ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶವಿಲ್ಲವೆಂದ ಮೇಲೆ ಕೇಂದ್ರದ ಆಯುಷ್ಮಾನ್ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲ ಎಂದಾದರೆ ಈ ಯೋಜನೆ ಇರುವುದು ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರು ಉಚಿತವಾಗಿ …
Read More »ಕೊರೋನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ?: ಎಂ.ಬಿ. ಪಾಟೀಲ್ ಪ್ರಶ್ನೆ
ವಿಜಯಪುರ: ದೇಶದಲ್ಲಿ ಜನರು ಸಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರಾಜಪಥ ಅಭಿವೃದ್ಧಿ, ಪ್ರಧಾನಮಂತ್ರಿಗಳ ನಿವಾಸ, ಉಪರಾಷ್ಟ್ರಪತಿಗಳ ನಿವಾಸದ ಪ್ರಗತಿಗೆ ಸಾವಿರಾರು ಕೋಟಿ ವ್ಯಯಿಸುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ಸಮಯದಲ್ಲಿ ಸಂಸತ್ ನಿರ್ಮಾಣ ಕಾರ್ಯ ಬೇಕಿತ್ತಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿಯವರು ಈ ಹಿಂದೆ ಯಾವ ಮಹಾರಾಜರು ಮಾಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. …
Read More »ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ನೂಕಿದ ಸರ್ಕಾರ; ಲಸಿಕೆ ಕೊಡುವಲ್ಲೂ ವಿಫಲ: ಬದುಕು ಹಸನಾಗುವುದಿರಲಿ ಸತ್ತರೂ ಸಂಸ್ಕಾರವಿಲ್ಲದ ಸ್ಥಿತಿ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಆಕ್ಸಿಜನ್, ಐಸಿಯು ಆಯ್ತು ಈಗ ವ್ಯಾಕ್ಸಿನ್ ಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ದೂಡಿದ್ದೂ ಅಲ್ಲದೇ ಲಸಿಕೆ ಹಂಚಿಕೆಯಲ್ಲಿಯೂ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಆಕ್ಸಿಜನ್, ಐಸಿಯು, ರೆಮಿಡಿಸಿವಿರ್, ಬೆಡ್, ಚಿಕಿತ್ಸೆ ಕೊಡಲಾಗದೆ ಜನರನ್ನು ಹಾದಿ ಬೀದಿಯಲ್ಲಿ ಕೊಲ್ಲುತ್ತಿರುವ ರಾಜ್ಯ ಸರ್ಕಾರ ಲಸಿಕೆ ವೈಫಲ್ಯದ …
Read More »ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ.
ಹುಕ್ಕೇರಿ – ಹಿರಿಯ ಕಾಂಗ್ರೆಸ್ ಮುಖಂಡರೂ, ಮಾಜಿ ಪತ್ರಕರ್ತರೂ ಆಗಿದ್ದ ಹುಕ್ಕೇರಿಯ ಪ್ರಕಾಶ ದೇಶಪಾಂಡೆ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕೊರೋನಾದಿಂದಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿವಿಧ ಪತ್ರಿಕೆಗಳಿಗೆ ಬಿಡಿ ವರದಿಗಾರರಾಗಿ ಹಲವಾರು ವರ್ಷ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ, ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಸೇವಾದಳದಲ್ಲಿ ಕೆಲಸ ಮಾಡಿದ್ದರು. ಸಧ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹುಕ್ಕೇರಿ ಘಟಕದ ಅಧ್ಯಕ್ಷರಾಗಿಯೂ ಕೆಲಸ ಮಾಡುತ್ತಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ. …
Read More »ಇಂದಿರಾ ಕ್ಯಾಂಟೀನ್’ನಲ್ಲಿ ‘ಉಚಿತ ಊಟ’ ಕೊಡ್ತಾರೆ ಅಂತ ಹೋದವರಿಗೆ ಕಾದಿತ್ತು ಶಾಕ್ : ‘ಕಟ್ಟಿಕೊಟ್ಟ ಪೊಟ್ಟಣ’ದಲ್ಲಿ ಇದ್ದ ಊಟ ಎಷ್ಟು ಗೊತ್ತಾ.?
ಬೆಂಗಳೂರು : ಇಂದಿನಿಂದ ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಉಚಿತ ಊಟದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಬೆಳಿಗ್ಗೆ ತಿಂಡಿಗಾಗಿ ಇಂದಿರಾ ಕ್ಯಾಂಟೀನ್ ಮುಂದೆ ನೂರಾರು ಜನರು ಕ್ಯೂ ಕೂಡ ನಿಂತು ಇಂದಿರಾ ಕ್ಯಾಂಟೀನ್ ನೀಡುವಂತ ಆಹಾರದ ಪೊಟ್ಟಣವನ್ನು ಪಡೆದು, ಖುಷಿಯಿಂದ ತೆರಳಿ, ಓಪನ್ ಮಾಡಿದ ಅನೇಕರಿಗೆ, ಶಾಕ್ ಕಾದಿತ್ತು. ಅದೇನ್ ಅಂತ ಮುಂದೆ ಓದಿ.. ನಗರದಾಧ್ಯಂತ …
Read More »‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ
ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ 24ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಹೆಚ್ಚು ಜನ ಗುಂಪುಗೂಡಬಾರದೆಂದು ಆದೇಶ ಹೊರಡಿಸಲಾಗಿದೆ. ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಜನ ತೆರಳಿದ್ದು, ಬಹುತೇಕರು ನರೇಗಾ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳ ಆತಂಕ ಹಿನ್ನೆಲೆಯಲ್ಲಿ ಮೇ 24ರ ವರೆಗೆ …
Read More »ಬಡವರು, ವಲಸಿಗರು, ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮೇ 24 ರವರೆಗೆ ಉಚಿತ ಊಟ, ತಿಂಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಆಹಾರ
ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಉಚಿತವಾಗಿ ಆಹಾರ ಒದಗಿಸಲು ಆದೇಶಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರು, ವಲಸಿಗರು, ದುರ್ಬಲ ವರ್ಗದವರಿಗೆ ಹಸಿವು ನೀಗಿಸಲು ಮೇ 24 ರ ವರೆಗೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಆಹಾರ ಒದಗಿಸಲಾಗುವುದು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿರುವ 170ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಗಳು, ಬೆಂಗಳೂರಿನಲ್ಲಿರುವ 150 ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್ ಗಳು ಮತ್ತು 30 ಕ್ಕೂ ಅಧಿಕ …
Read More »ಕರ್ನಾಟಕದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್
ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 1,07,59,572 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ. 18 ರಿಂದ44 ವರ್ಷದೊಳಗಿನ 41,803 ಜನರಿಗೆ ಲಸಿಕೆ ಹಾಕಲಾಗಿದೆ. ಕರ್ನಾಟಕಕ್ಕೆ ಅಂದಾಜು 6.52 ಕೋಟಿ ಲಸಿಕೆ ಅಗತ್ಯವಿದೆ. ಹೀಗಾಗಿ ಸದ್ಯ ಕೇಂದ್ರ ಸರ್ಕಾರದ ಬಳಿ 2 ಕೋಟಿ ಕೊವಿಶೀಲ್ಡ್, 1 ಕೋಟಿ ಕೊವ್ಯಾಕ್ಸಿನ್ ಡೋಸ್ ಲಸಿಕೆ ಒದಗಿಸುವಂತೆ ಬೇಡಿಕೆ ಇಟ್ಟಿದ್ದೇವೆ. ಸೇರಮ್ ಸಂಸ್ಥೆಯಿಂದ ಕೊವಿಶೀಲ್ಡ್ ಲಸಿಕೆ ಪಡೆಯಲಾಗಿದೆ. ಭಾರತ್ ಬಯೋಟೆಕ್ ಸಂಸ್ಥೆ ಇನ್ನೂ ಕೊವ್ಯಾಕ್ಸಿನ್ ಪೂರೈಸಿಲ್ಲ. ಮೇ 3ನೇ …
Read More »ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ
ಮಂಗಳೂರು: ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಹಬ್ಬ ಆಚರಿಸುವಂತೆ ಉಳ್ಳಾಲ ಖಾಜಿ ಸೈಯದ್ ಕೂರತ್ ತಂಗಲ್ ಘೋಷಿಸಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ದುಬೈನಲ್ಲಿ ಗುರುವಾರದಂದು ರಂಜಾನ್ ಹಬ್ಬ ಆಚರಿಸಲಾಗುತ್ತದೆ. ಈ ಬಾರಿ ಕೊವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕಾರಣ ಈದುಲ್ ಫಿತ್ರ್ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸಬೇಕು. ಅತ್ಯಂತ ಸರಳವಾಗಿ ಆಚರಿಸಬೇಕು. ಬಡವರಿಗೆ ಹೆಚ್ಚಿನ ದಾನ ನೀಡಬೇಕು …
Read More »ಪಾಸಿಟಿವ್ ಬಂದರೆ ತಂಡದಿಂದ ಹೊರಕೆ : ಟೀಮ್ ಇಂಡಿಯಾಕ್ಕೆ ಬಿಸಿಸಿಐ ಖಡಕ್ ಸೂಚನೆ
ಹೊಸದಿಲ್ಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಭಾಗಿಯಾಗಲಿದೆ. ಇದಕ್ಕಾಗಿ ಈಗಾಗಲೇ ತಂಡವನ್ನು ಆಯ್ಕೆ ಮಾಡಲಾಗಿದ್ದು, ಜೂನ್ 2ರಂದು ಕ್ರಿಕೆಟಿಗರು ಇಂಗ್ಲೆಂಡಿಗೆ ವಿಮಾನವೇರಲಿದ್ದಾರೆ. ಆದರೆ ಇದಕ್ಕೂ ಮುನ್ನ ಬಿಸಿಸಿಐ ಎಲ್ಲ ಆಟಗಾರರಿಗೂ ಖಡಕ್ ಸೂಚನೆಯೊಂದನ್ನು ರವಾನಿಸಿದೆ. ಈ ಪ್ರವಾಸಕ್ಕೂ ಮುನ್ನ ಎಲ್ಲ ಆಟಗಾರರು ಮುಂಬಯಿಗೆ ಆಗಮಿಸಿದ ಬಳಿಕ 14 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಿದೆ. ಬಳಿಕ ಆಟಗಾರರಿಗೆ ಎರಡು ಬಾರಿ …
Read More »