Breaking News

ಮದ್ಯ ಕುಡಿಸಿ ಮಹಿಳಾ ಟೆಕ್ಕಿ ಮೇಲೆ ನೈಜೀರಿಯಾ ಪ್ರಜೆಗಳಿಂದ ಅತ್ಯಾಚಾರ – ಇಬ್ಬರ ಬಂಧನ

ಬೆಂಗಳೂರು, ಸೆ 04 : ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜೀರಿಯಾ ಪ್ರಜೆಗಳಿಬ್ಬರು ಬಂಧಿಸಲಾಗಿದೆ. ಮಹಿಳಾ ಟೆಕ್ಕಿ ಈ ಬಗ್ಗೆ ಬಾಣಸವಾಡಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ನೈಜೀರಿಯಾ ಪ್ರಜೆಗಳಾದ ಬಾಣಸವಾಡಿ ನಿವಾಸಿ ಟೋನಿ (35) ಹಾಗೂ ಉಬಾಕಾ (36) ಇವರಿಬ್ಬರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ. ಎಸ್‌.ಡಿ. ಶರಣಪ್ಪ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಯುವತಿ ಮೂಲತಃ ಕಲ್ಬುರ್ಗಿ ಜಿಲ್ಲೆಯವಳಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್‌ …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ksrtc.org/counselling ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೌನ್ಸೆಲಿಂಗ್ ಗಾಗಿ ನೌಕರರು ಸೆಪ್ಟೆಂಬರ್ 13 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿದ್ದರೆ …

Read More »

ಬೆಳಗಾವಿ: ಜಿಐಟಿಯಲ್ಲಿ ಪುಸ್ತಕ ಬಿಡುಗಡೆ

ಬೆಳಗಾವಿ: ಇಲ್ಲಿನ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಕೆಒಎಚ್‌ಎ-ಎಲ್‌ಐಎಸ್‌ಎ: ವರ್ಕಿಂಗ್ ಯೂಸರ್ ಮ್ಯಾನುಯಲ್’ ಎಂಬ ಪುಸ್ತಕವನ್ನು ಅಧ್ಯಕ್ಷ ಎಂ.ಆರ್. ಕುಲಕರ್ಣಿ, ಕರ್ನಾಟಕ ಕಾನೂನು ಸಂಸ್ಥೆಯ ಉಪಾಧ್ಯಕ್ಷ ಆರ್.ಬಿ. ಭಂಡಾರೆ, ಜಿಐಟಿ ಆಡಳಿತ ಮಂಡಳಿ ಸದಸ್ಯ ಎಸ್.ವಿ. ಗಣಾಚಾರಿ ಮತ್ತು ಪ್ರಾಂಶುಪಾಲ ಡಾ.ಜಯಂತ ಕೆ. ಕಿತ್ತೂರ ಈಚೆಗೆ ಬಿಡುಗಡೆ ಮಾಡಿದರು. ಪುಸ್ತಕವನ್ನು ಬೆಂಗಳೂರಿನ ಎಲ್‌ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ. ಕೊಣ್ಣೂರ ಅವರ ಮುನ್ನುಡಿ ಟಿಪ್ಪಣಿಯೊಂದಿಗೆ ಪ್ರಕಟಿಸಲಾಗಿದೆ. ರವಿ ಒಡೆಯರ, ಬಸವರಾಜ ಎಸ್. ಕುಂಬಾರ ಮತ್ತು …

Read More »

ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ. ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್​ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. …

Read More »

1 ರಿಂದ 5ನೇ ತರಗತಿ ಆರಂಭ- ಚರ್ಚೆ ನಡೆದಿಲ್ಲ: ಮುಖ್ಯಮಂತ್ರಿ

ಬೆಂಗಳೂರು: ಸದ್ಯ 6, 7 ಮತ್ತು 8ನೇ ತರಗತಿ ಆರಂಭಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ಸದ್ಯ ಯಾವುದೇ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರ‍್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ …

Read More »

ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿದ ಆರೋಪಿ

ಕಾರವಾರ: ಉತ್ತರ ಕನ್ನಡವೂ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯುವಕರಿಗೆ ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿ ಆರೋಪಿಯೋರ್ವ ವಂಚಿಸುತ್ತಿದ್ದು ಈತನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಎಸ್‌ಪಿ ಶಿವಪ್ರಕಾಶ ದೇವರಾಜು ಮಾಹಿತಿ ನೀಡಿದ್ದಾರೆ. ಕಾರವಾರದ ಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಂತೋಷ ತಿಪ್ಪಣ್ಣ ಗುದಗಿ ಎಂಬಾತ ಆರೋಪಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಮುಂಡಗೋಡ ಪಟ್ಟಣದ ಗುರುರಾಯ ರಾಯ್ಕರ ಎನ್ನುವವರು …

Read More »

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ ಮತ್ತೆ ಇವತ್ತು ಶನಿವಾರ ಬಂತು ನಮ್ಮ ತಂಡ ಅನ್ನ ಸಂತರ್ಪಣೆ ಮಾಡಲು ಇವತ್ತು ಸಜ್ಜಾಗಿದ್ದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಮ್ಮ ತಂಡ ಇಂದಿನ ಕಾರ್ಯಕ್ರಮ ರೂಪಿಸಿದೆ   ಹೌದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಿದ್ದಾರೂಢ ಮಠದಲ್ಲಿ ಇಂದಿನ ಅನ್ನ ಸಂತರ್ಪಣೆ ಮಾಡಲು ಶ್ರೀ ಸಂತೋಷ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅಲ್ಲಿ ಎಲ್ಲ ತಂಡ …

Read More »

ಅಚ್ಚರಿ ಬೆಳವಣಿಗೆ -ಸಿದ್ದರಾಮಯ್ಯರ ಭೇಟಿಯಾದ ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ಮಾಡಿದ್ದಾರೆ. ಶಿಕ್ಷಣ ಸಚಿವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭೇಟಿ ಮಾಡಿದ ಬಿಸಿ ನಾಗೇಶ್, ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಕೆಲವು ಹೊತ್ತುಗಳ ಕಾಲ ಇತ್ತೀಚೆಗಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿ.ಸಿ.ನಾಗೇಶ್​, ಇದೊಂದು ಸೌಜನ್ಯದ ಭೇಟಿ ಅಂತಾ ತಿಳಿಸಿದ್ದಾರೆ.

Read More »

ರಾಜ್ಯದಲ್ಲಿ ಮಳೆಗೆ 3 ವರ್ಷಕ್ಕೆ 302 ಬಲಿ; 1.78 ಲಕ್ಷ ಮನೆ ಹಾನಿ, 2,934 ಲಕ್ಷ ಹೆಕ್ಟೇರ್ ಬೆಳೆ ನಾಶ; ದೇಶಾದ್ಯಂತ 7,467 ಸಾವು

ಬೆಂಗಳೂರು: ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ಮಳೆಗೆ 302 ಜನ ಬಲಿಯಾಗಿದ್ದು, ದೇಶದಲ್ಲಿ 2018-19ರಿಂದ 2021-22ರ ಆ.3ರವರೆಗೆ 7,467 ಮಂದಿ ಮೃತಪಟ್ಟಿದ್ದಾರೆ. 35,20,467 ಮನೆಗಳು, ಲಕ್ಷಾಂತರ ಹೆಕ್ಟರ್ ಪ್ರದೇಶಗಳಲ್ಲಿ ಬೆಳೆದಿದ್ದ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ವಿವಿಧ ರಾಜ್ಯಗಳ ಮಳೆ ಅನಾಹುತದ ವರದಿಯಲ್ಲಿ ಉಲ್ಲೇಖಿಸಲಾಗಿದೆ. 3 ವರ್ಷಗಳಲ್ಲಿ ಕರ್ನಾಟಕದಲ್ಲಿ 1,78,722 ಮನೆಗಳಿಗೆ ಹಾನಿಯಾಗಿದ್ದು, 2,934 ಲಕ್ಷ ಹೆಕ್ಟರ್ ಪ್ರದೇಶಗಳಲ್ಲಿ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ …

Read More »

ಹಾವು ಕಚ್ಚಿ ತಂದೆ-ಮಗ ಇಬ್ಬರೂ ಸಾವು

ಚಿಕ್ಕೋಡಿ: ಹಾವು ಕಚ್ಚಿ ತಂದೆ-ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ (14) ಹಾಗೂ ಮುತ್ತಪ್ಪ ಬಾಳಪ್ಪ ಕುಂಬಾರ (40) ಮೃತ ದುರ್ದೈವಿಗಳು. ಕಳೆದ ಆಗಸ್ಟ್ 29 ರಂದು ಹಾವು ಕಚ್ಚಿತ್ತು. ಪರಿಣಾಮ ಆಗಸ್ಟ್ 31 ರಂದು ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 2 ರಂದು ಮುತ್ತಪ್ಪ ಬಾಳಪ್ಪ ಕುಂಬಾರ ಮೃತಪಟ್ಟಿದ್ದಾನೆ ಅಂತಾ ವರದಿಯಾಗಿದೆ. ಅಥಣಿ ಖಾಸಗಿ …

Read More »