Breaking News

ಇಂಡಿಯಾ’ ಒಕ್ಕೂಟಕ್ಕೆ ಕಾಂಗ್ರೆಸ್‌ ಶಾಸಕರಿಂದಲೇ ಮೋಸ! MLC ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!

ಮುಂಬೈ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ , ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ (NDA Alliance) ಮಹಾರಾಷ್ಟ್ರದಲ್ಲಿ ಭಾರಿ ಹಿನ್ನಡೆ ಉಂಟಾಗಿತ್ತು. ಅದೇ ಸಮಯದಲ್ಲಿ, ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಭರ್ಜರಿ ಸಾಧನೆ ಮಾಡಿತ್ತು. ಆದರೆ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಆಟ ಫುಲ್ ತಲೆಕೆಳಗಾಗಿದೆ. ಹೌದು.. ಮಹಾರಾಷ್ಟ್ರದಲ್ಲಿ ನಿನ್ನೆ ನಡೆದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 9 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಪೈಕಿ …

Read More »

ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ. ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು. ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ …

Read More »

ಭ್ರಷ್ಟಾಚಾರ ಆರೋಪ ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು : ವಾಲ್ಮೀಕಿ ‌ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪದಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರನನ್ನು ವಶಕ್ಕೆ ಪಡೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಅನೇಕರು ಕೊಳ್ಳೆ ಹೊಡೆದ ಆರೋಪದಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ನಿನ್ನೆಯಿಂದ ಇಡಿ ಅಧಿಕಾರಿಗಳು ನಾಗೇಂದ್ರ …

Read More »

ಭ್ರೂಣಹತ್ಯೆ ಆರೋಪಿಗೆ ಹೂಮಳೆ ಸ್ವಾಗತ ;

ಬೆಳಗಾವಿ : ಹಣದ ಆಸೆಗಾಗಿ ಭ್ರೂಣಹತ್ಯೆ ಹಾಗೂ ಶಿಶು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಜೈಲು ಪಾಲಾಗಿದ್ದ ಕಿತ್ತೂರಿನ ನಕಲಿ ವೈದ್ಯನೆ ಊರಿನ ಜನ ಹೂ ಮಳೆ ಸ್ವಾಗತ ಕೋರಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈಧ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪಿ ಅಬ್ದುಲ್ ಲಾಡಖಾನ್ ಎಂಬಾತ ಭ್ರೂಣಹತ್ಯೆ ನಡೆಸುತ್ತಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ತಿಗಡೊಳ್ಳಿ ಗ್ರಾಮದ ತೋಟದ ಮನೆ ಆವರಣದಲ್ಲಿ ಹೂತಿದ್ದ ಮೂರು ಭ್ರೂಣಗಳ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಒಂದು‌ ಕಳಂಕ;ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …

Read More »

ಕೆಡಿಪಿ ಸಭೆಯಲ್ಲಿ ಕುಡುಕ ಶಿಕ್ಷಕರ ಕುರಿತು ಚರ್ಚೆ

ಬೆಳಗಾವಿ : ಕೆಲ‌ ಶಾಲಾ ಶಿಕ್ಷಕರು ದಿನನಿತ್ಯ ಶಾಲೆಗೆ ಮಧ್ಯಪಾನ ಮಾಡಿ ಬರುತ್ತಿರುವ ಕುರಿತು ದೂರುಗಳು ಬಂದಿದ್ದು ಇಂತಹ ಶಿಕ್ಷಕರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶುಕ್ರವಾರ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಧ್ಯಪಾನ ಮಾಡಿ ಶಾಲೆಗೆ ಬರುವ ಶಿಕ್ಷಕರ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ …

Read More »

ಮದ್ಯನೀತಿ ಹಗರಣ: ಅರವಿಂದ್​ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ …

Read More »

ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ …

Read More »

ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್​ಓಗೆ 7 ಲಕ್ಷ ರೂ. ವಂಚನೆ

ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್​ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಜಟಾಪಟಿ‌ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್​ಕುಮಾರ್ ಯರಗಲ್ ಡಿಹೆಚ್​ಓ ಕುರ್ಚಿಯಲ್ಲಿ …

Read More »

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »