ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಇದೀಗ ನೈಟ್ ಕರ್ಫ್ಯೂ ಸರ್ಕಾರದ ಮಾರ್ಗಸೂಚಿ ಮೇರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಇರಲಿದೆ ಎಂದು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ನಿನ್ನೆ ಒಂದೇ ದಿನ181 ಮಂದಿ ಸೋಂಕಿತ …
Read More »ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಹಿರಿಯ ನಾಯಕ ಸಿ.ಎಂ ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರ …
Read More »ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಸರಕಾರ ಚಿಂತನೆ..?
ಹೊಸದಿಲ್ಲಿ: ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸಮೀಕ್ಷೆಯೊಂದನ್ನು ಕೈಗೊಳ್ಳುತ್ತಿದೆ ಎಂದು ಉನ್ನತ ಮೂಲಗಳು ವರದಿ ಮಾಡಿವೆ. ಸಬ್ಸಿಡಿಯನ್ನು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸೀಮಿತಗೊಳಿಸುವ ಚಿಂತನೆಯೂ ಇದೆ ಎನ್ನಲಾಗಿದೆ. ಈ ಹಿಂದೆ ಎಲ್‌ಪಿಜಿ ದರ ಇಳಿಕೆಯಾಗಿದ್ದರಿಂದ 2020ರ ಮೇ ತಿಂಗಳಿ ನಲ್ಲಿ ಸರಕಾರವು ಎಲ್‌ಪಿಜಿ ಸಬ್ಸಿಡಿಯನ್ನು ಹಿಂದೆ ಗೆದುಕೊಂಡಿತ್ತು. ಆಗ ದಿಲ್ಲಿಯಲ್ಲಿ 14.2 ಕೆ.ಜಿ.ಯ ಅಡುಗೆ …
Read More »ಪೆಟ್ರೋಲ್ ಡೀಸೆಲ್ ದರ ಇಂದು ಮತ್ತೆ ಏರಿಕೆಯತ್ತ ಮುಖ ಮಾಡಿದೆ.
ನವದೆಹಲಿ, ಸೆಪ್ಟೆಂಬರ್ 28: ಸತತ ಮೂರು ವಾರಗಳಿಂದ ಯಥಾಸ್ಥಿತಿ ಕಾಪಾಡಿಕೊಂಡಿದ್ದ ಪೆಟ್ರೋಲ್ ದರವನ್ನು ಇಂದು (ಸೆ.28) ಏರಿಕೆ ಮಾಡಲಾಗಿದ್ದು, ಅದೇ ರೀತಿ ಡೀಸೆಲ್ ದರ ಇಂದು ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿದ್ದರೆ, ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಾಣುತ್ತಿರುವ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿದೆ. ಮಂಗಳವಾರದ ಇಂಧನ …
Read More »ಬಡ್ಡಿ ಹಣ ಕೊಡಲಿಲ್ಲ ಎಂದು ಆಟೋ ಚಾಲಕನ ಕೊಲೆ
ಹುಬ್ಬಳ್ಳಿ: ಸಾಲ ನೀಡಿದ್ದ ಹಣಕ್ಕೆ ಸರಿಯಾಗಿ ಬಡ್ಡಿ ನೀಡಿಲ್ಲ ಅಂತ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಲೋಕೇಶ್ ಹತ್ಯೆಯಾದ ಆಟೋ ಚಾಲಕರಾಗಿದ್ದು, ಕೆಲ ದಿನಗಳ ಹಿಂದೆ ಲೋಕೇಶ್, ಮಾರುತಿ ಎನ್ನುವವನಿಂದ 5 ರೂಪಾಯಿ ಸಾಲ ಪಡೆದುಕೊಂಡಿದ್ದ. ಆದರೆ ಸಾಲದ ಬಡ್ಡಿ ಜೊತೆಗೆ ಆಟೋದ ನಿತ್ಯ 200 ರೂಪಾಯಿ ಕೊಡುವಂತೆ ಮಾರುತಿ ಪಿಡುಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ನಿನ್ನೆ ಸಂಜೆ ಮಾರುತಿ …
Read More »ದಲ್ಲಾಳಿಯ ಪುತ್ರನಿಗೆ ಹಿಗ್ಗಾಮುಗ್ಗ ಥಳಿಸಿದ ವ್ಯಾಪಾರಿಗಳು
ಗದಗ: ಕ್ಷುಲ್ಲಕ ಕಾರಣಕ್ಕಾಗಿ ದಲ್ಲಾಳಿ ಹಾಗೂ ತರಕಾರಿ ಮಾರಾಟಗಾರರ ನಡುವೆ ಮಾರಾಮಾರಿ ನಡೆದಿದ್ದು ಗದಗ ಎಪಿಎಂಸಿ ಆವರಣ ರಣಾಂಗಣವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಗದಗ ಎಪಿಎಂಸಿ ತರಕಾರಿ ಹೋಲ್ ಸೇಲ್ ಮಾರ್ಕೆಟ್ನಲ್ಲಿ ಘಟನೆ ನಡೆದಿದ್ದು ದಲ್ಲಾಳಿ ಅಂಗಡಿಗೆ ನುಗ್ಗಿ ದಲ್ಲಾಳಿ ಪುತ್ರನಿಗೆ ವ್ಯಾಪಾರಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ರೈತರ ತರಕಾರಿ ಖರೀದಿ ವಿಷಯದಲ್ಲಿ ದಲ್ಲಾಳಿ ಹಾಗೂ ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾಗ್ವಾದ ವಿಕೋಪಕ್ಕೆ ತಿರುಗಿ ಹೊಎದಾಟ ನಡೆದಿದೆ …
Read More »ಬಹುಮಹಡಿ ಕಟ್ಟಡ ಕುಸಿತ; ಮನೆ ಮಾಲೀಕನ ವಿರುದ್ಧ ದಾಖಲಾಯ್ತು FIR
ಬೆಂಗಳೂರು: BBMP ವ್ಯಾಪ್ತಿಯ ದಕ್ಷಿಣ ವಲಯದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ ಸಂಬಂಧ ಕಟ್ಟಡ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಲಕ್ಕಸಂದ್ರದ 7ನೇ ಮುಖ್ಯರಸ್ತೆ, 14ನೇ ಕ್ರಾಸ್ನಲ್ಲಿನ ಈ ಮೂರು ಅಂತಸ್ತಿನ ಕಟ್ಟಡವನ್ನು 1974ರಲ್ಲಿ ನಿರ್ಮಿಸಲಾಗಿತ್ತು. ಸುರೇಶ್ ಎಂಬ ವ್ಯಕ್ತಿಗೆ ಈ ನಿವಾಸ ಸೇರಿದ್ದಾಗಿದೆ, ಶಿಥಿಲಾವ್ಯವಸ್ಥೆಯಲ್ಲಿದ್ದ ಕಟ್ಟಡದ ಬಗ್ಗೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದರು ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ …
Read More »ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ
ಮುದ್ದೇಬಿಹಾಳ: ಮಿಣಜಗಿ, ಹೂವಿನ ಹಿಪ್ಪರಗಿ ಭಾಗದಿಂದ ತಾಳಿಕೋಟೆ ಪ್ರವೇಶಿಸುವ ಡೋಣಿ ನದಿಯ ಮೇಲಿನ ದಶಕಗಳಷ್ಟು ಹಳೇಯದಾದ ಸೇತುವೆಯ ಅಂದಾಜು 15 ಮೀಟರ್ನಷ್ಟು ಭಾಗ ಕುಸಿಯತೊಡಗಿದ್ದು, ಅದರ ಮುಂದಿನ ಭಾಗವೂ ನಿಧಾನವಾಗಿ ಕುಸಿಯತೊಡಗಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಭವನೀಯ ಅನಾಹುತ ತಪ್ಪಿಸಲು ಸೇತುವೆಯ ಮೇಲೆ ಸಂಚಾರವನ್ನು ಸೋಮವಾರ ಸಂಜೆಯಿಂದಲೇ ಬಂದ್ ಮಾಡಲಾಗಿದೆ. ಇದರಿಂದಾಗಿ ಮುದ್ದೇಬಿಹಾಳ, ಹೂವಿನ ಹಿಪ್ಪರಗಿ ಮತ್ತು ಮಿಣಜಗಿ ಭಾಗದಿಂದ ತಾಳಿಕೋಟೆ ಪ್ರವೇಶ ಬಂದ್ ಆಗಿದೆ. ಸ್ಥಳಕ್ಕೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ …
Read More »ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?
ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ತಿದ್ದುಪಡಿ ವಿಧೇಯಕ ಅಧಿವೇಶನದಲ್ಲಿ ಮಂಡನೇ ಆಗದೆ ಇರುವುದರಿಂದ ಈ ವರ್ಷ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಕಷ್ಟವಿದೆ. ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಮತ್ತು ವರ್ಗಾವಣೆ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿ ಇತ್ತೀಚೆಗೆ ರಾಜ್ಯ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರ ಸಂಘದಿಂದ ಇಲಾಖೆಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು. ಹಳೇ ಕಾಯ್ದೆ ಹಾಗೂ ನಿಯಮದಡಿ ವರ್ಗಾವಣೆ ನಡೆಸಲು …
Read More »ಕೆಪಿಸಿಸಿ ಪಟ್ಟಿ : ಹೈಕಮಾಂಡ್ ಜತೆ ಇಂದು ಡಿಕೆಶಿ ಚರ್ಚೆ
ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಹೈಕಮಾಂಡ್ ನಾಯಕರ ಜತೆ ಚರ್ಚಿಸುವ ನಿರೀಕ್ಷೆಯಿದೆ. ರವಿವಾರ ದಿಲ್ಲಿಗೆ ತೆರಳಿರುವ ಡಿಕೆಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಗೆ ಕಾಲಾವಕಾಶ ಕೋರಿದ್ದಾರೆ. ಪಂಜಾಬ್ ಪ್ರವಾಸದಲ್ಲಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ದಿಲ್ಲಿಗೆ ಆಗಮಿಸಲಿದ್ದು ಡಿಕೆಶಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಕೆಪಿಸಿಸಿ ಪದಾಧಿಕಾರಿಗಳa ಪಟ್ಟಿ, ಹಿಂದುಳಿದ, …
Read More »
Laxmi News 24×7