ಬೆಂಗಳೂರು: ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ …
Read More »ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್
ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ …
Read More »SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ಮಾಹಿತಿ
ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎರಡು ದಿನದಲ್ಲಿ ಆರು ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ಪ್ರಥಮ ಭಾಷೆ ವಿಷಯಗಳ ಗರಿಷ್ಠ ಅಂಕಗಳನ್ನು 125 ಅಂಕಗಳಿಗೆ(25 ಆಂತರಿಕ ಅಂಕಗಳು ಸೇರಿ) ನಿಗದಿ ಮಾಡಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪ್ರತಿ ವಿಷಯಕ್ಕೆ 40 ಅಂಕಗಳು ಮುಂದುವರೆಯಲಿದೆ. ಮೊದಲು ಎಲ್ಲ ವಿಷಯಗಳಿಗೆ 40 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದ್ದು, ಪ್ರಥಮ …
Read More »ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ
ಬೆಂಗಳೂರು: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಳೆ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಭಾಗಶಃ ಹಾನಿಯಾಗಿರುವ ಮನೆ 1 ಲಕ್ಷ ರೂ., ನೀರು ನುಗ್ಗಿ ಹಾನಿಯಾಗಿದ್ದರೆ 10 ಸಾವಿರ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು …
Read More »ಮಳೆಯಲ್ಲೇ ʼಆನ್ ಲೈನ್ʼ ಕ್ಲಾಸ್ ಅಟೆಂಡ್ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ
ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ ಈ ಚಿತ್ರದಲ್ಲಿ ರಸ್ತೆ ಬದಿಯಲ್ಲಿ ಮಗಳು ಕುಳಿತು ಕ್ಲಾಸ್ ಅಟೆಂಡ್ ಮಾಡುತ್ತಿದ್ದರೆ, ಅಪ್ಪ ಆಕೆಗಾಗಿ ಛತ್ರಿ ಹಿಡಿದಿದ್ದಾರೆ. ಸುಳ್ಯ ತಾಲ್ಲೂಕಿನ ಬಾಳಕ್ಕ ಗ್ರಾಮದಲ್ಲಿ ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದೇ ಇರುವ ಕಾರಣ ವಿದ್ಯಾರ್ಥಿಗಳು ಆಗಾಗ ತಂತಮ್ಮ ಮನೆಗಳಿಂದ ಹೊರಗೆ …
Read More »ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್,ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ
ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, …
Read More »ಸರ್ಕಾರ ಕೈ ಬಿಟ್ಟರೂ,,,ತನ್ನ ಕುಲ ಭಾಂದವರ ಕೈ ಹಿಡಿದ ಸಹೋದರರು..!!
ಬೆಳಗಾವಿ : ಕೋವಿಡ್ ಮಹಾಮಾರಿಗೆ ಹೆದರಿ ಜನರು ತಮ್ಮ ಮನೆಗಳಿಂದ ಹೊರಗೆ ಬರಲು ಹಿಂದೆ ಮುಂದೆ ನೋಡುತ್ತಿರುವ ಈಗಿನ ಪರಿಸ್ಥಿತಿಯಲ್ಲಿ ಮೇದಾರ ಸಮಾಜದ ಹಿತೈಸಿಗಳಾದ ನಾಗೇಶ ಹಾಗೂ ಅರ್ಜುನ ಕಡೋಲಿ ಸಹೋದರರು ಕೊರೋನಾಗೂ ಹೆದರದೆ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡ ಹಾಗೆ ಓಡಾಡಿ ಬಡತನದ ಅಲೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ಬೆಳಗಾವಿ ಜಿಲ್ಲೆಯ ವಿವಿಧ ಊರುಗಳಿಗೆ ಭೇಟಿ ನೀಡಿ …
Read More »ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …
Read More »‘ನಿನ್ನ ಮೇಲೆ ಯಾರು ಕೇಸ್ ಹಾಕ್ತಾರೋ?’ ಅಶೋಕ್, ಸವದಿಗೆ ಸಿಎಂ ಪಾಠ ಹೇಗಿತ್ತು ಗೊತ್ತಾ..?
ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಕುರಿತು ಇಂದು ಸುದ್ದಿಗೋಷ್ಠಿ ಮುಗಿಸಿ ಹೊರಡುವ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪಾಠ ಮಾಡಿದ ವಿಶೇಷ ಸನ್ನಿವೇಶ ನಡೆಯಿತು. ಈ ವೇಳೆ ಸಿಎಂ ಬಿಎಸ್ವೈ ಜಾಲಿ ಮೂಡ್ನಲ್ಲಿದ್ದಂತೆ ಕಂಡುಬಂದರು.. ಸಿಎಂ ಬಿಎಸ್ವೈ, ಆರ್ ಅಶೋಕ್ ಹಾಗೂ ಸವದಿ ನಡುವಿನ ಮಾತುಕತೆ ಹೀಗಿತ್ತು.. ಸಿಎಂ :- ಅಶೋಕ್ ಎಲ್ಲಿಗೆ ಹೋಗ್ತಾಯಿದ್ಯಾ?. ಅಶೋಕ್ :- ಸಾರ್ …
Read More »ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ
ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …
Read More »