ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ …
Read More »ಮಂತ್ರಿಗಿರಿಗೆ ಮುಹೂರ್ತ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮವಾಗಿದ್ದು, ಬುಧವಾರ ಅಪರಾಹ್ನ 2.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಬಗ್ಗೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೇ ನೂತನ ಸಚಿವರಾಗುವ ಶಾಸಕರಿಗೆ ಮಾಹಿತಿ ರವಾನೆಯಾಗಿದೆ ಎನ್ನಲಾಗುತ್ತಿದೆ. 20ರಿಂದ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಅಳೆದು ತೂಗಿ …
Read More »ಮಕ್ಕಳಿಗೆ ದಿನಾಲೂ ಪಾಠ – ಕೊಪ್ಪಳದ ಯುವಕರ ಶಿಕ್ಷಣ ಪ್ರೇಮ
ಕೊಪ್ಪಳ: ಕೊರೊನಾದಿಂದಾಗಿ ಶಾಲೆಗಳು ಬಂದ್ ಆಗಿವೆ. ಹೀಗಾಗಿ ಓಣಿಯಲ್ಲಿ ಆಟವಾಡುತ್ತಾ ಕಾಲಹರಣ ಮಾಡುವ ಮಕ್ಕಳಿಗೆ ನಿರಂತರ ಶಿಕ್ಷಣ ನೀಡುತ್ತಿರುವ ಕೊಪ್ಪಳ ಯುವಕರಿಬ್ಬರು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊರನಾದಿಂದಾಗಿ ಪ್ರಾಥಮಿಕ ಶಾಲೆಗಳಂತೂ ಆರಂಭವಾಗಿಲ್ಲ. ಪ್ರೌಢ ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ನೀಡುತ್ತಿದ್ದಾರೆ. ಈ ವರ್ಷ ಒಂದನೆಯ ತರಗತಿಯಿಂದಲೇ ಆನ್ಲೈನ್ ಶಿಕ್ಷಣ ನೀಡಲು ಮುಂದಾಗಿದ್ದಾರೆ. ಆದರೆ ಬಡವರ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು ಸಾಧ್ಯವಿಲ್ಲ, ಶಾಲೆಯಿಂದ ದೂರವಾದ ಮಕ್ಕಳು …
Read More »ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ- ಯಾರಿಗೆ ಮಂತ್ರಿಗಿರಿ?
ಬೆಂಗಳೂರು: ಅಂತೂ ಇಂತೂ ಸಂಪುಟ ಯೋಗ ಕೂಡಿ ಬಂದಿದ್ದು, ಬುಧವಾರ ಮಧ್ಯಾಹ್ನ 2:15ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮುಖ್ಯಕಾರ್ಯದರ್ಶಿಯಿಂದ ಶಿಷ್ಟಾಚಾರ ವಿಭಾಗಕ್ಕೆ ಸಹ …
Read More »ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ …
Read More »2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ
ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು …
Read More »ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದ
ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯ ರಾಯಭಾಗದಲ್ಲಿ ನಡೆದಿದೆ. ಆರೋಪಿ ಅಮೀರ್ ದಾರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿ ಪೀಡಿಸುತ್ತಿದ್ದ. ಯುವತಿ ನಿರಾಕರಿಸಿದ್ದಾಳೆ. ಟ್ಯೂಷನ್ ಮುಗಿಸಿ ಶಿಕ್ಷಕರ ಮನೆಯಿಂದ ವಾಪಸ್ ಅಗುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Read More »ಯಡಿಯೂರಪ್ಪನ್ನು ತೆಗೆದು ಹಾಕಿದ್ದು ವಯಸ್ಸಾಗಿದೆ ಎಂದಲ್ಲ; ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ತೆಗೆದ್ರು: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ವಯಸ್ಸು ಆಗಿದೆ ಎಂದು ತೆಗೆದಿಲ್ಲ. ಬದಲಾಗಿ ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು. ಅಪ್ಪ-ಮಗ ಜೋಡಿ ಲೂಟಿ ಮಾಡಿದರು ಅಂತಾ ತೆಗೆದರು ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಐಟಿ, ಇಡಿ ಇದೆ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದಾರೆ. ಆರ್ಟಿಜಿಎಸ್ ಮೂಲಕ ಯಡಿಯೂರಪ್ಪ ಹಣ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ಮದುವೆ ಊಟ ಮಾಡೇ ಇಲ್ಲ. …
Read More »ಆಟೋ ಗ್ಯಾಸ್ ದರ ಹೆಚ್ಚಳ; ಆಟೋ ಮೀಟರ್ ಮಿನಿಮಮ್ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ
ಬೆಂಗಳೂರು: ಆಟೋ ಗ್ಯಾಸ್ ದರ ಏರಿಸಿರುವ ಸರ್ಕಾರದ ನಡೆಗೆ ಆಟೋ ಚಾಲಕರು ಮತ್ತು ಮಾಲೀಕರ ಅಸೋಸಿಯೇಷನ್ಗಳು ಖಂಡನೆ ವ್ಯಕ್ತಪಡಿಸಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು ಹೆಚ್ಚಿಸಲು ಆಗ್ರಹಿಸಿವೆ. ಆಟೋ ಗ್ಯಾಸ್ ದರ (Auto Gas Rate) ಏರಿಕೆ ಮಾಡಿರುವುದು ಹೊರೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ, ಆಟೋ ಮೀಟರ್ ಮಿನಿಮಮ್ ದರ ಏರಿಸಬೇಕು ಎಂದು ಸಹ ಅಸೋಸಿಯೇಶನ್ ಆಗ್ರಹಿಸಿದೆ. ಆಟೋ ಮೀಟರ್ ಕನಿಷ್ಠ ದರವನ್ನು 25 ರೂಪಾಯಿಯಿಂದ 30 ರೂಪಾಯಿಗೆ ಏರಿಕೆ ಮಾಡುವಂತೆ …
Read More »ಬಿಎಸ್ವೈ ನಿವಾಸದಲ್ಲಿ ಇಂದೂ ಮುಂದುವರೆದ ಸಚಿವಾಕಾಂಕ್ಷಿಗಳ ಲಾಬಿ
ಬೆಂಗಳೂರು,ಆ.3- ತಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸ ಕಾವೇರಿ ನಿವಾಸಕ್ಕೆ ಸಚಿವ ಆಕಾಂಕ್ಷಿಗಳ ದಂಡು ಇಂದೂ ಕೂಡ ಧಾವಿಸಿ ಲಾಬಿ ಮುಂದುವರೆಸಿದೆ. ಬೆಳಗ್ಗೆ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಕಾವೇರಿ ನಿವಾಸಕ್ಕೆ ಆಗಮಿಸಿ ಸುಮಾರು ಹೊತ್ತು ಚರ್ಚೆ ನಡೆಸಿ ಅಲ್ಲಿಂದ ನಿರ್ಗಮಿಸಿದರು. ಆದರೆ ಅವರು ಸಂಪುಟಕ್ಕೆ ತೆಗೆದುಕೊಳ್ಳುವಂತೆ ತಮ್ಮ ತಂದೆಯ ಬಳಿ ಮನವಿ ಮಾಡಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಲಿಲ್ಲ. ಇನ್ನು ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಗಂಗಾವತಿಯ …
Read More »