ದಾವಣಗೆರೆ: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ರಾಜ್ಯದಲ್ಲಿ ಮಕ್ಕಳಲ್ಲಿ ಎ-ನೆಕ್ ಎಂಬ ಅಪರೂಪದ ಕಾಯಿಲೆ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಕ್ಯುಟ್ ನೆಕ್ರೋಟೈಜಿಂಗ್ ಎನ್ಸೆಫಲೋಪತಿ(ANEC) ಎಂಬ ಅಪರೂಪದ ಕಾಯಿಲೆ ದೇಶದಲ್ಲಿಯೇ ಮೊದಲ ಬಾರಿಗೆ ಮಕ್ಕಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಲ್ಲಿನ ಎಸ್.ಎಸ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹೂವಿನಹಡಗಲಿ ಮೂಲದ 13 ವರ್ಷದ ಬಾಲಕನಲ್ಲಿ ಎ-ನೆಕ್ ಕಾಯಿಲೆ ಪತ್ತೆಯಾಗಿದೆ. ಇದೇ ಆಸ್ಪತ್ರೆಯಲ್ಲಿ ಈ ಕಾಯಿಲೆಯ ರೋಗಲಕ್ಷಣವಿರುವ 6 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, …
Read More »ಕೋವಿಡ್ ನಿಯಮ ಉಲ್ಲಂಘಿಸಿ ಲೋಕೋಪಯೋಗಿ ಅಧಿಕಾರಿಗಳಿಂದ ಬಾಡೂಟ ಪಾರ್ಟಿ
ಚಾಮರಾಜನಗರ: ಲಾಕ್ ಡೌನ್ನಲ್ಲಿ ಲೋಕೋಪಯೋಗಿ ಅಧಿಕಾರಿಗಳು ಭರ್ಜರಿ ಬಾಡೂಟ ಪಾರ್ಟಿ ಮಾಡಿರುವ ಘಟನೆ ಚಾಮರಾಜನಗರ ಸಂತೇಮರಳ್ಳಿ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರು ಇದೇ ತಿಂಗಳ 30ರಂದು ನಿವೃತ್ತಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ ಬಿಳ್ಕೊಡುಗೆ ನೀಡುವ ನೆಪದಲ್ಲಿ ಅಧಿಕಾರಿಗಳು ಭರ್ಜರಿ ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದೆ. ಕೊರೊನಾ ಲಾಕ್ಡೌನ್ ಹಾಗೂ ಮಾರ್ಗಸೂಚಿಗಳನ್ನು ಅಧಿಕಾರಿಗಳು ಉಲ್ಲಂಘನೆ ಮಾಡಿದ್ದು, ಸುಮಾರು 80 ರಿಂದ 100 ಜನರಿಗೆ ಬಾಡೂಟ ಏರ್ಪಡಿಸಿದ್ದರು ಎನ್ನಲಾಗಿದೆ. …
Read More »ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ರೇಖಾ ಕದಿರೇಶ್ ಹಂತಕರು: ಮತ್ತೆ ನಾಲ್ವರ ಬಂಧನ
ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್ ಪಿನ್ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್ ಸಹೋದರಿ ಮಾಲಾ ಪುತ್ರ ಅರುಳ್, ಸ್ಥಳೀಯ ನಿವಾಸಿ …
Read More »ಜಾರಕಿಹೊಳಿ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ, ಸೂಕ್ತ ಸ್ಥಾನಮಾನ ಸಿಗಲಿದೆ: ಬಿ.ಸಿ.ಪಾಟೀಲ್
ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಅವರ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಕ್ಕಿಸಿ ಹಾಕಿದ್ದಾರೆ. ಶೀಘ್ರದಲ್ಲಿ ಸತ್ಯ ಹೊರಬರುತ್ತದೆ. ನಂತರ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನವನ್ನು ಪಕ್ಷದ ವರಿಷ್ಠರು ಕೊಡತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ ನಿರ್ನಾಮವಾಗಿದೆ. …
Read More »ಕಾರ ಹುಣ್ಣಿಮೆ ನಿಮಿತ್ತ ಎತ್ತುಗಳ ಮೇಲೆ ಡಿ ಬಾಸ್ ಚಿತ್ರ ಬಿಡಿಸಿ ರೈತರ ಸಂಭ್ರಮ
ಚಿಕ್ಕೋಡಿ(ಬೆಳಗಾವಿ): ಚಾಲೆಂಜಿಗ್ ಸ್ಟಾರ್ ದರ್ಶನ ಅಭಿಮಾನಿಗಳು ಅವರ ಮೇಲಿನ ಪ್ರೀತಿಯಿಂದಾಗಿ ವಿಶಿಷ್ಟವಾಗಿ ತಮ್ಮ ಅಭಿಮಾನವನ್ನ ಪ್ರದರ್ಶನ ಮಾಡುತ್ತಾರೆ. ಅದೇ ರೀತಿ ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ಕಾರ ಹುಣ್ಣಿಮೆಯಲ್ಲೂ ಡಿ ಬಾಸ್ ಅಭಿಮಾನಿಗಳು ವಿಭಿನ್ನವಾಗಿ ತಮ್ಮ ಬಾಸ್ ಮೇಲೆ ಪ್ರೀತಿ ತೋರಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ರೈತರ ಹಬ್ಬ ಕಾರ ಹುಣ್ಣಿಮೆಯ ನಿಮಿತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಎತ್ತುಗಳ ಮೇಲೆ ದರ್ಶನ ಚಿತ್ರ ಬಿಡಿಸಿ …
Read More »ಅಥಣಿ ಪಟ್ಟಣದಲ್ಲಿರುವ ಆರ್‍ಎಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ಶುಕ್ರವಾರ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಆರ್ ಎಸ್ ಎಸ್ ಪ್ರಮುಖರ ಮನೆ ಕದ ತಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಆರ್‍ಎಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅರವಿಂದರಾವ್ ಜೊತೆ ಮಾತುಕತೆ ಮಾತನಾಡುವುದರ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಲು ನನ್ನ ಪಾತ್ರ ತುಂಬಾ ಇದೆ. ಹೀಗಾಗಿ ಕೆಲ …
Read More »ಹಳಿತಪ್ಪಿದ ಹಜರತ್ ನಿಜಾಮುದ್ದೀನ್‌ನ ರಾಜಧಾನಿ ಎಕ್ಸ್‌ಪ್ರೆಸ್
ಮುಂಬೈ: ‘ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಹಜರತ್ ನಿಜಾಮುದ್ದೀನ್‌ನ ರಾಜಧಾನಿ ಎಕ್ಸ್‌ಪ್ರೆಸ್, ಸುರಂಗವೊಂದರಲ್ಲಿ ಹಳಿ ತಪ್ಪಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಗೋವಾದ ಮಡ್‌ಗಾಂವ್‌ನತ್ತ ಪ್ರಯಾಣಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ಮುಂಬೈನಿಂದ 325 ಕಿ.ಮೀ ದೂರದಲ್ಲಿರುವ ಕಾರ್ಬೂಡ್ ಸುರಂಗದಲ್ಲಿ ಬೆಳಿಗ್ಗೆ 4.15ಕ್ಕೆ ಹಳಿ ತಪ್ಪಿದೆ ಎಂದು ಕೊಂಕಣ್ ರೈಲ್ವೆ ಅಧಿಕಾರಿಗಳು ಹೇಳಿದರು. ಹಳಿಯ ಮೇಲೆ ಕಲ್ಲು ಬಂಡೆಯೊಂದು ಬಿದ್ದ ಕಾರಣ, ರೈಲು ಹಳಿ ತಪ್ಪಿದೆ. ರತ್ನಗಿರಿ ಜಿಲ್ಲೆಯ …
Read More »ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ 31ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಏರಿಕೆ ಮಾಡಿವೆ. ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.45ಕ್ಕೆ ಏರಿಕೆಯಾಗಿದ್ದು, …
Read More »ವ್ಯಾಕ್ಸಿನ್ ಪಡೆಯದ ಆಟೋ ಚಾಲಕರು ಆಟೋವನ್ನು ರಸ್ತೆಗಿಳಿಸುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ವಿಜಯಪುರ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು ಆಟೋಗಳನ್ನ ರಸ್ತೆಗೆ ಇಳಿಸುವ ಹಾಗಿಲ್ಲ. ಇನ್ನು ಈವರೆಗೂ ವ್ಯಾಕ್ಸಿನ್ ಪಡೆಯದ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುವ ಹಾಗಿಲ್ಲ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನೀಲ್‍ಕುಮಾರ್ ಖಡಕ್ ನಿರ್ಧಾರಕ್ಕೆ ಮುಂದಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕಟ್ಟಡ ಕಾರ್ಮಿಕರು ಕೇಳುತ್ತಿಲ್ಲ. ನಾವು ಆರೋಗ್ಯವಾಗಿದ್ದೀವಿ ವ್ಯಾಕ್ಸಿನ್ ಯಾಕೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಗರಂ ಆಗಿರುವ ಡಿಸಿ ಸುನೀಲ್‍ಕುಮಾರ್, …
Read More »ನಡು ರಸ್ತೆಯಲ್ಲಿ ಡೀಸೆಲ್ ಲಾರಿ ಪಲ್ಟಿ : ಬಕೆಟ್, ಪಾತ್ರೆ ಹಿಡಿದು ಮುಗಿಬಿದ್ದ ಜನರು.!
ದಾವಣಗೆರೆ : ಇಂದು ಡೀಸೆಲ್ ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಡೀಸೆಲ್ ತುಂಬಿದ ಲಾರಿ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಲಾರಿಯಿಂದ ಡೀಸೆಲ್ ಸೋರಿಕೆಯಾಗುತ್ತಲೇ ಮುಗಿಬಿದ್ದ ಜನರು ಪಾತ್ರೆ, ಬಕೆಟ್ …
Read More »