ಚಿತ್ರದುರ್ಗ: ತಾಲ್ಲೂಕಿನ ಭರಮಸಾಗರ ಠಾಣೆಯ ವ್ಯಾಪ್ತಿಯ 13 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರಾಜೇಂದ್ರನಗರದ ನಿವಾಸಿ ಎಸ್.ದರ್ಶನ್ (21) ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ‘ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವ ಸಿಕ್ಕಿಬಿದ್ದ. ಆದರೆ, ಅವನಿಗೆ ₹ 10 ಸಾವಿರ ದಂಡ ಹಾಗೂ ಎರಡು …
Read More »ಸಚಿವರ ಪಟ್ಟಿ ಫೈನಲ್: ನಾಳೆ ಪ್ರಮಾಣವಚನ ಸ್ವೀಕಾರ; ಸಂಪುಟಕ್ಕೆ 20-24 ಮಂತ್ರಿಗಳ ಸೇರ್ಪಡೆ..
ರಾಜ್ಯದ ಮುಖ್ಯಮಂತ್ರಿಯಾದ ದಿನದಿಂದ ಬಸವರಾಜ ಬೊಮ್ಮಾಯಿ ಅವರಿಗೆ ಕಬ್ಬಿಣದ ಕಡಲೆಯಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕಡೆಗೂ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ 20ರಿಂದ 24 ಸಚಿವರು ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ. ಸೋಮವಾರ ರಾತ್ರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ …
Read More »ಆತ್ಮಹತ್ಯಾ ತಡೆ ಸಹಾಯವಾಣಿ ‘ಸಹಾಯ್’ಗೆ ಕರೆಗಳ ಹೆಚ್ಚಳ
ಘಟನೆ 1: 2020ರ ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್ ಲಾಕ್‌ಡೌನ್ ಆದ ಸಂದರ್ಭ. ವಿಮಾನ, ರೈಲು ಸೇವೆಗಳೆಲ್ಲ ಬಂದ್ ಆಗಿದ್ದವು. ಆಗ ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ ಫ್ಲ್ಯಾಟ್‌ನಲ್ಲಿ ಇದ್ದು ಓದುತ್ತಿದ್ದ ಯುವಕನೊಬ್ಬನಿಗೆ ಎಲ್ಲೂ ಓಡಾಡಲಾಗದ ಸನ್ನಿವೇಶ ಜುಗುಪ್ಸೆ ತರಿಸಿತು. ಮನಸ್ಸಿನಲ್ಲಿ ಆತ್ಮಹತ್ಯೆಯ ಆಲೋಚನೆ ಸುಳಿಯಿತು. ನವದೆಹಲಿಯಲ್ಲಿದ್ದ ತಂದೆ-ತಾಯಿಗೆ ಕರೆ ಮಾಡಿದ ಆತ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿರುವುದಾಗಿ ಹೇಳಿದ. ತಕ್ಷಣ ಆತನ ತಂದೆ-ತಾಯಿ ‘ಸಹಾಯ್’ ಹೆಲ್ಪ್‌ಲೈನ್ (08025497777)ಗೆ ಕರೆ ಮಾಡಿ ವಿಷಯ …
Read More »ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಮಾನಿಯೊಬ್ಬರು ದೀರ್ಘದಂಡ ನಮಸ್ಕಾರ ಸಲ್ಲಿಸಿದರು. ಇಲ್ಲಿನ ಶ್ರೀ ಸಿದ್ಧಾರೂಢ ದೇವಸ್ಥಾನದಲ್ಲಿ ಬೆಲ್ಲದ ಅಭಿಮಾನಿ ರಾಘು ಹಿರೇಗೌಡರ ಎನ್ನವವರು ದೀರ್ಘ ದಂಡ ನಮಸ್ಕಾರ ಸೇವೆ ಸಲ್ಲಿಸಿದರು. ನಂತರ ವಿಶೇಷ ಪೂಜೆ ಸಲ್ಲಿಸಿ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥನೆ ಮಾಡಿದರು. ಅರವಿಂದ ಬೆಲ್ಲದ ಅವರು ಈ ಭಾಗದ ಅಭಿವೃದ್ಧಿಗೆ ಸೂಕ್ತ ವ್ಯಕ್ತಿಯಾಗಿದ್ದಾರೆ. ವಿಶೇಷ ಹಾಗೂ ವಿನೂತನ …
Read More »ಕೆಲಸದ ಆಮಿಷವೊಡ್ಡಿ ಕರೆಸಿಕೊಂಡ ಭೂಪ; ಹಣ ದೋಚಿ ಪರಾರಿಯಾದ ಖದೀಮ
ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೇ ಕೆಲಸ ಕಳೆದುಕೊಂಡು ಹಲವರು ಸಂಕಷ್ಟಕ್ಕೀಡಾಗಿದ್ದರೆ ಇನ್ನು ಹಲವರು ಕೆಲಸದ ಆಮಿಷವೊಡ್ಡಿ, ವಂಚನೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಳ್ಳುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ಹೇಳಿ ಯುವಕನನ್ನು ಕರೆಸಿಕೊಂಡ ಖದೀಮನೊಬ್ಬ, ಆತನ ಬಳಿ ಇದ್ದ ಹಣ, ಎಟಿಎಂ, ಮೊಬೈಲ್, ಉಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿ ನಗರದಲ್ಲಿರುವ ಬಂಧನ್ ಬ್ಯಾಂಕ್ ಹೆಸರಲ್ಲಿ ರಾಜನ್ …
Read More »ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಮನವಿ
ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ …
Read More »ಡಿಸಿಪಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆ
ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ವಿಭಾಗದ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಕೋವಿಡ್ ನಿಯಮ ಪಾಲಿಸದೆ ಜನರು ಮಾರುಕಟ್ಟೆ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತೆಗೆದುಕೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆಯುಕ್ತರು ಚರ್ಚಿಸಿದರು. ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ …
Read More »ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ..
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ …
Read More »ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್’ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ನಿನ್ನೆ ನಡೆದ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿರುವ ಗೌರವ್ ಗುಪ್ತಾ ಅವರು, ಕೋವಿಡ್-19 ಪರೀಕ್ಷೆ ವರದಿ ಇಲ್ಲದೆ ಬೆಂಗಲೂರಿಗೆ ಬರುವ …
Read More »ಕೃಷಿ ಪಂಪ್ಸೆಟ್ಗೂ ಬರಲಿದೆ ಪ್ರಿಪೇಯ್ಡ್ ಮೀಟರ್
ಬೆಂಗಳೂರು (ಜು.03): ರೈತರ ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿ ಹಲವು ವಿವಾದಿತ ನಿಯಮವನ್ನು ಒಳಗೊಂಡ ವಿದ್ಯುತ್ ತಿದ್ದುಪಡಿ ಮಸೂದೆ-2021 ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ. ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್ ಮಸೂದೆ-2021 ಪ್ರಕಾರ, ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್ಪಿ ಪಂಪ್ಸೆಟ್ವರೆಗೆ …
Read More »
Laxmi News 24×7