Breaking News

ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ವಿಧಿವಶ

ದಾವಣಗೆರೆ : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿ, 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

Read More »

ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ ಮೇಲೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ. ಮುತ್ತುರಾಯನಗರದ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನದಲ್ಲಿ 7 ಲಕ್ಷ ರೂ. ಪತ್ತೆಯಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡ ಭೇಟಿ ಕೊಟ್ಟು ಮಹಜರ್ ಮಾಡಿ ಜಪ್ತಿ ಮಾಡಿರುವುದಾಗಿ ಪಶ್ಚಿಮ ವಿಭಾಗ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ. ಸ್ಕೂಟರ್ ಸವಾರರಾದ ರಮೇಶ್ ಮತ್ತು ಮಾಣಿಕ್‌ಚಂದ್ …

Read More »

ರಾಜ್ಯದಲ್ಲೇ ಮೊದಲು ಕೊರೋನಾ ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿವಿಯ ಆಸ್ಟ್ರಾಜನಿಕಾ ಸಂಸ್ಥೆಯ ಎಂಡಿ ಗಗನ್ ದೀಪ್ ಜೊತೆ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆ ಅವರು ಹಲವು ಮಹತ್ವದ ಮಾಹಿತಿ ನೀಡಿದರು ಎಂದರು. …

Read More »

25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ

ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …

Read More »

ಖ್ಯಾತ ನಟಿ ಖುಷ್ಬೂ ಅರೆಸ್ಟ್

ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಸಿಕೆ ನಾಯಕ ತಿರುಮಾಳವನ್ ಬಂಧನಕ್ಕೆ ಆಗ್ರಹಿಸಿ ಚಿದಂಬರಂನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಪೊಲೀಸರು ನಟಿ ಖುಷ್ಬೂ ಅವರನ್ನು ಚೆನ್ನೈನ ಇಸಿಆರ್ ರಸ್ತೆಯಲ್ಲಿ ಬಂಧಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ …

Read More »

ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ

        ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ …

Read More »

ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ.

          ಚಿಕ್ಕಬಳ್ಳಾಪುರ: ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ. ಕೊರೊನಾ ಮರೆತು ತಮ್ಮ ನೆಚ್ಚಿನ ತಾಣಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ವೀಕೆಂಡ್​ಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಇವರ ಈ ನಿರ್ಲಕ್ಷ್ಯಕ್ಕೆ ಮುಂದೆ ದೊಡ್ಡ ಕಂಟಕವೇ ಎದುರಾಗಬಹುದು. ಹಲವು ತಿಂಗಳು ಮನೆಯಲ್ಲೇ ಕುಳಿತು ಬೇಜಾರಾಗಿ ಪ್ರವಾಸಿ ತಾಣದತ್ತ ಮುಖ ಮಾಡಿರುವ ಪ್ರವಾಸಿಪ್ರವಾಸಿಗರಿಂದ ಆತಂಕ ಎದುರಾಗಿದೆ. …

Read More »

ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ

  ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣವೇನೆಂದು ತಿಳಿದುಬಂದಿಲ್ಲ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ …

Read More »

ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು …

Read More »

Big Breaking ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಬಗ್ಗೆ ಹೇಳಿದ್ದೇನು ಗೊತ್ತಾ exclusive Byte

ಮಾಜಿ ಸಚಿವರು ಆಗಿರುವ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ತೀವ್ರ ವಾಗ್ದಾಳಿ ನಡೆಸಿದ್ದು, ಅವರಿಗೆ ಇದ್ದಕ್ಕಿದ್ದಂತೆ ಬಿಜೆಪಿ ಮೇಲೆ ಪ್ರೀತಿ ಬಂದಿದೆ, ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹೊರಗಿಟ್ಟು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈಯ್ದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿ, ಪ್ರಕಾಶ ಹುಕ್ಕೇರಿ ಈಗಾಗಲೇ ಬಿಜೆಪಿ ಪರ ವಾಲಿ ಮಾತನಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಗಂಭೀರ …

Read More »