ಬೆಂಗಳೂರು: ದೇಶದಾದ್ಯಂತ ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ವೈದ್ಯಕೀಯ & ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿ …
Read More »ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ
ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಗೋದು ಪಕ್ಕಾ ಎಂದಿದ್ದಾರೆ. ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದ, ಬಿಜೆಪಿ ಇದೀಗ ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದೆ. ನಾಚಿಕೆಯಾಗಬೇಕು ಇವರಿಗೆ, ಮಾನ ಮರ್ಯಾದೆ ಇದೆಯಾ ಬಿಜೆಪಿಯವರಿಗೆ ..? ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ. …
Read More »ಸಂಚಾರ ನಿಯಮ ಉಲ್ಲಂಘನೆಯಲ್ಲಿ ರವಿಕಾಂತೇಗೌಡರ ಅಭಿಮಾನಿ ದಾಖಲೆ ನಿರ್ಮಾಣ
ಬೆಂಗಳೂರು: ಸ್ಕೂಟರ್ ಮೇಲೆ ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಬೈಕ್ನ್ನು ಜಯನಗರ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಆಗಿರುವ ರವಿಕಾಂತೇಗೌಡ ಹೆಸರು ಬರೆಸಿಕೊಂಡು ನಿಯಮ ಉಲ್ಲಂಘಿಸುತ್ತಿದ್ದವರ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಕೆಎ 05 ಜೆಎಸ್ 2581 ನಂಬರಿನ ಸ್ಕೂಟರ್ ಸೀಜ್ ಮಾಡಲಾಗಿದೆ. ಸ್ವತಃ ರವಿಕಾಂತರೆಗೌಡರ ಆದೇಶದ ಮೇರೆಗೆ ಸ್ಕೂಟರ್ ಸೀಜ್ ಮಾಡಲಾಗಿದೆ. ಆರ್ಟಿಐ ಕಾರ್ಯಕರ್ತ ಗಿರೀಶ್ ಬಾಬು ಓಡಿಸುತ್ತಿದ್ದ …
Read More »ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು: ಮರಾಠಿಗರನ್ನ ಖುಷಿ ಪಡಿಸಲ ಬಿಜೆಪಿ ಮಾಸ್ಟರ್ ಪ್ಲ್ಯಾನ್!
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆಗಾಗಿ ಸೂತ್ರ ಸಿದ್ಧಪಡಿಸಿರುವ ಬಿಜೆಪಿ, ಮರಾಠ ಸಮುದಾಯವನ್ನು ಖುಷಿ ಪಡಿಸಲು ಪ್ಲ್ಯಾನ್ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಯೋಜನೆ ರೂಪಿಸಿರುವ ಬಿಜೆಪಿ ನಾಯಕರು, ಮರಾಠಿ ಭಾಷಿಕರಿಗೇ ಮೇಯರ್ ಹುದ್ದೆ ನೀಡಲು ಚಿಂತನೆ ನಡೆಸಿದೆ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಮರಾಠಿ ಭಾಷಿಕರು ಎಂಇಎಸ್ ಬದಲು ಬಿಜೆಪಿಗೆ ಜೈ ಎನ್ನುವ ಗಡಿ, ಭಾಷೆ ವಿಚಾರ ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ರಾಜಕೀಯ ಮಾಡುತ್ತಿದ್ದ …
Read More »ಕಲಬುರಗಿ: ಜೆಡಿಎಸ್ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಉದ್ಭವವಾಗಿದ್ದು, ಹೇಗಾದರೂ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಯಸಿರುವ ಬಿಜೆಪಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಅಖಾಡಕ್ಕೆ ಇಳಿಸಿದೆ. ಕಾಂಗ್ರೆಸ್ ಪಕ್ಷದ ಜತೆ ಮೈತ್ರಿಗೆ ಜೆಡಿಎಸ್ ಸಿದ್ಧವಾಗಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಜೆಡಿಎಸ್ ಪಕ್ಷದೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ರಾಜ್ಯ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಗಲಿಗೇರಿಸಿದೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ …
Read More »ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪ್ರಥಮ ವೀರಭದ್ರೇಶ್ವರ ಪ್ರಶಸ್ತಿ
ಬೆಳಗಾವಿ: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪ್ರಥಮ ವೀರಭದ್ರೇಶ್ವರ ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಹುಕ್ಕೇರಿ ಹಿರೇಮಠ ಪ್ರದಾನ ಮಾಡುವ ವೀರಭದ್ರೇಶ್ವರ ಪ್ರಶಸ್ತಿ ಇದಾಗಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಬೆಳಗಾವಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 14ರಂದು ವೀರಭದ್ರೇಶ್ವರ ಜಯಂತಿ ಇದೆ. ವೀರಭದ್ರೇಶ್ವರ ಜಯಂತಿಗೆ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಭಾದ್ರಪದ ಮಾಸ ಮೊದಲ ಮಂಗಳವಾರ ವೀರಭದ್ರೇಶ್ವರ ಜಯಂತಿ ಮಾಡಬೇಕೆಂದು ಪುರಾಣದಲ್ಲಿ ಉಲ್ಲೇಖವಾಗಿದೆ. ಆದರೆ …
Read More »ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, …
Read More »ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ: ಗೋವಿಂದ ಕಾರಜೋಳ
ಬೆಳಗಾವಿಯಲ್ಲಿ ಗಣೇಶೋತ್ಸವ 11 ದಿನ ಮಾಡಬೇಕೆಂದು ಯುವಕರು, ಹಿಂದು ಸಂಘಟನೆಗಳ ಒತ್ತಾಯವಿತ್ತು. ಹೀಗಾಗಿ 11 ದಿನಗಳ ಗಣೇಶೋತ್ಸವಕ್ಕೆ ಸೋಮವಾರ ಆದೇಶ ಬರಲಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಹತ್ವದ ಮಾಹಿತಿ ನೀಡಿದ್ದಾರೆ. ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಐತಿಹಾಸಿಕ ನಗರ ಅನ್ನೋದು ಸಾಬೀತು ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಇನ್ನು ಏನೇನು ಅಭಿವೃದ್ಧಿ ಕೆಲಸಗಳು ಆಗಬೇಕು, ಅದೆಲ್ಲವನ್ನು ನಾನು ಹಾಗೂ ದಕ್ಷಿಣ …
Read More »ಆಪರೇಷನ್ ಕಮಲ; ಎಲ್ಲೂ ಹೋಗದೆ ರೆಸಾರ್ಟ್ನಲ್ಲೇ ಉಳಿದುಕೊಂಡ ಕಲಬುರಗಿ JDS ಕಾರ್ಪೊರೇಟರ್ಗಳು
ಬೆಂಗಳೂರು: ಇತ್ತೀಚೆಗಿನ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ನಾಲ್ವರು ಜೆಡಿಎಸ್ ಕಾರ್ಪೊರೇಟರ್ಗಳು ಆಪರೇಷನ್ ಕಮಲದ ಭೀತಿಯಿಂದ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಯಾರಿಗೆ ಬೆಂಬಲ ನೀಡಬೇಕು ಎಂದು ಸೆಪ್ಟೆಂಬರ್ 7ನೇ ತಾರೀಕಿನಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ ಪಾಲಿಕೆ ಸದದ್ಯರು ಇನ್ನೂ ನಗರದ ಈಗಲ್ ಟನ್ ರೆಸಾರ್ಟ್ನಲ್ಲೇ ಉಳಿದುಕೊಂಡಿದ್ದಾರೆ. ಕಳೆದ ನಾಲ್ಕ ದಿನಗಳಿಂದ ಈಗಲ್ ಟನ್ …
Read More »ರಾಜಕಾರಣಿಗಳ ಹುಟ್ಟುಹಬ್ಬಕ್ಕಿಲ್ವಾ ಕೊರೊನಾ ನಿಯಮ? ಎಂಎಲ್ಸಿ ಹುಟ್ಟುಹಬ್ಬಕ್ಕೆ ಸಂಗೀತ ಸಂಜೆ
ಬಾಗಲಕೋಟೆ: ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬ ಹಿನ್ನೆಲೆ, ಕೋವಿಡ್ ನಿಯಮ ಗಾಳಿಗೆ ತೂರಿ ಹುಟ್ಟುಹಬ್ಬದಾಚರಣೆ ಮಾಡಲಾಗಿದೆ. ಸಚಿವ ಮುರುಗೇಶ್ ನಿರಾಣಿ ಸಹೋದರ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬದ ಹಿನ್ನೆಲೆ, ಬೀಳಗಿಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಜನ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಭಾಗಿಯಾಗಿದ್ದು ಕಂಡುಬಂತು. ಇನ್ನು ಗಣೇಶ್ ಉತ್ಸವ ಆಚರಣೆಗೆ ಕಠಿಣ ರೂಲ್ಸ್ ಜಾರಿ ಮಾಡಿ ಸರ್ಕಾರ ಆದೇಶವನ್ನ …
Read More »
Laxmi News 24×7