ಉಡುಪಿ: ಮುಂಗಾರು ಮಳೆಯ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬಿ ಸಮುದ್ರದಲ್ಲಿ ಹವ್ಯಾಸಿ ಮೀನುಗಾರಿಕೆ ಜೋರಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಹೊಂದಿರುವ ಯುವಕರು ದೋಣಿಗಳ ಜೊತೆ ಅರಬ್ಬಿ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಉದ್ಯಾವರ ನಾಗೇಶ್ ಕುಮಾರ್ ಮತ್ತು ಅವರ ಗೆಳೆಯರ ತಂಡ ಅರಬ್ಬಿ ಸಮುದ್ರದಲ್ಲಿ ಗಾಳ ಹಾಕಿದಾಗ ಶಾರ್ಕ್ ಮೀನೊಂದು ಗಾಳಕ್ಕೆ ಸಿಲುಕಿತ್ತು. ಗಾಳಕ್ಕೆ ಸಿಲುಕಿದ ನಂತರ ಕೆಲಕಾಲ ಸೆಣೆಸಾಟ ನಡೆಸಿದೆ. ತುಳುವಿನಲ್ಲಿ ತಾಟೆ ಮೀನು ಎಂದು ಕರೆಯುತ್ತಾರೆ. ಇದು …
Read More »ಗೃಹ ಬಳಕೆ ಸಿಲಿಂಡರ್ ಬೆಲೆ ಮತ್ತೆ ಏರಿಕೆ TODAYS TOP NEWS
1. ಗೃಹ ಬಳಕೆ ಸಿಲಿಂಡರ್ ಬೆಲೆ ಮತ್ತೆ ಏರಿಕೆ ಮೊದಲೇ ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸರ್ಕಾರ ಮತ್ತೆ ಶಾಕ್ಕೊಟ್ಟಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಿದ್ದರಿಂದ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 860 ರೂಪಾಯಿ ಆಗಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 68 …
Read More »ಡಿಸ್ಟರ್ಬ್ ಮಾಡಬೇಡ ಅಮ್ಮಾ..’ ರೂಮಿಗೆ ತೆರಳಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಕಲಬುರಗಿ: ಪೋಷಕರಿಂದ ಆನ್ ಲೈನ್ ಕ್ಲಾಸ್ಗೆ ತೊಂದರೆ ಆಯ್ತು ಅಂತ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. 17 ವರ್ಷದ ಗುರುಚರಣ್ ಉಡುಪಾ ಆತ್ಮಹತ್ಯೆ ಮಾಡಿಕೊಂಡ ಯುವಕ. ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜ್ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಎರಡು ದಿನದ ಹಿಂದೆ ಆನ್ಲೈನ್ ಕ್ಲಾಸ್ನಲ್ಲಿದ್ದಾಗ ಅವ್ರ ತಂದೆ ತಾಯಿ ಡಿಸ್ಟರ್ಬ್ …
Read More »ಗೃಹ ಖಾತೆಯ ಕಿರಿಕಿರಿ ನನಗೆ ಮಾತ್ರ ಗೊತ್ತಿದೆ. ಸರಿಯಾಗಿ ನಿದ್ರೆ ಮಾಡಲೂ ಆಗದ ಸ್ಥಿತಿ ನನ್ನದು: ಅರಗ ಜ್ಞಾನೇಂದ್ರ
ಶಿವಮೊಗ್ಗ: ಗೃಹ ಖಾತೆಯ ಕಿರಿಕಿರಿ ನನಗೆ ಮಾತ್ರ ಗೊತ್ತಿದೆ. ಸರಿಯಾಗಿ ನಿದ್ರೆ ಮಾಡಲೂ ಆಗದ ಸ್ಥಿತಿ ನನ್ನದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅಳಲು ತೋಡಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮೊದಲು ಆರಾಮವಾಗಿದ್ದೆ. ಈಗ ಗೃಹ ಸಚಿವ ಸ್ಥಾನ ಅಲಂಕರಿಸಿದ ಮೇಲೆ ನಿದ್ರೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ರಾತ್ರಿಯೆಲ್ಲ ಪೊಲೀಸರು ಮಾಹಿತಿ ನೀಡಲು ಫೋನ್ ಮಾಡುತ್ತಾರೆ. ಹಾಗಂತ ಪಲಾಯನ ಮಾಡುವುದಿಲ್ಲ. ಕೊಟ್ಟ ಕುದುರೆಯನ್ನು ಇಳಿದರೆ ಶೂರನಾಗುವುದಿಲ್ಲ ಎಂಬ ಕಾರಣಕ್ಕೆ …
Read More »ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ ಚಾಲನೆ :
ಬೆಳಗಾವಿ – ಬೆಳಗಾವಿ ನಗರದಲ್ಲಿ ನಾಲ್ಕು ದಿನಕ್ಕೊಮ್ಮೆ, ಕೆಲವು ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಬರುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡ ಶಾಸಕ ಅಭಯ ಪಾಟೀಲ ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಮೂರು ವರ್ಷದ ಹಿಂದೆ ಈ ಯೋಜನೆ ರದ್ದಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾಗಿದ್ದು ಅಭಯ ಪಾಟೀಲ ಕೇಂದ್ರ ಸಚಿವರಾಗಿದ್ದ ದಿ.ಅನಂತಕುಮಾರ್ ಅವರ ನೆರವಿನಿಂದ, ಆಗಿನ …
Read More »ಹುಬ್ಬಳ್ಳಿ: ಉಪ ನೋಂದಣಾಧಿಕಾರಿಗಳ ವರ್ಗಾವಣೆಗೆ ಪಟ್ಟು
ಹುಬ್ಬಳ್ಳಿ: ದಾಖಲೆಗಳ ನೋಂದಣಿಗೆ ಉಪ ನೋಂದಣಾಧಿಕಾರಿಗಳು ವಿನಾಕಾರಣ ಅಲೆದಾಡಿಸುತ್ತಾರೆ. ಅವರನ್ನು ವರ್ಗಾವಣೆ ಮಾಡುವ ತನಕ ಹುಬ್ಬಳ್ಳಿಯ ಉತ್ತರದ ಕಚೇರಿಯಲ್ಲಿ ಯಾವುದೇ ದಾಖಲೆಗಳ ನೋಂದಣೆ ಮಾಡಿಸುವುದಿಲ್ಲ ಎಂದು ವಿವಿಧ ಸಂಸ್ಥೆಯವರು ಮಂಗಳವಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಭಾರತೀಯ ರಿಯಲ್ ಎಸ್ಟೇಟ್ ನಿರ್ಮಾಣಗಾರರ ಸಂಘಗಳ ಒಕ್ಕೂಟ (ಕ್ರೆಡಾಯ್), ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ವಾಸ್ತುಶಿಲ್ಪ ಸಂಘ, ಸಿವಿಲ್ ಎಂಜಿನಿಯರ್ಗಳ ಸಂಘ ಮತ್ತು ದಸ್ತಾವೇಜು ಬರಹಗಾರರ ಸಂಘದವರು ಉಪ ನೋಂದಣಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. …
Read More »ಆಟೊ ಚಾಲಕರಿಗೆ ಮಹತ್ವದ ಮಾಹಿತಿ : ಸೆ. 1 ರಿಂದ ಆಟೊಗಳಿಗೆ ಮೀಟರ್ ಕಡ್ಡಾಯ
ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ಆಟೊ ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಭಾರೀ ಮಳೆ : ಹೈ ಅಲರ್ಟ್ ಸೆಪ್ಟೆಂಬರ್ 1 ರಿಂದ ಜಿಲ್ಲೆಯಲ್ಲಿ ಆಟೊ ಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಆಟೋ ಚಾಲಕ, ಮಾಲೀಕರು ತಮ್ಮ ಆಟೊಗಳಿಗೆ ಅನುಮತಿ ಇರುವ ಫ್ಲಾಗ್ ಮೀಟರ್ ಗಳನ್ನು ಅಳವಡಿಸಿಕೊಂಡು ದರಕ್ಕೆ …
Read More »ರಾಜಧಾನಿಯಲ್ಲಿ ಮುಂದಿನ ಆಗಸ್ಟ್ 3೦ ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ
ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ …
Read More »ಅಪ್ಪನ ಆಸೆ ಬೆನ್ನೆಲುಬಾಗಿ ನಿಂತ ಪುನೀತ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು : ಜೀವನದಲ್ಲಿ ಶಿಕ್ಷಣಕ್ಕಿಂತಲೂ ಜ್ಙಾನ ಮುಖ್ಯ, ಪುನೀತ್ ರಾಜಕುಮಾರ ವಿದ್ಯಾಭ್ಯಾಸ ಕಡಿಮೆ ಇದ್ದರೂ ಅವರ ಜ್ಞಾನ ಸಂಪತ್ತು ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜಕುಮಾರ ಅಕಾಡಮಿಯ ಎಜುಕೇಶನ್ ಆಪ್ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು ಮನುಷ್ಯ ಕೇವಲ ಭೌಧಿಕ ವಿದ್ಯಾಭ್ಯಾಸ ಪಡೆಯುವುದು ಮುಖ್ಯವಲ್ಲ ಅದರ ಜೊತೆಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ತಿಳಿಸಿದರು. ಪುನೀತ್ ಶಾಲಾಭ್ಯಾಸದಲ್ಲಿ ಕಡಿಮೆ ಕಲೆತರೂ , ಲೋಕಜ್ಞಾನವನ್ನು ಪಡೆದುಕೊಂಡಿದ್ದಾರೆ. …
Read More »ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಸೋಮವಾರ ಕಂದಾಯ ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಸಂಬಂಧ ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 29 ಲಕ್ಷ ಮನೆಗಳಿಗೂ ಭೇಟಿ …
Read More »
Laxmi News 24×7