Breaking News

ಅತ್ಯಾಚಾರ ಯುವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಹೇಳಿಕೆ ಹಿಂಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅತ್ಯಾಚಾರ ಯುವತಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಯನ್ನು ವಾಪಸ್ಸು ಪಡೆದಿರುವುದಾಗಿ ಹೇಳಿದ್ದಾರೆ. ನಗರದ ಪರಪ್ಪನ ಅಗ್ರಹಾರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ, ನನಗೂ ಆ ಹೇಳಿಕೆ ನೀಡಿದ ಬಳಿಕ ತುಂಬಾ ನೋವಾಗಿದೆ, ಬೊಮ್ಮಾಯಿಯಯವರ ಸರ್ಕಾರ ಎಲ್ಲ ಹೆಣ್ಣು ಮಕ್ಕಳ ಪ್ರಾಣ ಮಾನ ಕಾಪಾಡುವ ಬದ್ಧತೆ ಹೊಂದಿದೆ, ಎಂದು ಹೇಳಿ ಹೇಳಿಕೆ ವಾಪಸ್ಸು ಪಡೆದಿರುವುದಾಗಿ …

Read More »

ಮೈಸೂರು ಪ್ರಕರಣದ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ಆಗಲಿದೆ : ಸಚಿವೆ ಜೊಲ್ಲೆ

ಮೈಸೂರು : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತಪ್ಪಿತಸ್ಥರನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಸಚಿವೆ ನಮ್ಮ ಸರಕಾರ ಈ ಕೇಸನ್ನು ಗಂಭೀರವಾಗಿ ಪರಿಗಣಿಸಿದೆ, ಶೀಘ್ರವೇ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ, ಅಲ್ಲದೆ ಹೆಣ್ಣು ಮಕ್ಕಳ ಸುರಕ್ಷತೆಗೆ ಇನ್ನೂ ಹೆಚ್ಚಿನ ಗಮನಹರಿಸಲಾಗುವುದು ಏನದು ಹೇಳಿದರು. ಬಳಿಕ ಮಾತನಾಡಿದ ಅವರು ನಾನು ಇನ್ನೂ ಎರಡು ದಿನ ಯಾರ ಜೊತೆಯೂ …

Read More »

ಕರಡಿ ಸಫಾರಿ ಮಾಡುವ ಮೂಲಕ ಪ್ರವಾಸಿಗರು ಕರಡಿಗಳನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು.

ಹೊಸಪೇಟೆ : ಹುಲಿ-ಸಿಂಹಗಳ ಸಫಾರಿಯಂತೆ ಇನ್ಮುಂದೆ ಕರಡಿ ಸಫಾರಿ ಮಾಡುವ ಮೂಲಕ ಪ್ರವಾಸಿಗರು ಕರಡಿಗಳನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು. ಹೌದು! ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡುವ ದೇಶ-ವಿದೇಶಿ ಪ್ರವಾಸಿಗರು, ತಾಲ್ಲೂಕಿನ ಕಮಲಾಪುರ ಸಮೀಪದ ದರೋಜಿ ಕರಡಿಧಾಮಕ್ಕೆ ಭೇಟಿ ನೀಡಿ, ಸಫಾರಿ ಮೂಲಕ ಕರಡಿಗಳ ಚಲನವಲನವನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು. ಏಷ್ಯಾ ಖಂಡದ ಮೊಟ್ಟಮೊದಲ ಕರಡಿಧಾಮದತ್ತ ಪ್ರವಾಸಿಗರನ್ನು ಸೆಳೆಯಲು ಅರಣ್ಯ ಇಲಾಖೆ ಹೊಸ ಪ್ರಯತ್ನ ನಡೆಸಿ. ಕರಡಿ ಸಫಾರಿ ಯೋಜನೆ ತಯಾರು ಮಾಡಿದೆ. ಹಂಪಿ …

Read More »

ಲವ್‌ ಯೂ ರಚ್ಚು’ ದುರಂತ: ಅಜಯ್‌ ರಾವ್‌ ಸೇರಿ ಚಿತ್ರತಂಡದ 6 ಮಂದಿಗೆ ಜಾಮೀನು

ರಾಮನಗರ: ‘ಲವ್‌ ಯೂ ರಚ್ಚು’ ಚಿತ್ರ ತಂಡದ ಆರು ಮಂದಿಗೆ ಇಲ್ಲಿನ ಜಿಲ್ಲಾ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿತು. ಚಿತ್ರದ ನಿರ್ದೇಶಕ ಶಂಕರ್, ನಿರ್ಮಾಪಕ ಗುರು ದೇಶಪಾಂಡೆ, ನಾಯಕ ಅಜಯ್‌ ರಾವ್‌, ಸಾಹಸ ನಿರ್ದೇಶಕ ವಿನೋದ್‌ಕುಮಾರ್, ಪ್ರೊಡಕ್ಷನ್‌ ಮ್ಯಾನೇಜರ್‌ ಫರ್ನಾಂಡೀಸ್‌ ಹಾಗೂ ಕ್ರೇನ್‌ ಚಾಲಕ ಮಹದೇವ ಅವರಿಗೆ ನ್ಯಾಯಾಧೀಶ ಸಿದ್ಧಲಿಂಗಪ್ರಭು ಜಾಮೀನು ನೀಡಿ ಆದೇಶಿಸಿದರು. ಇದೇ ತಿಂಗಳ 9ರಂದು ಬಿಡದಿಯ ಜೋಗರಪಾಳ್ಯ ಸಮೀಪ …

Read More »

ಎಸ್‌ಐ ಮೂತ್ರ ನೆಕ್ಕಿಸಿದ ಪ್ರಕರಣ ನಿರೀಕ್ಷಣ ಜಾಮೀನು ನಿರಾಕರಣೆ

ಬೆಂಗಳೂರು: ಪ್ರಕರಣವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನನ್ನು ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದಲ್ಲದೆ, ಮೂತ್ರ ನೆಕ್ಕಿಸಿದ ಆರೋಪ ಹೊತ್ತಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಆಗಿದ್ದ ಅರ್ಜುನ್‌ಗೆ ನಿರೀಕ್ಷಣ ಜಾಮೀನು ನೀಡಲು ಹೈಕೋರ್ಟಿನ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ಕುಮಾರ್‌ ಅವರ ಏಕ ಸದಸ್ಯ ನ್ಯಾಯಪೀಠ ನಿರಾಕರಿಸಿತು. ಆರೋಪಿಯ ಕೃತ್ಯ ಹೀನಾಯ ವಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ಜಾಮೀನು ನೀಡಲಾಗದು ಎಂದು ನ್ಯಾಯಪೀಠ ಹೇಳಿದೆ. ಎಸ್‌ಐ ವಿರುದ್ಧ …

Read More »

ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿ

ಬೆಳಗಾವಿ – ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿದ್ದಾರೆ. ಬಿಜೆಪಿ 55, ಕಾಂಗ್ರೆಸ್ 45, ಜೆಡಿಎಸ್ 11, ಆಮ್ ಆದ್ಮಿ 27, ಎಐಎಂಐಎಂ 7, ಉತ್ತಮ ಪ್ರಜಾಕೀಯ ಪಾರ್ಟಿ 1, ಎಸ್ ಡಿ ಪಿಐ 1 ಮತ್ತು ಪಕ್ಷೇತರರು 238 ಜನರು ಕಣದಲ್ಲಿದ್ದಾರೆ. for more details click the link New-doc-Aug-26-2021-9.12-PM

Read More »

ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

ಚಾಮರಾಜನಗರ: ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. – ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕು. ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ. ಹೀಗಾಗಿ …

Read More »

ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು. ಬಂಡೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಆದರೆ ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುತ್ತೇನೆ ಎನ್ನುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. …

Read More »

ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿ.

ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮಾಧ್ಯಮದವರ ಜೊತೆ ಮಾತನಾಡಿ, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ …

Read More »

ಯೋಗಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ – ಉದ್ದವ್ ವಿರುದ್ಧ ದೂರು

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಈಗ ಬಿಜೆಪಿ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ. ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವಾ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ. ಮೂರು ದೂರುಗಳು ನಾಸಿಕ್‌ನಲ್ಲಿ ದಾಖಲಾಗಿದ್ದು, ಪೊಲೀಸರು ದೂರು ದಾಖಲಾಗಿದ್ದನ್ನು ಖಚಿತಪಡಿಸಿದ್ದಾರೆ. 2018ರಲ್ಲಿ ಶಿವಾಜಿ …

Read More »