ಯತೆಯಿದೆ. ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ. ಸೆ.20ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ …
Read More »ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದು, ಅನೇಕ ಗಣ್ಯರು ಭಾಗಿಯಾಗಿ ನವ ವಧು-ವರರನ್ನು ಹಾರೈಸಿದರು. ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಮದುವೆ ಸಭಾರಂಭ ನಡೆಯುತ್ತಿದ್ದು, ಗೋಧೂಳಿ ಮುಹೂರ್ತದಲ್ಲಿ ನವಜೋಡಿ ಹಸೆಮಣೆ ಏರಿದೆ. ಜೋಶಿ ಪುತ್ರಿಯ ಮದುವೆ ಸಮಾರಂಭದಲ್ಲಿ ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಮೇಘವಾಲ್ ಸೇರಿದಂತೆ ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗಿ ಶುಭ ಹಾರೈಸಿದ್ದಾರೆ. …
Read More »ಸಬ್ ಇನ್ಸ್ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ: ಸೆ.26ರ ಬದಲಿಗೆ ಅ.3ಕ್ಕೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ. 545 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ …
Read More »ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಮಹಿಳೆಯೊಬ್ಬಳ ಆತ್ಮಹತ್ಯೆ
ಹುಡುಗಿಯರಿಗೆ ಪಾನಿಪುರಿ ಅಂದ್ರೆ ಪಂಚಪ್ರಾಣ. ಮಹಿಳೆಯೊಬ್ಬಳು ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ನಿವಾಸಿಯಾಗಿರುವ ಪ್ರತೀಕ್ಷಾ ಸರ್ವಾಡೆ ೨೦೧೯ ರಲ್ಲಿ ಗಹಿನಿನಾಥ್ ಸರ್ವಾಡೆ ಎಂಬವರನ್ನು ಮದುವೆಯಾಗಿದ್ದರು. ಗಹಿನಿನಾಥ್ ಸರ್ವಾಡೆ ಕೆಲಸದಿಂದ ಬರುವಾಗ ಪತ್ನಿಗೆ ತಿಳಿಸದೇ ಪಾನಿಪೂರಿಯನ್ನು ತಂದಿದ್ದರು. ಅಡುಗೆ ಮಾಡಿಟ್ಟಿದ್ದ ಪತ್ನಿ ಪ್ರತೀಕ್ಷಾ ಇದೇ ಕಾರಣಕ್ಕೆ ಕೋಪ ಮಾಡಿಕೊಂಡಿದ್ದಾಳೆ. ಮರುದಿನ ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ. …
Read More »ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ: ದಿನೇಶ್ ಗುಂಡೂರಾವ್
ಬೆಂಗಳೂರು : ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ತೆರಿಗೆ ವಿಚಾರವಾಗಿ ಸರಕಾರದ ವಿರುದ್ಧ ಟ್ವೀಟ್ ಮಾಡಿದ ದಿನೇಶ್, ಜನರನ್ನು ತೆರಿಗೆ ವಿಷವರ್ತುಲಕ್ಕೆ ತಳ್ಳಿರುವ ಡಬಲ್ ಇಂಜಿನ್ ಸರ್ಕಾರ, ರಕ್ತ ಹೀರುವ ತಿಗಣೆಯಂತೆ ತೆರಿಗೆ ಹೀರುತ್ತಿದೆ. ದೇಶದ ಜನರಿಗೆ ದರಿದ್ರಭಾಗ್ಯ ಕಲ್ಪಿಸಿದ ಈ ಡಬಲ್ ಇಂಜಿನ್ ಸರ್ಕಾರ ಒಂದು ರೀತಿ ಸ್ಮಶಾನದ ಹೆಣವಿದ್ದಂತೆ ಎಂದು …
Read More »ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಬಂಧಿಸಿದ ಸಿಐಡಿ
ಚಿಕ್ಕಮಗಳೂರು, ಸೆ.1 ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ. 2021 ಮೇ 10ರಂದು ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಆಗಿದ್ದ ಅರ್ಜುನ್ ಎಂಬುವರು ಠಾಣಾವ್ಯಾಪ್ತಿಯ ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ಎಂಬಾತನನ್ನು ಪ್ರಕರಣವೊಂದರ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಪಿಎಸ್ಐ ಅರ್ಜುನ್ ಅವರು …
Read More »ಅತ್ಯಾಚಾರ ತಡೆದಿದ್ರೆ ಬೇಷ್ ಅನ್ನಬಹುದಿತ್ತು|ಸರ್ಕಾರ-ಪೊಲೀಸ್ ವಿರುದ್ಧ ಸಿದ್ಧರಾಮಯ್ಯ ಆಕ್ರೋಶ
ಮೈಸೂರು : ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಬಹಳ ಹೇಯ ಕೃತ್ಯ. ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ. ಸರ್ಕಾರ ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಕಿಡಿ ಕಾರಿದರು. ಇಂದು (ಸೆ.01) ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದರು. ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು …
Read More »
Laxmi News 24×7