Breaking News

ಕಾರಜೋಳ ಪುತ್ರ‌ ಅವರ ಆರೋಗ್ಯ ಸ್ಥಿತಿ ಗಂಭೀರ

ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ‌ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.

Read More »

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …

Read More »

ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನ:ಸಿ.ಟಿ.ರವಿ

ಬೆಂಗಳೂರು, ಅ.18-ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನದ ಪರಮಾವಧಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದ ಮೇಲೆ ತಿಹಾರ್ ಜೈಲಿಗೆ ಹೋಗಿ ಬಂದವರು, ಜನರಿಂದ ಹಾರ, ತುರಾಯಿ ಹಾಕಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾರೆ. ಅಂತಹವರು ಕೂಡ ನಾನು ಬಂಡೆ ಎಂದು ಕೊಚ್ಚಿಕೊಳ್ಳುವುದು ಕೂಡ ಒಂದು ರೀತಿ ಭಂಡತನವೇ ಎಂದು …

Read More »

ಬೇರೆಯವರ‌ ಹೆಸರಿನಲ್ಲಿ‌ ಡಿಆರ್ ಪರೀಕ್ಷೆ ಬರೆದ ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ನಗರದಲ್ಲಿ ಬೇರೆಯವರ‌ ಹೆಸರಿನಲ್ಲಿ‌ ಡಿಆರ್ ಪರೀಕ್ಷೆ ಬರೆದ ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಡಿಆರ್ ಪರೀಕ್ಷೆ ಇಂದು ನಡೆದಿವೆ. ಅದೇ ರೀತಿ ಬೆಳಗಾವಿ ನಗರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿರುವಾಗ, ಪರೀಕ್ಷೆ ಮೇಲ್ವಿಚಾರಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕನನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More »

ದಪ್ಪ ಚರ್ಮದ, ಕಿವಿ, ಕಣ್ಣು, ಹೃದಯ ಇಲ್ಲದ ಸರ್ಕಾರ ಇದು.:ಈಶ್ವರ್ ಖಂಡ್ರೆ

ಬೀದರ್: ದಪ್ಪ ಚರ್ಮದ, ಕಿವಿ, ಕಣ್ಣು, ಹೃದಯ ಇಲ್ಲದ ಸರ್ಕಾರ ಇದು. ಇಲ್ಲಿಯವರೆಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹಕ್ಕೆ ಸಿಲುಕಿ ಸಂಕಷ್ಟಕ್ಕೆ ಒಳಗಾದವರಿಗೆ ಇಲ್ಲಿಯವರೆಗೆ ಸ್ಪಂದನೆ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯಾ, ಯಾವಾಗ ಪರಿಹಾರ ಬಿಡುಗಡೆ ಮಾಡುತ್ತಾರೆ, ರೈತರು ಸತ್ತ ಮೇಲೆ ಪರಿಹಾರ ಕೊಡತ್ತಾರಾ? ಇದರಲ್ಲೂ ರಾಜಕೀಯ ಮಾಡೋದು ಬಿಡಿ. …

Read More »

ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ:ಕಟೀಲ್

ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್‍ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ …

Read More »

ಯೋಗರಾಜ್ ಭಟ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ಸೇರಿ ಹೊಸ ಸಿನಿಮಾ

ಬೆಂಗಳೂರು: ಹಿಟ್ ಸಿನಿಮಾಗಳ ನಿರ್ದೇಶಕ ಎಂದೇ ಖ್ಯಾತಿ ಪಡೆದಿರುವ ಯೋಗರಾಜ್ ಭಟ್ ಹಾಗೂ ಶಿವರಾಜ್ ಕುಮಾರ್ ಒಟ್ಟಿಗೆ ಸೇರಿ ಹೊಸ ಸಿನಿಮಾ ಮಾಡುತ್ತಿರುವುದು ತಿಳಿದಿರುವ ವಿಚಾರ. ಇದೀಗ ಈ ಚಿತ್ರದ ಕುರಿತು ಮತ್ತೊಂದು ಅಚ್ಚರಿಯ ಸುದ್ದಿ ಹೊರ ಬಿದ್ದಿದೆ. ಯೋಗರಾಜ್ ಭಟ್ಟರು ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕವೇ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರದ್ದು. ಶಿವರಾಜ್ ಕುಮಾರ್ ಸಹ ಸ್ಟಾರ್ ನಟ ಹೀಗಿರುವಾಗ ಇವರಿಬ್ಬರು …

Read More »

ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ

ಜೈಪುರ: ಸ್ಪಾ, ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 12 ಜನರನ್ನ ಬಂಧಿಸಿದ್ದಾರೆ. ರಾಜಸ್ಥಾನದ ಅಲ್ವಾರ ಜಿಲ್ಲೆಯ ಬಿವಢಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಾಳಿ ವೇಳೆ ಬಂಧಿಸಿರುವ 9 ಯುವತಿಯರು ಸೇರಿದಂತೆ 12 ಜನರನ್ನ ಫೂಲ್‍ಬಾಗ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ನಡೆಸಲಾಗುತ್ತಿದೆ. 12 ಜನರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಯಾರ ಜೊತೆ ಸಂಪರ್ಕದಲ್ಲಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ. ದೆಹಲಿ, …

Read More »

ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಬೆಂಗಳೂರು: ಭಾರೀ ಮಳೆ, ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿದ್ದು, ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, ಜೊತೆಗೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ಹಾಗೂ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ …

Read More »

ಸಂಕಷ್ಟದ ತೀವ್ರತೆ ಕಂಡು ಬಂದರೆ ನಾನು ವೈಯಕ್ತಿಕವಾಗಿ ಮತ್ತು ಇಡೀ ಚಿತ್ರ ತಂಡ, ಸಂತ್ರಸ್ತರ ನೆರವಿಗೆ ನಿಲ್ಲುತ್ತದೆ : ಪುನೀತ್

ಕೊಪ್ಪಳ, ಅ.18- ಕೊರೊನಾದಿಂದಾಗಿ ಈಗಾಗಲೇ ಸಿನಿಮಾ ರಂಗ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಲಾಕ್‍ಡೌನ್ ಬಳಿಕ ಈಗಷ್ಟೇ ಸಿನಿಮಾ ರಂಗದ ಚಟುವಟಿಕೆಗಳು ನಡೆಯುತ್ತಿವೆ. ಕಲಾವಿದರನ್ನು ಪ್ರೋತ್ಸಾಹಿಸಲು ಸಿನಿಮಾ ಮಂದಿರಗಳಿಗೆ ಬಂದು ಸಿನಿಮಾ ನೋಡಿ ನಮ್ಮ ನೆರವಿಗೆ ನಿಲ್ಲಬೇಕು ಎಂದು ನಟ ಪುನೀತ್ ರಾಜïಕುಮಾರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು. ಜಿಲ್ಲಾಯ ಗಂಗಾವತಿ ತಾಲೂಕಿನ ಮಲ್ಲಾಪುರದ ಬಳಿ ನಡೆಯುತ್ತಿರುವ ಜೇಮ್ಸ್ ಚಿತ್ರದ ಶೂಟಿಂಗ್‍ನಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ಲಾಕ್‍ಡೌನ್‍ನಿಂದಾಗಿ ಸುದೀರ್ಘ 7 …

Read More »