ಮಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಸೂಚಿಸಿದರೂ ಊರಿನ ಬಹು ಜನೋಪಯೋಗಿ ಬೇಡಿಕೆಯೊಂದು ಈಡೇರಿಲ್ಲ! ಆದರೆ ತಮ್ಮ ಗುರಿಯಿಂದ ವಿಮುಖರಾಗದ ಗ್ರಾಮಸ್ಥರು ತಾವೇ, ಸ್ವಂತ ಖರ್ಚಿನಲ್ಲಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ! ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಬಳಿಯ ಜನ ಇಂತಹ ವಿಪರ್ಯಾಸ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ. ಇದು ಸಚಿವ ಎಸ್ ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿದೆ! ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ …
Read More »ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ
ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್‍ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …
Read More »ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ
ರಬಕವಿ-ಬನಹಟ್ಟಿ: ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿದ್ದ ಗೋದಾಮಿನ ಮೇಲೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 64,650 ರು ಮೌಲ್ಯದ 4310 ಕಿಲೋ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುಲಹಳ್ಳಿ ಗ್ರಾಮದ ಖಾಸಿಂಸಾಬ್ ಸಂತಿ ಎಂಬಾತನ ಜಮೀನಿನ ಪತ್ರಾಸ್ ಶೆಡ್‌ನಲ್ಲಿ ಶೇಖರಿಸಿಟ್ಟ 4310 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರಲ್ಲದೇ ಖಾಸೀಂಸಾಬ ಸಂತಿ ಹಾಗೂ ಮುಬಾರಕ ಬಾರಿಗಡ್ಡಿ ಅವರನ್ನು ಅಕ್ರಮ ಅಕ್ಕಿ …
Read More »‘ನನ್ನ ಮನಸ್ಸಿಗೆ ನೋವುಂಟು ಮಾಡಿದವರನ್ನು ಮನೆಗೆ ಕಳುಹಿಸದೆ ಬಿಡುವುದಿಲ್ಲ’: ರಮೇಶ ಜಾರಕಿಹೊಳಿ
ಬೆಳಗಾವಿ: ‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಜ’ ಎಂದಿರುವ ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ, ‘ನನ್ನ ಮನಸ್ಸಿಗೆ ನೋವುಂಟು ಮಾಡಿದವರನ್ನು ಮನೆಗೆ ಕಳುಹಿಸದೆ ಬಿಡುವುದಿಲ್ಲ’ ಎಂದು ಗುಡುಗಿದರು. ಮೈಸೂರಿನಲ್ಲಿ ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಮರಳಿದ ಅವರು ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದರು. ‘ಮುಂಬೈಗೆ ಹೋಗಿದ್ದರಲ್ಲಿ ರಾಜಕಾರಣವಿದೆ. ಅದರಲ್ಲಿ ಮುಚ್ಚು ಮರೆ ಏನಿಲ್ಲ. ಆದರೆ, ಸುತ್ತೂರು ಮಠಕ್ಕೆ ಹೋಗಿದ್ದರಲ್ಲಿ ರಾಜಕಾರಣವಿಲ್ಲ. ಪೂರ್ವಾಶ್ರಮದ ತಾಯಿ ನಿಧನರಾದ್ದರಿಂದ ಶ್ರೀಗಳನ್ನು …
Read More »ಬಿಜೆಪಿ ಸೇರಲು ₹10 ಲಕ್ಷ ಪಾವತಿ: ಕಲೈ ಅರಸಿ ಆರೋಪ
ಹಾಸನ: ‘ಜೆಡಿಎಸ್ ತೊರೆದು ಬಿಜೆಪಿ ಸೇರುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ತಮಗೆ ₹ 25 ಲಕ್ಷ ಆಮಿಷವೊಡ್ಡಿ, ಮುಂಗಡವಾಗಿ ₹10 ಲಕ್ಷ ನಗದು ನೀಡಿದ್ದಾರೆ’ ಎಂದು ಅರಸೀಕೆರೆ ನಗರಸಭೆ ಎರಡನೇ ವಾರ್ಡ್ ಸದಸ್ಯೆ ಕಲೈ ಅರಸಿ ಆರೋಪಿಸಿದರು. ಹತ್ತು ಲಕ್ಷ ರೂಪಾಯಿ ಹಣದ ಬಂಡಲ್‌ನೊಂದಿಗೆ ಶಾಸಕರಾದ ಎಚ್.ಡಿ.ರೇವಣ್ಣ, ಕೆ.ಎಂ.ಶಿವಲಿಂಗೇಗೌಡ ಜತೆ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸೇರುವಂತೆ ಒಂದು ವಾರದಿಂದ ಒತ್ತಡ ಇತ್ತು. ಶುಕ್ರವಾರ ರಾತ್ರಿ …
Read More »ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣ
ಬೆಂಗಳೂರು, ಜೂನ್ 25; ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣವಾಗಲಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. 9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆ. 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ …
Read More »ಕ್ವೇಕರ್‌ನಿಂದ ಬೆಂಗಳೂರಿನ ಆಸ್ಪತ್ರೆಗಳಿಗೆ 10,000 ಓಟ್‌ಮೀಲ್ಸ್ ವಿತರಣೆ
ಬೆಂಗಳೂರು, ಜೂ 24, 2021: ಸ್ಥಳೀಯ ಆರೋಗ್ಯ ಸಮುದಾಯದ ಸ್ಫೂರ್ತಿ, ಧೈರ್ಯ ಮತ್ತು ಬದ್ಧತೆಗೆ ಗೌರವ ಸೂಚಿಸಲು ಮುಂದಾಗಿರುವ ಕ್ವೇಕರ್, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ 10,000 ಓಟ್‌ಮೀಲ್ಸ್ ಅನ್ನು ವಿತರಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಉಪಸ್ಥಿತಿಯಲ್ಲಿ ಓಟ್‌ಮೀಲ್‌ಗಳನ್ನು ಆಸ್ಪತ್ರೆಗೆ ವಿತರಿಸಲಾಯಿತು. ವೈದ್ಯರು, ದಾದಿಯರು ಮತ್ತು ಸಂಪೂರ್ಣ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಸಮುದಾಯದ ಪ್ರತಿಯೊಬ್ಬ ಸದಸ್ಯರು ಹಲವಾರು ಕುಟುಂಬಗಳನ್ನು ಸುರಕ್ಷಿತವಾಗಿಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. …
Read More »ಸರ್ಕಾರದ ವಿರುದ್ಧ ಗಂಭೀರ ಆರೋಪ; ರಾಜ್ಯಪಾಲರಿಗೆ ಎಚ್‌ಡಿಕೆ ಪತ್ರ
ಬೆಂಗಳೂರು, ಜೂನ್ 25; ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಹಲವು ಬಾರಿ ಅವರು ಸರ್ಕಾರವನ್ನು ಅಧಿವೇಶನ ಕರೆಯಲು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಕೋವಿಡ್ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ಕನ್ನಡ, ಕನ್ನಡಿಗ, ಕರ್ನಾಟಕದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕು ಎಂದು …
Read More »ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್!
ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ …
Read More »ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಮೇಶ ಜಾರಕಿಹೊಳಿ
ಮೈಸೂರು: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ, ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷ ವಿಮಾನದಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ಅವರು ನೇರವಾಗಿ ಮಠಕ್ಕೆ ತೆರಳಿದರು. ಸಹೋದರ ಲಖನ್ ಜಾರಕಿಹೊಳಿ ಜತೆಗಿದ್ದರು. ಮಠಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ‘ಸ್ವಾಮೀಜಿ ಅವರ ಪೂರ್ವಾಶ್ರಮದ ತಾಯಿ ಈಚೆಗೆ ನಿಧನರಾಗಿದ್ದು, ಸೌಜನ್ಯದ ಭೇಟಿಗೆ …
Read More »