ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಅವಧಿಯಲ್ಲಿ ಪ್ರಮುಖ ಸ್ಥಾನಗಳಿಗೆ ನೇಮಕವಾಗಿದ್ದ ವಿವಿಧ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಕಚೇರಿಯ ನಾಲ್ವರು, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಕಚೇರಿಯ ಎಂಟು ಮಂದಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರ ಕಚೇರಿಯ ಐವರು, ಮಾಧ್ಯಮ ಸಂಯೋಜಕರ ಕಚೇರಿಯ ಐವರು, ಕಾನೂನು ಸಲಹೆಗಾರರ ಕಚೇರಿಯ ಮೂವರು, ಸಿಎಂ ಇ-ಆಡಳಿತ ಸಲಹೆಗಾರರ ಕಚೇರಿಯ ಮೂವರು, ಸಲಹೆಗಾರರ ಕಚೇರಿಯ …
Read More »ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಸೀಲ್: ನೂತನ ಸಚಿವರಿಗಾಗಿ ಕಾಯುತ್ತಿವೆ ವಿಧಾನಸೌಧ-ವಿಕಾಸ ಸೌಧ ಕೊಠಡಿಗಳು!
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವಿಧಾನ ಸೌಧ ಮತ್ತು ವಿಕಾಸ ಸೌಧಗಳಲ್ಲಿನ ಸಚಿವರ ಮತ್ತು ಅವರ ಕಾರ್ಯದರ್ಶಿಗಳ ಕೊಠಡಿಗಳಿಗೆ ಬೀಗ ಹಾಕಲಾಗಿದೆ, ಸೋಮವಾರ ಎಲ್ಲಾ ಕೊಠಡಿಗಳನ್ನು ಸೀಲ್ ಮಾಡಲಾಗಿದೆ. ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಕಳೆದುಕೊಂಡು ಜುಲೈ 23 2019 ರಲ್ಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಕೊಠಡಿಗಳನ್ನು ಸೀಲ್ ಮಾಡಲಾಗಿತ್ತು. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಡತಗಳನ್ನು ಮತ್ತು ಕಂಪ್ಯೂಟರ್‌ಗಳಂತಹ ಸಾಧನಗಳನ್ನು …
Read More »ಕೊರೋನಾ ಕಡಿಮೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಮೂರನೇ ಅಲೆ ಉಲ್ಬಣದ ಬಗ್ಗೆ ತಜ್ಞರ ಮಾಹಿತಿ
ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗ ಕಡಿಮೆಯಾಗುತ್ತದೆ. ಲಸಿಕೆ ಬಂದ ನಂತರ ಸೋಂಕು ಇಳಿಮುಖವಾಗುತ್ತಿದೆ ಎಂದುಕೊಂಡವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಕ್ಟೋಬರ್ ನಲ್ಲಿ ಕೊರೋನಾ ಮೂರನೇ ಅಲೆ ಉಲ್ಬಣವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಎರಡನೇ ಅಲೆ ತೀವ್ರತೆ ಕಡಿಮೆಯಾದ ನಂತರ ಅನೇಕ ರಾಜ್ಯಗಳಲ್ಲಿ ಸೋಂಕು ಏರುಗತಿಯಲ್ಲಿ ಸಾಗುತ್ತಿದೆ. ಈ ತಿಂಗಳಲ್ಲಿ ಮೂರನೇ ಅಲೆ ಏಳಬಹುದಾದ ಸಾಧ್ಯತೆ ಇದ್ದು, ಅಕ್ಟೋಬರ್ ನಲ್ಲಿ ಕೊರೋನಾ ಮೂರನೆಯ ಉಲ್ಬಣವಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ …
Read More »ಪ್ರವಾಹ ಪೀಡಿತ ಉತ್ತರ ಕನ್ನಡಕ್ಕೆ ಮಾಜಿ ಸಿಎಂ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಕಾರವಾರ: ಜುಲೈ ತಿಂಗಳಿನ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಪ್ರತೀ ವರ್ಷ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಎದುರಾಗುತ್ತದೆ. ಮುನ್ಸೂಚನೆ ನೀಡದೆ ಏಕಾಏಕಿ ಕದ್ರಾ ಡ್ಯಾಂನಿಂದ ನೀರು ಬಿಡುತ್ತಾರೆ. ಗಂಗಾವಳಿ ನದಿ ದಡದಲ್ಲಿರುವ ಜನರ …
Read More »ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸುತ್ತಿರುವುದು.
ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗದಾಡಿ ಅವರ ನೇತ್ರತ್ವದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸಿದರು. ಕಳೆದ 2019ನೇ ಸಾಲಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಮನೆಗಳಿಗೆ ಇನ್ನೂವರೆಗೂ ಪರಿಹಾರ ದೊರಕಿಲ್ಲವಲ್ಲದೇ ಸರ್ವೆ ಮಾಡುವಲ್ಲಿ ಅಧಿಕಾರಿಗಳು ತಾರ್ಯತ್ಯಮ ಮಾಡಿದ್ದಾರೆಂದು ಆರೋಪಿಸಿದರು. ಕಲಾರಕೊಪ್ಪ, ಮೆಳವಂಕಿ ಗ್ರಾಮದಲ್ಲಿ ಮೂರು ಸಲ ಸರ್ವೆ ಕಾರ್ಯವನ್ನು …
Read More »20 ಮಂದಿಯ ಹೆಸರು ಫೈನಲ್, ಆ.4 ಸಂಪುಟ ವಿಸ್ತರಣೆ ಫಿಕ್ಸ್..?
ಬೆಂಗಳೂರು, ಆ.2- ಬಹುನಿರೀಕ್ಷಿತ ಸಚಿವ ಸಂಪುಟ ರಚನೆ ದಿನಾಂಕ ಇಂದು ಸಂಜೆ ನಿಗದಿಯಾಗು ವುದು ಬಹುತೇಕ ಖಚಿತವಾಗಿದ್ದು, ಬುಧವಾರ ಪ್ರಮಾಣವಚನ ನಡೆಯುವ ಸಾಧ್ಯತೆಗಳಿವೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರ್ಜಾ ಬೊಮ್ಮಾಯಿ ಅವರು ಇಂದು ಬೆಳಗ್ಗೆ 9.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಬೇಕಿತ್ತಾದರೂ ಅದು ಸಂಜೆಗೆ ಮುಂದೂಡಲ್ಪಟ್ಟಿದೆ. ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿ ಸಂಪುಟ ರಚನೆ ಕುರಿತಂತೆ ಸಂಭವನೀಯರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬುಧವಾರ …
Read More »‘ಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ರೇಣುಕಾಚಾರ್ಯ ಹೆಸರು’: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಕಾರವಾರ; ಬಿಜೆಪಿಗೆ ಸಂಸ್ಕೃತಿಯೇ ಇಲ್ಲ, ಸಿಡಿ ಹಗರಣದಲ್ಲಿ ಎಂಪಿ ರೇಣುಕಾಚಾರ್ಯ ಹೆಸರಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾರವಾರ ಪ್ರವಾಸದಸಲ್ಲಿರುವ ಸಿದ್ದರಾಮಯ್ಯ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ವಿರುದ್ಧ ಹರಿಹಾಯ್ದರು. ‘ಭಾರತೀಯ ಜನತಾ ಪಾರ್ಟಿಯವರಂಥ ಸಂಸ್ಕೃತಿ ಇಲ್ಲದ ಜನ ಬೇರೆ ಯಾರೂ ಇಲ್ಲ. ಅವರು ಕಳ್ಳನ ಮನಸು ಹುಳ್ಳುಳುಗೆ ಎಂಬಂತೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಂದು ಹೇಳಿದರು. ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ತಮ್ಮ …
Read More »ದೆಹಲಿಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ
ನವದೆಹಲಿ:ದೆಹಲಿಯಲ್ಲಿ 10 ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗೆ ಲಾಬಿ.ಹಿರಿಯ ಸಚಿವರಿಗೆ ಟೆನ್ಷನ್ ಶುರುವಾಗಿದೆ.ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂಪುಟದಿಂದ ಹಿರಿಯ ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ.ಅಶೋಕ್, ಉಮೇಶ್ ಕತ್ತಿ ಬಳಿಕ ಈಗ ಲಕ್ಷ್ಮಣ್, ಸವದಿ, ಸಿಸಿ ಪಾಟೀಲ್ ಹಾಗೂ ರಾಮುಲು ದೆಹಲಿಗೆ ತೆರಳಲಿದ್ದಾರೆ. ಸತೀಶ್ ರೆಡ್ಡಿ ವಲ್ಯಾಪುರೆ ಸಹಿತ ಹಲವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ.ಸಂಪುಟದಿಂದ ನಮ್ಮನ್ನೆಲ್ಲಿ ಕೈಬಿಡುತ್ತಾರೋ ಎಂಬ ಆತಂಕದಲ್ಲಿ ಹಲವಾರು ಸಚಿವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ.ಹೊಸ ಶಾಸಕರು …
Read More »ಯಡಿಯೂರಪ್ಪರನ್ನು ನೆನೆದು ಭಾವುಕರಾದ ರೇಣುಕಾಚಾರ್ಯ?
ದಾವಣಗೆರೆ: ಮಾಜಿ ಸಿಎಂ ಯಡಿಯೂರಪ್ಪ ಅವರು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಗೆ ಸಾವಿರಾರು ಕೋಟಿ ನೀಡಿದ್ದಾರೆ ಎಂದು ಹೇಳುತ್ತಲೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭಾವುಕರಾಗಿದ್ದಾರೆ. ಹೊನ್ನಾಳಿ ನಗರದ ಸಾಮರ್ಥ್ಯ ಸೌಧದಲ್ಲಿ ಅತಿವೃಷ್ಟಿಯಿಂದಾದ ಹಾನಿಯ ಬಗ್ಗೆ ನಡೆಯುತ್ತಿರುವ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ರೇಣುಕಾಚಾರ್ಯ ಅವಳಿ ತಾಲ್ಲೂಕಿನ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರು ಸಾವಿರಾರು ಕೋಟಿ ಅನುದಾನ ನೀಡಿದ್ದರಿಂದಲೇ ತಾಲ್ಲೂಕು ಅಭಿವೃದ್ಧಿ ಕಂಡಿದೆ ಎಂದು ಹೇಳುತ್ತಲೆ ಭಾವುಕರಾದರು. ಅವಳಿ …
Read More »ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ
ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್ …
Read More »