Breaking News

ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …

Read More »

ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ

ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.   ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ. ಕಾರಿನಲ್ಲಿ …

Read More »

ಜೇಮ್ಸ್ ಚಿತ್ರೀಕರಣ – ಶೂಟಿಂಗ್ ನೋಡಲು ಸೇರಿದ ಅಪಾರ ಅಭಿಮಾನಿಗಳು

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮ ಸೀಮಾ ವ್ಯಾಪ್ತಿಯ ವಾಣೀಭದ್ರೇಶ್ವರ ದೇವಸ್ಥಾನ ಬಳಿಯ ನಟ ಪುನೀತ ರಾಜಕುಮಾರ ನಟಿಸುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಿತ್ರ ತಂಡ ಹೊಸಪೇಟೆ ಸೇರಿದಂತೆ ನಾನಾ ಭಾಗಗಳಲ್ಲಿ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ. ಇಂದು ಗಂಗಾವತಿ ಭಾಗದಲ್ಲಿ ನಡೆಯುತ್ತಿರುವ ಶೂಟಿಂಗ್‍ಗೆ ಪುನೀತ್ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ಚಿತ್ರೀಕರಣ ಸ್ಥಳಕ್ಕೆ ಆಗಮಿಸಿದ್ದರು. ನೆಚ್ಚಿನ ನಟನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳನ್ನ …

Read More »

ಗಂಡ ಮೊಬೈಲ್ ಕಿತ್ತುಕೊಂಡಿದ್ದಕ್ಕೆಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ

ಮೈಸೂರು: ಗಂಡ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಗೃಹಿಣಿಯೋರ್ವಳು ಬೇಸತ್ತು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಗಾಯಿತ್ರಿ ಪುರಂನ ಎರಡನೇ ಹಂತದಲ್ಲಿ ನಡೆದಿದೆ. 24 ವರ್ಷದ ಸೂಫಿಯಾ ತನ್ನ ಮಕ್ಕಳಾದ ಮುನೇಜಾ (3) ಇನಯಾ (1) ಕೊಂದು ತಾನೂ ನೇಣಿಗೆ ಶರಣಾಗಿದ್ದಾಳೆ. ಸೂಫಿಯಾ ಪತಿ ಮುಜಾಮಿಲ್ ಎರಡು ದಿನಗಳ ಹಿಂದೆ ಪತ್ನಿ ಬಳಿ ಇದ್ದ ಮೊಬೈಲ್ ಅನ್ನು ಕಿತ್ತುಕೊಂಡಿದ್ದ. ಇದಕ್ಕೆ ಬೇಸರಗೊಂಡ ಸೂಫಿಯಾ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ …

Read More »

ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

ಬೆಂಗಳೂರು: ಸುಮಾರು ₹ 4,000 ಕೋಟಿ ರೂಪಾಯಿ ಮೌಲ್ಯದ ಐಎಂಎ ವಂಚನೆ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿವಿಐ ತನಿಖಾ ತಂಡ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಐಎಂಎ ಮಾಲೀಕ ಮೊಹಮ್ಮದ್ ಮನ್ಸೂರ್‌ ಖಾನ್‌, ಕೆಎಎಸ್‌ ಅಧಿಕಾರಿ ಎಲ್‌.ಸಿ. ನಾಗರಾಜ್‌ ಸೇರಿದಂತೆ ಕೆಲವರ ವಿರುದ್ಧ ಸಿಬಿಐ ಈ ಹಿಂದೆಯೇ ಆರೋಪಪಟ್ಟಿ ಸಲ್ಲಿಸಿತ್ತು. ಹೇಮಂತ್‌ ನಿಂಬಾಳ್ಕರ್‌, ಅಜಯ್‌ ಹಿಲೋರಿ …

Read More »

ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರು: ಖ್ಯಾತ ಕಿರುತೆರೆ ನಟ ಕೃಷ್ಣಮೂರ್ತಿ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡ ರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ನಾಡಿಗ್ ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದರು. ಹಿರಿಯ ನಟರಾಗಿರುವ ಕೃಷ್ಣಮೂರ್ತಿ ನಾಡಿಗ್ ನಾಲ್ಕು ದಶಕಗಳಿಂದ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಅಭಿನಯಿಸಿದ್ದಾರೆ. ಲಗ್ನ ಪತ್ರಿಕೆ ಧಾರಾವಾಹಿ ಮೂಲಕ ಜನಪ್ರಿಯರಾಗಿದ್ದ ನಾಡಿಗ್, ಪಲ್ಲವಿ ಅನು ಪಲ್ಲವಿ, ಮಾಹಾದೇವಿ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಅಭಿನಯಿಸಿದ್ದರು. ಇನ್ನು ಪೈಲ್ವಾನ್, ಆದಿಲಕ್ಷ್ಮಿ …

Read More »

ಭಾರತ ಯಾವಾಗಲೂ ಸಿದ್ಧವಾಗಿದೆ – ಕ್ಸಿ ಜಿನ್‍ಪಿಂಗ್ ಯುದ್ಧ ಹೇಳಿಕೆಗೆ ಶಾ ತಿರುಗೇಟು

ನವದೆಹಲಿ: ಪೂರ್ವ ಲಡಾಖ್‍ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದು, ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಭಾರತದ ಸಾರ್ವಭೌತ್ವ ಹಾಗೂ ಗಡಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಭಾರತದದೊಂದಿಗೆ ಯುದ್ಧಕ್ಕೆ ಚೀನಾ ಸಿದ್ಧವಾಗಬೇಕು ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಅಮಿತ್ ತಕ್ಕ ಉತ್ತರ ನೀಡಿದ್ದಾರೆ. …

Read More »

ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ,

ಮೂಡುಬಿದಿರೆ: ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ, 37 ವಿದ್ಯಾರ್ಥಿಗಳು 650 ಅಂಕ, 914 ವಿದ್ಯಾರ್ಥಿಗಳು 300ಕ್ಕೂ ಹೆಚ್ಚು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅರ್ನವ್ ಅಯ್ಯಪ್ಪ (685), ಅನರ್ಘ್ಯ ಕೆ. (683), ಪಿ.ಎಸ್. ರವೀಂದ್ರ (670), ಖುಷಿ ಚೌಗಲೆ (661), ಪೂಜಾ ಜಿ.ಎಸ್. (656), ಚಂದುಸೇನ್ ಪೈಲ್ವಾನ್ (651), ಚಿನ್ಮಯಿ ಆರ್.(650), …

Read More »

ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …

Read More »

ಭೀಮಾ ನದಿ ಪ್ರವಾಹ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇದೆ.

ಅಫಜಲಪುರ: ಭೀಮಾ ನದಿ ಪ್ರವಾಹ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇದೆ. ತಾಲ್ಲೂಕಿನ ಭೀಮಾ ಬ್ಯಾರೇಜಿನ ಹಿನ್ನೀರಿನಿಂದ ಕರಜಗಿ ಹೋಬಳಿಯ ಸುಮಾರು 20 ಗ್ರಾಮಗಳು ಮೂರಾಬಟ್ಟೆಯಾಗಿವೆ. ಸೊನ್ನ ಬ್ಯಾರೇಜನಿಂದ ಭೀಮಾ ನದಿಗೆ ಶನಿವಾರ 8.50 ಲಕ್ಷ ಕ್ಯುಸೆಕ್‌ ನೀರು ಹರಿಬಿಡುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭೀಮಾ ತೀರದ ಮಣ್ಣೂರ, ಹೊಸುರ, ಶೇಷಗೀರಿ, ಉಡಚಣ, ಭೋಸಗಾ, ಅಳ್ಳಗಿ(ಬಿ), ಗೌರ, ಬಂಕಲಗಾ, ಶಿರವಾಳ, ದಿಕ್ಸಂಗಾ, ತೆಲ್ಲುಣಗಿ, ನಂದರಗಿ ಸೇರಿದಂತೆ ಹಲವು ಹಳ್ಳಿಗಳು …

Read More »