Breaking News

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದಿರುವ ಈ ಸಂದರ್ಭ ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಅದರಂತೆ ಎಲ್ಲ ರಾಜ್ಯ ಸರಕಾರಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲು ಸೂಚಿಸಿದೆ. ಆದರೆ, ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಯಾವುದೇ ಯೋಜನೆ ರೂಪಿಸಿಕೊಳ್ಳಲು ಮುಂದಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಅಮೃತ ಮಹೋತ್ಸವ ಆಚರಣೆ ಸಂಬಂಧ ಸಚಿವ ಸಂಪುಟದ ಉಪ ಸಮಿತಿ ರಚನೆ, ವರ್ಷ …

Read More »

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರು ಸೇರಿ ರಾಜ್ಯಾದ್ಯಂತ `ಟ್ರಾಫಿಕ್ ಸ್ಪಾಟ್ ಫೈನ್’ ಕ್ಯಾನ್ಸಲ್

ಬೆಂಗಳೂರು : ವಾಹನ ಸವಾರರಿಗೆ ಗೃಹ ಸಚಿವ ಆರಗ ಜ್ಞಾನೆಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.   ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಟ್ರಾಫಿಕ್ ಪೊಲೀಸರು ಬಳಸುತ್ತಿದ್ದ ಮಷಿನ್ ಗಳನ್ನು ಆಯಾ ಪೊಲೀಸ್ ಠಾಣೆಗಳಲ್ಲಿ ಸರಂಡರ್ ಮಾಡಲು ಸೂಚನೆ ನೀಡಿದ್ದಾರೆ.   …

Read More »

ಆನಂದ್‌ ಸಿಂಗ್‌, ಎಂಟಿಬಿ ನಾಗರಾಜ್‌ ಅತೃಪ್ತಿ ಬೆನ್ನಲ್ಲೇ ಈಗ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅತೃಪ್ತರ ಗುಂಪಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಎದ್ದಿರುವ ಅಸಮಾಧಾನ ಸದ್ಯಕ್ಕೆ ಶಮನವಾಗುವ ಸಾಧ್ಯತೆ ಕಾಣುತ್ತಿಲ್ಲ. ಆನಂದ್‌ ಸಿಂಗ್‌, ಎಂಟಿಬಿ ನಾಗರಾಜ್‌ ಅತೃಪ್ತಿ ಬೆನ್ನಲ್ಲೇ ಈಗ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅತೃಪ್ತರ ಗುಂಪಿಗೆ ಸೇರಿದ್ದಾರೆ. ತಮ್ಮ ಕುಟುಂಬದವರಿಗೆ ಸಚಿವ ಸ್ಥಾನ ನೀಡದೇ ಇರುವುದಕ್ಕೆ ಅಸಮಾಧಾನಗೊಂಡು, ವರಿಷ್ಠರ ಭೇಟಿಗಾಗಿ ನವದೆಹಲಿಗೆ ತೆರಳಿದ್ದಾರೆ. ಹಾಗೆಯೇ ಮಾಜಿ ಸಚಿವ ಯೋಗೇಶ್ವರ್‌ ಕೂಡ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಪ್ರಯತ್ನ ಮಾಡುತ್ತಿದ್ದು, ಇದುವರೆಗೂ …

Read More »

ಇನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿಗಿಲ್ಲ ಜಾಗ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ. ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು ಮಾಡಲಾಗಿದ್ದು, ಅನಗತ್ಯ ಖರ್ಚು ವೆಚ್ಚ ಮಾಡಂದಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ …

Read More »

ನೀರಜ್ ಚೋಪ್ರಾ ಜೀವನಾಧಾರಿತ ಚಿತ್ರದಲ್ಲಿ ಅಕ್ಷಯ್ ಕುಮಾರ್?

ಮುಂಬೈ: ಟೋಕಿಯೊ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೋದಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತದ ನೀರಜ್ ಚೋಪ್ರಾ, ತಾರೆಯಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಹಿಂದೊಮ್ಮೆ ಸಂದರ್ಶನದಲ್ಲಿ ತಮ್ಮ ಜೀವನಾಧಾರಿತ ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಲು ಬಯಸುವುದಾಗಿ ನೀರಜ್ ಚೋಪ್ರಾ ಹೇಳಿಕೆ ನೀಡಿದ್ದರು. ಈಗ ಇದಕ್ಕೆ ಸಮಾನವಾದ ಹೇಳಿಕೆಯನ್ನು ಅಕ್ಷಯ್ ಕುಮಾರ್ ನೀಡಿದ್ದಾರೆ.   ‘ನನ್ನ ಜೀವನಾಧಾರಿತ ಚಿತ್ರ ಮಾಡುವುದಾದರೆ ನೀರಜ್ ಚೋಪ್ರಾ ನಟಿಸಲಿ’ …

Read More »

ನನ್ನ ವಿಡಿಯೋ, ಫೋಟೋ ನೋಡಿ ಶಿಲ್ಪಾ ಶೆಟ್ಟಿ ಮೆಚ್ಚಿದ್ದರು’: ಶೆರ್ಲಿನ್ ಚೋಪ್ರಾ

ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಬಂಧನ ಆಗಿದೆ. ಈ ಕೇಸ್‌ನಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ರಾಜ್ ಕುಂದ್ರಾ ಆಪ್ ಅಥವಾ ಸಂಸ್ಥೆಗೂ ಶಿಲ್ಪಾ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟಪಡಿಸಿದ್ದರು. ಆದರೆ, ರಾಜ್ ಕುಂದ್ರಾ ಪತ್ನಿಗೆ ಈಗಲೇ ಕ್ಲೀನ್ ಚಿಟ್ ಕೊಡಲು ಸಾಧ್ಯವಿಲ್ಲ ಎಂದು ಸಹ ಹೇಳಿದ್ದರು. ಅಶ್ಲೀಲ ವಿಡಿಯೋ …

Read More »

ಬಿಜೆಪಿ ಸರ್ಕಾರ ಇನ್ನೂ ಭದ್ರವಾಗಿಲ್ಲ ದ್ವೇಷದ ರಾಜಕಾರಣ ಮಾಡುತ್ತಿದೆ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ನಮ್ಮ ಸರ್ಕಾರವಿದ್ದಾಗಿನ ಯೋಜನೆಗಳ ಹೆಸರು ಹಾಗೂ ಪ್ಲೇಟ್ ಬದಲಾವಣೆ ಮಾಡುವ ಮೂಲಕ ಅದು ನನ್ನ ಸಾಧನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. …

Read More »

ಬೊಮ್ಮಾಯಿ ಅವರ ಸಂಪುಟದಲ್ಲಿ ಕಚ್ಚಾಟ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು: ಧ್ರುವನಾರಾಯಣ

ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ, ಹಲವು ಗೊಂದಲ, ಅಸಮಾಧಾನ, ಆಂತರಿಕ ಕಚ್ಚಾಟ ನಡೆಯುತ್ತಿರುದರಿಂದ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು. ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಿಲ್ಲ. ಭ್ರಷ್ಟಾಚಾರ ಆರೋಪ …

Read More »

ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ ಅವರು ನೂತನವಾಗಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ನೆರೆ ಹಾನಿ ವೀಕ್ಷಣೆ ಮಾಡಿ ಪರಿಹಾರ ಘೋಷಣೆ ಮಾಡುತ್ತಾರೆ ಮಾಡುತ್ತಾರೆ …

Read More »

ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವ?: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದೇನೆ. ಈ ಸಂಬಂಧ ಮಂಗಳವಾರ ಅಧಿಕಾರಿಗಳ ಸಭೆ ಕರೆದಿದ್ದು, ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜನರಿಗೆ ಹೊರೆಯಾಗಲು ಬಿಡುವುದಿಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದಲ್ಲಿ ಕೊವಿಡ್ 3ನೇ ಅಲೆ ತಡೆ ಮತ್ತು ಮಳೆ ಹಾನಿ ಪರಿಹಾರ ಬಗ್ಗೆ ಸೋಮವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. …

Read More »