ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್ಇಡಿ ಬಲ್ಬ್ ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಶುರುಮಾಡಿದ್ದು, ಗಾಬರಿಗೊಂಡ ಪೋಷಕರು ಕಾರಣ ತಿಳಿಯದೇ ಕೂಡಲೇ ಮಡಿಕೇರಿ ನಗರದ ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ಎಕ್ಸ್ರೇ ತೆಗೆಸಿ ನೋಡಿದಾಗ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತು ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ. ಆರಂಭದಲ್ಲಿ ಪಿನ್ ನುಂಗಿರಬಹುದೆಂದು …
Read More »ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ
ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು. ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ …
Read More »ನಾಡಪ್ರಭು ಕೆಂಪೇಗೌಡ ಜಯಂತಿ – ಇಂದು ಬೆಂಗಳೂರಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗಿಡ ನೆಟ್ಟು ವಿಶ್ವದಾಖಲೆ ಗುರಿಯೊಂದಿಗೆ ಹಸಿರು ಅಭಿಯಾನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30ರ ಅಂಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಅಭಿಯಾನ ಕೈಗೊಂಡಿದೆ. ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನಗಳು …
Read More »ಬಸ್ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ ಬೈರತಿ ಸುರೇಶ್
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದಾರೆ. ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಸಾರಿಗೆ ಸಚಿವ ಮಾತನಾಡಿ, ಕೇಂದ್ರ ಕಾರಣ ರಾಜ್ಯ ಕಾರಣ ಅಂತ ಮಾತಾಡಲ್ಲ. ಇಡೀ ದೇಶದಲ್ಲಿ ತೈಲ ದರ ಹೆಚ್ಚಾಗಿದೆ. ಅದಕ್ಕೆ ಅನುಪಾತವಾಗಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾವನೆ ಇದೆ. ಪ್ರಸ್ತಾವನೆ ಇನ್ನೂ ಪರಿಶೀಲನೆಯಲ್ಲಿದೆ. ಸಿಎಂ ಜತೆ ಮಾತಾಡ್ತೇವೆ, ಸರ್ಕಾರ ಏನು ತೀರ್ಮಾನ ತಗೊಳ್ಳುತ್ತೋ ಅದರ …
Read More »ಇಷ್ಟ ಇಲ್ಲ ಎಂದಿದ್ದರೆ ಮದುವೆಯನ್ನೇ ನಿಲ್ಲಿಸುತ್ತಿದ್ದೆವು: ಪೊಲೀಸರೆದುರು ಸಿಯಾ ಸಹೋದರನ ಮಾತು
ಮುಂಬೈ: ಕೇತನ್ ಜೊತೆ ಮದುವೆ ನನಗೆ ಇಷ್ಟ ಇಲ್ಲ ಎಂದು ಸಿಯಾ (Siya Goyal) ಹೇಳಿದ್ದರೆ ಆ ಮದುವೆಯನ್ನೇ ನಾವು ನಿಲ್ಲಿಸುತ್ತಿದ್ದೆವು ಎಂದು ಆಕೆಯ ಸಹೋದರ ಸಾಹಿಲ್ ಗೋಯಲ್ ಪೊಲೀಸರೆದುರು ಹೇಳಿದ್ದಾರೆ. ಜೂ.26 ರಂದು ಸುಮಾರು 10 ಗಂಟೆಗಳ ಕಾಲ ನಡೆದ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ ಸಾಹಿಲ್ ಈ ಹೇಳಿಕೆ ನೀಡಿದ್ದಾರೆ. ಪೊಲೀಸರು ಅವರನ್ನು ಬೆಳಿಗ್ಗೆ ವಿಚಾರಣೆಗೆ ಕರೆಸಿದ್ದರು. ಸಂಜೆ ಮನೆಗೆ ಮರಳಲು ಅವರಿಗೆ ಅವಕಾಶ ನೀಡಲಾಯಿತು. ವಿಚಾರಣೆಯ ವೇಳೆ …
Read More »ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ – ಸಿ.ಟಿ ರವಿ ನೇತೃತ್ವದ ಸಮಿತಿಯಿಂದ ಬಿವೈವಿಗೆ ವರದಿ ಸಲ್ಲಿಕೆ
ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು (ಜೂ.27) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ …
Read More »ಅಮಾನತುಗೊಂಡಿದ್ದ ಲೇಡಿ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು: ವಜ್ರ, ಚಿನ್ನ, ಫ್ಲಾಟ್ಗಳು ಪತ್ತೆ, ಎಸಿಬಿ ಅಧಿಕಾರಿಗಳೇ ಶಾಕ್
ಹೈದರಾಬಾದ್: ಅಮಾನತುಗೊಂಡಿದ್ದ ತಹಶೀಲ್ದಾರ್ ಮತ್ತು ಜಂಟಿ ಸಬ್ ರಿಜಿಸ್ಟ್ರಾರ್ ತುಮ್ಮಕೊಮ್ಮ ಸುಚರಿತ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ACB) ದಾಳಿ ನಡೆದಿದೆ. ಹೈದರಾಬಾದ್ನ ಶಮೀರ್ಪೇಟೆಯಲ್ಲಿನ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಆದಾಯದ ಮೂಲಗಳಿಗಿಂತಲೂ ಅಧಿಕವಾಗಿ ಸಂಪಾದಿಸಲಾಗಿದ್ದ ಬರೋಬ್ಬರಿ 5.05 ಕೋಟಿ ರೂಪಾಯಿ ಅಧಿಕೃತ ಮೌಲ್ಯದ ಅಕ್ರಮ ಆಸ್ತಿಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಇದರ ಅಸಲಿ ಮೌಲ್ಯ ಇನ್ನೂ ಹಲವು ಪಟ್ಟು ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಆರೋಪಿ ತುಮ್ಮಕೊಮ್ಮ ಸುಚರಿತ …
Read More »ಎಲ್ಆರ್ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ
ಗೋಕಾಕ: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ನಗರದ ಹಿಲ್ ಗಾರ್ಡನ್ ನಲ್ಲಿ ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ರಿವಾರ್ಡ್ ಮತ್ತು ಆತ್ಮ ಯೋಜನೆಗಳ ಅಡಿಯಲ್ಲಿ …
Read More »ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಗೂ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ
ರಾಜ್ಯ ಹಾಗೂ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ, ಬಂಧಿಸುತ್ತಿರುವ ಪೋಲಿಸರ ನಡೆ ಖಂಡಿಸಿ ಹಾಗೂ ಹೊಸದಾಗಿ ನೇಮಕವಾದ ದೇಶದ ರಕ್ಷಣಾ ಪಡೆಯ ಸೈನಿಕರು (ಅಗ್ನಿವೀರ)ಅವರ ನೇಮಕಾತಿ ಪ್ರಕ್ರಿಯೆಯ ಕೊನೆಯ ಹಂತದ ಪೋಲಿಸ್ ಠಾಣೆಯ ವಿಚಾರಣೆ ಪ್ರಕ್ರಿಯೆ ( ಪೋಲಿಸ್ ವೇರಿಪಿಕೇಷನ್) ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದ ಜಿಲ್ಲಾ ಪೋಲಿಸ್ …
Read More »ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ
ಮಂಡ್ಯ: ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು. ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ …
Read More »
Laxmi News 24×7