Breaking News

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.

Read More »

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.

ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …

Read More »

ಉತ್ತರ ಪ್ರದೇಶ ಪೊಲೀಸರು ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಬಳಿ ಕ್ಷಮೆ ಯಾಚಿಸಿದ್ದಾರೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಹಾಥರಸ್​ಗೆ ಹೋದಾಗ ಅವರನ್ನು ಪೊಲೀಸರು ತಳ್ಳಿದ್ದಾರೆಂಬ ಆರೋಪ ಕೇಳಿಬಂದಿದೆ. ಮೊದಲ ದಿನ ಕಾಂಗ್ರೆಸ್​ ಕಾರ್ಯಕರ್ತರೊಂದಿಗೆ ಹಾಥರಸ್​ಗೆ ತೆರಳಿದ್ದಾಗ ನಡೆದ ನೂಕುನುಗ್ಗಲು, ಪೊಲೀಸರ ಲಾಠಿ ಚಾರ್ಜ್​ ವೇಳೆ ರಾಹುಲ್​ ಗಾಂಧಿಯವರು ಪೊದೆಗೆ ಬಿದ್ದಿದ್ದರು. ಆದರೂ ಬೆಂಬಿಡದೆ ಎರಡನೇ ಬಾರಿ ಭೇಟಿಗೆ ತೆರಳಿದ ಸಂದರ್ಭದಲ್ಲಿ ಪುರುಷ ಅಧಿಕಾರಿಯೋರ್ವ ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಹಿಡಿದು ಎಳೆದಿದ್ದಾರೆ. ಈ ಫೊಟೋ ಕೂಡ ಎಲ್ಲೆಡೆ …

Read More »

ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ:ಕೆಜಿಎಫ್​​ ಶಾಸಕಿ ರೂಪಾ ಶಶಿಧರ್​

ಕೋಲಾರ : ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ. ಅದು ಬದಲಾದಲ್ಲಿ ಮಾತ್ರ ಹೆಣ್ಣಿನ ರಕ್ಷಣೆ ಸಾಧ್ಯ ಎಂದು ಕೆಜಿಎಫ್​​ ಶಾಸಕಿ ರೂಪಾ ಶಶಿಧರ್​ ಉತ್ತರ ಪ್ರದೇಶ ಘಟನೆಯನ್ನ ಕಟುವಾಗಿ ಖಂಡಿಸಿದ್ದಾರೆ. ಇನ್ನು ಯುವತಿಯ ಮೇಲೆರೆಗಿ ಮೃಗಗಳಂತೆ ಕೆಲವರು ವರ್ತಿಸಿದರೆ, ಪೊಲೀಸ್ ಅಧಿಕಾರಿಗಳು ರಾತ್ರೋ ರಾತ್ರಿ ಸುಟ್ಟು ಹಾಕಿದ್ದಾರೆ, ಅಲ್ಲಿ ಯಾರೂ ಕೇಳುವವರು ಮಾಡುವವರು ಇಲ್ಲ, ಸ್ವಂತ ತಂದೆ …

Read More »

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ನಗರದ ಟಿಳಕವಾಡಿಯಲ್ಲಿ ಪುನರ್‌ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು. ‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ …

Read More »

ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. …

Read More »

ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ

ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್​ ಇನಾಮದಾರ್​, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್​ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ರಾಯಚೂರಿನ ಸದರ್​​ ಬಜಾರ್​​ ಪೊಲೀಸರು ಅಶೋಕ್​​ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಜಿಲಾನಿ, …

Read More »

ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆ

ಸಾಂಬ್ರಾ: ಬೆಳಗಾವಿ ಶಾಸ್ತ್ರೀನಗರದ 9ನೇ ಕ್ರಾಸ್‌ ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ರಾತ್ತಿ ಬೃಹತ್‌ ಹೆಬ್ಟಾವು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಶಾಸ್ತ್ರೀನಗರದ 9ನೇ ಕ್ರಾಸ್‌ ಬಳಿ ಚರಂಡಿಗೆ ಹೋಗುತ್ತಿದ್ದಾಗ ಜನರಿಗೆ ಕಾಣಿಸಿಕೊಂಡಿದೆ. ಹೆಬ್ಟಾವಿನ ದೃಶ್ಯಾವಳಿಯನ್ನು ಜನ ಮೊಬೈಲ್‌ಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣ ಹರಿ ಬಿಟ್ಟಿದ್ದಾರೆ. ಬಳಿಕ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜನರು ಮಾಹಿತಿ ನೀಡಿದ್ದಾರೆ. ಚರಂಡಿಯಲ್ಲಿ ಇಷ್ಟೊಂದು ಬೃಹತ್‌ ಗಾತ್ರದ ಹೆಬ್ಟಾವು ಪತ್ತೆಯಾಗಿದ್ದು, …

Read More »

ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ 11ನೆ ದಿನಕ್ಕೆ ಕಾಲಿಟ್ಟ ಮುಷ್ಕ್ ರ

ಗುಡಿಬಂಡೆ: ಕೋವಿಡ್ ನಿಯಂತ್ರಿಸುವಲ್ಲಿ ಮತ್ತು ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದರೂ ಸಹ ಸರ್ಕಾರ ನಮಗೆ ಸೇವಾ ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪ್ರತಿಭಟನೆ ಉದ್ದೇಶಿ ಸಂಘಟನೆಯ ತಾಲೂಕು ಅಧ್ಯಕ್ಷ ಈಶಣ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಸುಮಾರು …

Read More »

ಪವರ್ ಟಿವಿ ಕ್ಯಾಮೆರಾಮೆನ್ ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ನಲ್ಲಿ ಮೃತ ಪಟ್ಟಿದ್ದಾರೆ

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29), ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್’ನಲ್ಲಿ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಿಸಲಾಗಿತ್ತು. ಸುನೀಲ‌ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ …

Read More »