Breaking News

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ವಿ.ಸುನೀಲ್‌ ಕುಮಾರ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …

Read More »

ದೇವನಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳ ದಾಳಿ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

ದೇವನಹಳ್ಳಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು (ಅ.9) ಬೆಳಿಗ್ಗೆ 16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ 6 ಕ್ಕೂ ಅಧಿಕ ನಾಯಿಗಳು ಏಕಾಏಕಿ ಬಾಲಕಿ ಮೇಲೆ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ …

Read More »

ಬಿಬಿಎಂಪಿ ಯಡವಟ್ಟಿಗೆ 9 ವರ್ಷದ ಬಾಲಕ ಬಲಿ

ಬೆಂಗಳೂರು: ನಿರ್ವಹಣೆ ಇಲ್ಲದ ಬಿಬಿಎಂಪಿ ಪಾರ್ಕ್‌ನ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟಿ.ದಾಸರಹಳ್ಳಿಯ ಮಲ್ಲಸಂದ್ರದ 13 ನೇ ವಾರ್ಡ್ನ ಕೆಂಪೇಗೌಡ ಪಾರ್ಕ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು 9 ವರ್ಷದ ಪ್ರತಾಪ್ ಎಂದು ಗುರುತಿಸಲಾಗಿದೆ. ಈತ ಗಾರ್ಮೆಂಟ್ಸ್ ನೌಕರ ರುದ್ರಮುನಿ ಹಾಗೂ ತಾಯಿ ಕಾಂತಮಣಿ ದಂಪತಿಯ ಪುತ್ರ. ಮಳೆಯಿಂದಾಗಿ ಪಾರ್ಕ್‌ನ ತಗ್ಗು ಪ್ರದೇಶದಲ್ಲಿ ನಿಂತಿದ್ದ ನೀರಿನಿಂದ ಅವಘಡ ಸಂಭವಿಸಿದ್ದು, ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಪಾರ್ಕ್ …

Read More »

ಕಲಬುರಗಿ: 340 ಕೆ.ಜಿ ಗಾಂಜಾ ವಶ; ಮೂವರ ಬಂಧನ

ಕಲಬುರಗಿ: ಆಂಧ್ರಪ್ರದೇಶದ ಧರ್ಮಾಚಲಂನಿಂದ ನಗರ ತಂದ 340 ಕೆಜಿ ತೂಕದ ಕಾಂಜಾವನ್ನು ನಗರ ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಗರ ಪೊಲೀಸ್‌ ಆಯುಕ್ತಾಲಯದ ಸೈಬರ್‌ ಅಪರಾಧ ಮತ್ತು ಮಾದಕದ್ರವ್ಯ ನಿಗ್ರಹ ಠಾಣೆ (ಸಿಇಎನ್) ಪೊಲೀಸರು, ವಾಹನ ಜಪ್ತಿ ಮಾಡಿದರು. ಮಹಾರಾಷ್ಟ್ರದ ಲಾತೂರ ಮೂಲದ ಅಕ್ರಮ ಇನಾಮದಾರ, ಸುಮೇರ್ ಇನಾಮದಾರ್ ಹಾಗೂ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮೋಹನ್ ಮೇತ್ರೆ ಎಂಬುವರನ್ನು …

Read More »

ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!

ಬಳ್ಳಾರಿ: ಶಾಲಾ ಕಾಲೇಜಿನ ಮಕ್ಕಳೇ ಹೆಚ್ಚಾಗಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಓರ್ವಾಯಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ‌. ಓರ್ವಾಯಿ ಗ್ರಾಮದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್​ನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ ಚಾಲಕನಿಗೆ ನಿಯಂತ್ರಿಸುವಲ್ಲಿ ಸಮಸ್ಯೆಯಾಗಿ, ಬಸ್​ ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ನುಗ್ಗಿತು. ಗದ್ದೆಯು ತಗ್ಗಿನಲ್ಲಿದ್ದರೂ …

Read More »

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು

ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …

Read More »

ನಿಲ್ಲದ IT ಬೇಟೆ.. ಬೆಳಗಾವಿಯ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್

ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ಇಂದು ಕೂಡ ದಾಳಿ ಕಂಟಿನ್ಯೂ ಆಗಿದ್ದು ಜಿಲ್ಲೆಯ ಉದ್ಯಮಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಜಿಲ್ಲೆಯ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ 16 ಜನ ಆದಾಯ ತೆರಿಗೆ ಅಧಿಕಾರಿಗಳ …

Read More »

ಪೊಲೀಸರ ಸೋಗಿನಲ್ಲಿ ಬಂದು ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿ ಅಂದರ್​

ತುಮಕೂರು: ಪೊಲೀಸ್​ ಅಧಿಕಾರಿಯೆಂದು ಹೇಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಅಮೃತೂರು ಠಾಣೆ ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ನಾಮಮಂಗಲ ತಾಲೂಕು ದೊಡ್ಡನಾಗನಹಳ್ಳಿ ಗ್ರಾಮದ ನಿವಾಸಿ ಪ್ರದೀಪ @ ಕೆಂಚ (37) ಬಂಧಿತ ಆರೋಪಿ. ಕಳೆದ ಆಗಸ್ಟ್ 1 ರಂದು ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿ ಮಹಿಳೆಯೋರ್ವರನ್ನ ಸಾಹೇಬ್ರು ನಿನ್ನ ಕರಿತಿದ್ದಾರೆ ಬಾ ಅಂತಾ ಹೇಳಿ ಕುಣಿಗಲ್ ತಾಲೂಕಿನ ಶ್ರೀನಿವಾಸ ದೇವರ ಬೆಟ್ಟಕ್ಕೆ ಕರೆದೊಯ್ದು.. ಈ ವೇಳೆ ಮಹಿಳೆಗೆ ಚಾಕು …

Read More »

ವಿಜಯೇಂದ್ರ ಸಹಪಾಠಿ ಸೇರಿ ಹಲವರ ಮನೆಗಳಲ್ಲಿ ಶೋಧ: ಅಪಾರ ದಾಖಲೆಗಳ ವಶ

ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಭ್ರಷ್ಟಾಚಾರ, ತೆರಿಗೆ ವಂಚನೆ ಮತ್ತು ಅಕ್ರಮ ಹಣದ ವಹಿವಾಟು ಕುರಿತು ಶುಕ್ರವಾರವೂ ಶೋಧ ಮುಂದುವರಿಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಸಚಿವಾಲಯ ಸಿಬ್ಬಂದಿಯಾಗಿದ್ದ ಆಯನೂರು ಉಮೇಶ್‌ ನಿವಾಸದಿಂದ ಜಲ ಸಂಪನ್ಮೂಲ ಇಲಾಖೆಯ ಅಧೀನದ ನೀರಾವರಿ ನಿಗಮಗಳ ಕಾಮಗಾರಿಗಳ ಟೆಂಡರ್‌ಗಳಿಗೆ ಸಂಬಂಧಿಸಿದ ಅಪಾರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಉಮೇಶ್‌, ದೀರ್ಘಕಾಲದಿಂದ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ನಿಯೋಜನೆ …

Read More »

ಭ್ರಷ್ಟಾಚಾರ ಆರೋಪ ಕೇಸ್​ಗೆ ಟ್ವಿಸ್ಟ್ ; ತನಿಖೆ ಚುರುಕುಗೊಳಿಸಿದ ACB

ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪರಣ್ಣ ಮುನವಳ್ಳಿ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಕಾನೂನು ಕುಣಿಕೆ ಸದ್ದಿಲ್ಲದೇ ಸಿದ್ಧವಾಗುತ್ತಿದೆ. ರಾಜ್ಯದಾದ್ಯಂತ ಎಸಿಬಿ ಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ನ್ಯೂಸ್ ಫಸ್ಟ್ ಕೂಡಾ ತನಿಖೆಗೆ ಸಹಕರಿಸುತ್ತಿದ್ದು ಪೂರಕ ದಾಖಲೆಗಳನ್ನು ಎಸಿಬಿ ನೀಡಿದೆ. ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿಯ ಎಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ರಾಜ್ಯದ ನಾಲ್ಕು ಕಡೆ ಸಚಿವೆ ಶಶಿಕಲಾ ಜೊಲ್ಲೆ …

Read More »