ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನಿಖಿಲ್ ಅವರು; ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಿಕೆ ಹಾಗೂ ಆ ಬೆಳೆಗಾರರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ …
Read More »ಸರ್ವೇ ಕೆಲಸಕ್ಕೆ ತಂತ್ರಜ್ಞಾನ ಉಪಯೋಗಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ : ಕೃಷ್ಣ ಬೈರೇಗೌಡ
ಬೆಂಗಳೂರು : ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ. ಸರ್ವೇ ಆಯುಕ್ತರ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 465 ಜನ ಭೂ ಮಾಪಕರಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ನೀಡಿ ಮಾತನಾಡಿದರು. “ಸರ್ವೇ ಕೆಲಸವನ್ನು ಹಿಂದಿನಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ …
Read More »ಹಿಂದ್ವಿ ಸಾಮ್ರಾಜ್ಯ ನಮ್ಮ ದೇಶದಲ್ಲಿ ಸ್ಥಾಪನೆಯಾಗಬೇಕು – ಮಾಜಿ ಸಂಸದ ರಮೇಶ ಕತ್ತಿ.
ಹುಕ್ಕೇರಿ : ನಮ್ಮ ದೇಶದಲ್ಲಿ ಹಿಂದ್ವಿ ಸಾಮ್ರಜ್ಯ ಸ್ಥಾಪನೆಯಾಗಬೇಕು ಆಗ ಮಾತ್ರ ಛತ್ರಪತಿ ಶಿವಾಜಿ ಮಹಾರಾಜರ ಆತ್ಮಕ್ಕೆ ಶಾಂತಿ ಲಭಿಸುತ್ತದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪಟ್ಟಣದ ಅಡವಿ ಸಿದ್ಧೇಶ್ವರ ಮಠದ ಹತ್ತಿರ ನೂತನವಾಗಿ ಪ್ರತಿಷ್ಟಾಪಿಸಿದ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆಯನ್ನು ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳ ಮತ್ತು ಕ್ಯಾರಗುಡ್ಡದ …
Read More »“ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನಮ್ಮ ರಸ್ತೆ ಕೈಪಿಡಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ, ಬಿ ಎಂ ಆರ್ ಡಿ ಎ ಆಯುಕ್ತ ರಾಜೇಂದ್ರ ಚೋಳನ್, ಇಂಜಿನಿಯರ್ ಇನ್ …
Read More »ಸಂತೋಷ್ ಲಾಡ್ ಉಪಸ್ಥಿತಿಯಲ್ಲಿ ಸಕ್ಕರೆ ಕಾರ್ಖಾನೆಗಳ ನೌಕರರ ವೇತನ ಪರಿಷ್ಕರಣೆಯ ತ್ರಿಪಕ್ಷೀಯ ವೇತನ ಸಭೆ
ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಮತ್ತು ಕೃಷಿ ಮಾರುಕಟ್ಟೆ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ರವರ ಉಪಸ್ಥಿತಿಯಲ್ಲಿ ವಿಕಾಸಸೌಧದಲ್ಲಿ ಇಂದು ಸಕ್ಕರೆ ಕಾರ್ಖಾನೆಗಳ ನೌಕರರ ವೇತನ ಪರಿಷ್ಕರಣೆಯ ತ್ರಿಪಕ್ಷೀಯ ವೇತನ ಸಭೆ ನಡೆಯಿತು. ಸಭೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ಎನ್. ವಿ. ಪ್ರಸಾದ್, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್ ಸಕ್ಕರೆ ಕಾರ್ಖಾನೆಗಳ ನೌಕರ ವರ್ಗದ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
Read More »ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು : ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಹುಲಿಗೆ …
Read More »ಜೇಡಿ ಮಣ್ಣಿನಿಂದ ಸೃಜನಾತ್ಮಕವಾಗಿ ವಸ್ತುಗಳನ್ನು ತಯಾರಿಸಿದ ಬೆಳಗಾವಿ ಶಾಲಾ ಮಕ್ಕಳು.
ಬೆಳಗಾವಿ: ತಾಲೂಕಿನ ಬೆಳಗುಂದಿಯಲ್ಲಿರುವ ಬಾಲವೀರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಜೇಡಿಮಣ್ಣಿನಿಂದ ವಸ್ತುಗಳನ್ನು ತಯಾರಿಸುವ ವಿಶೇಷ ಉಪಕ್ರಮವನ್ನು ನಡೆಸಲಾಯಿತು. ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಜೇಡಿಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸಲು ಹೇಳಿದ್ದರು. ಅದರಂತೆ, ವಿದ್ಯಾರ್ಥಿಗಳು ಈ ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳು ಜೇಡಿಮಣ್ಣಿನಿಂದ ಎತ್ತುಗಳು, ಎತ್ತಿನ ಬಂಡಿಗಳು, ಆಟಿಕೆಗಳು ಮತ್ತು ಅಡುಗೆ ಪಾತ್ರೆಗಳನ್ನು ಸೃಜನಾತ್ಮಕವಾಗಿ ತಯಾರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರಾದ ತೇಜಸ್ವಿನಿ ಭಡಾಂಗೆ, ಸುಷ್ಮಾ ಸುತಾರ್, ಪೂಜಾ ಪಾಟೀಲ್, ಶೈಲಾ ಕೋಳಿ, …
Read More »ಯಾವುದೇ ಗೊಂದಲಗಳಿಲ್ಲದೆ ಪಿಯು ಪರೀಕ್ಷೆ ನಡೆಸಿ : ಪಿ.ಯು ಡಿ ಡಿ ಕರೆ
ಬೆಳಗಾವಿ: ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಸಿದ್ಧತೆಗಳ ಕುರಿತು ಮಹತ್ವದ ಸಭೆ ಇಂದು ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆಯಿತು ಸಭೆಯಲ್ಲಿ ಪಿಯು ಉಪ ನಿರ್ದೇಶಕರು , ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಜರಿದ್ದರು ಈ ಸಂದರ್ಭದಲ್ಲಿ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಕಾಲೇಜು ಉಪನಿರ್ದೇಶಕ ಪಿ.ಐ. …
Read More »ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಂದನೆ; ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶ
ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾರ್ಚ್ 1ರ ವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ. ಈ ಕುರಿತು ಧಾರವಾಡ ವಾರ್ತಾ ಇಲಾಖೆ ಮಾಹಿತಿ ನೀಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, …
Read More »ಹಿಂಡಲಗಾ ಜೈಲಿನ ಜಾಮರ್ ತಂದೊಡ್ಡಿದ ತೊಂದರೆ… ನೆಟವರ್ಕ್ ಸಿಗದೇ ಪರಿತಪಿಸುತ್ತಿರುವ ಜನತೆ..
ಬೆಳಗಾವಿ: ಹಿಂಡಲಗಾ ಜೈಲಿನ ವತಿಯಿಂದ ಜೈಲಿನ ಹಿತಾಸಕ್ತಿಯಲ್ಲಿ ಅಳವಡಿಸಿದ ಜಾಮರನಿಂದಾಗಿ ಜೈಲಿನ ಅಕ್ಕಪಕ್ಕದ ನಾಗರಿಕರಿಗೆ ನೆಟವರ್ಕ್ ಸಿಗದೇ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಬೆಳಗಾವಿಯ ಹಿಂಡಲಗಾ ಜೈಲಿನ ಮೂಲಕ ಜಾಮರ್ ಅಳವಡಿಸಲಾಗಿದ್ದು, ಜೈಲಿನ ಅಕ್ಕಪಕ್ಕದ ಜನವಸತಿಯಲ್ಲಿಯೂ ನೆಟವರ್ಕ್ ಸಿಗದೇ ಜನರಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಈಗಾಗಲೇ ನಾಗರೀಕರು ಜೈಲಿನ ಆಡಳಿತಕ್ಕೆ ಮನವಿಯನ್ನು ಸಲ್ಲಿಸಿದ್ದು, ಜಾಮರನ ಮಿತಿಯನ್ನು ಕಡಿಮೆಗೊಳಿಸಬೇಕೆಂದು ಆಗ್ರಹಿಸಲಾಗಿದೆ. ಕಳೆದ 5 ದಿನಗಳಿಂದ ಹಿಂಡಲಗಾ ಗ್ರಾಮ …
Read More »