ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ

ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ಶ್ರಮದಾನದ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ತೆರಳುವಾಗ ಗ್ರಾಮದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. …

Read More »

2021ರ ಆರಂಭದಲ್ಲೇ ರಾಜ್ಯಕ್ಕೆ ಸಿಗಲಿದೆ ಲಸಿಕೆ: ಸುಧಾಕರ್

ಬೆಂಗಳೂರು: 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ …

Read More »

ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಉಮೇಶ್ ಕತ್ತಿ ಟಾಂಗ್

ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಹುಕ್ಕೇರಿ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಕತ್ತಿ, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ …

Read More »

ಮುನಿರತ್ನ, ಭೈರತಿ ಬಸವರಾಜ್ ಹಾಗೂ ಸೋಮಶೇಖರ್ ಮಾನಗೆಟ್ಟವರು,:ಸಿದ್ದರಾಮಯ್ಯ 

ಬೆಂಗಳೂರು: ಮುನಿರತ್ನ, ಭೈರತಿ ಬಸವರಾಜ್ ಹಾಗೂ ಸೋಮಶೇಖರ್ ಮಾನಗೆಟ್ಟವರು, ಲಜ್ಜೆಗೆಟ್ಟವರು ಅಂತಾ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ  ಇಂದು ಕಾಂಗ್ರೆಸ್ ಅಭ್ಯರ್ಥಿ  ಕುಸುಮಾ ಪರ ಪ್ರಚಾರದ ವೇಳೆ ಮಾತನಾಡಿದ ಅವರು,  ಮುನಿರತ್ನ ರಾಜಕೀಯದಲ್ಲಿರಲು ನಾಲಾಯಕ್. ಮುನಿರತ್ನ ಕ್ಷೇತ್ರ ಅಭಿವೃದ್ಧಿ ಮಾಡಿದ್ದು ಯಾರು ಕೊಟ್ಟ ಹಣದಿಂದ..? ನಾನು ಸಿಎಂ ಆಗಿದ್ದಾಗ ಕೊಟ್ಟ ಹಣದಿಂದ.ಇದೊಂದೇ ಕ್ಷೇತ್ರಕ್ಕೆ ನಾನು ಎರಡು ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದೇನೆ. ಈಗ ನಮಗೆಲ್ಲ …

Read More »

ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ವಿಧಿವಶ

ದಾವಣಗೆರೆ : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿ, 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

Read More »

ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ ಮೇಲೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ. ಮುತ್ತುರಾಯನಗರದ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನದಲ್ಲಿ 7 ಲಕ್ಷ ರೂ. ಪತ್ತೆಯಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡ ಭೇಟಿ ಕೊಟ್ಟು ಮಹಜರ್ ಮಾಡಿ ಜಪ್ತಿ ಮಾಡಿರುವುದಾಗಿ ಪಶ್ಚಿಮ ವಿಭಾಗ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ. ಸ್ಕೂಟರ್ ಸವಾರರಾದ ರಮೇಶ್ ಮತ್ತು ಮಾಣಿಕ್‌ಚಂದ್ …

Read More »

ರಾಜ್ಯದಲ್ಲೇ ಮೊದಲು ಕೊರೋನಾ ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿವಿಯ ಆಸ್ಟ್ರಾಜನಿಕಾ ಸಂಸ್ಥೆಯ ಎಂಡಿ ಗಗನ್ ದೀಪ್ ಜೊತೆ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆ ಅವರು ಹಲವು ಮಹತ್ವದ ಮಾಹಿತಿ ನೀಡಿದರು ಎಂದರು. …

Read More »

25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ

ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …

Read More »

ಖ್ಯಾತ ನಟಿ ಖುಷ್ಬೂ ಅರೆಸ್ಟ್

ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಸಿಕೆ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಪೊಲೀಸರು ನಟಿ ಖುಷ್ಬೂ ಅವರನ್ನು ಚೆನ್ನೈನ ಇಸಿಆರ್ ರಸ್ತೆಯಲ್ಲಿ ಬಂಧಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ …

Read More »

ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ

        ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ …

Read More »