ಬೆಂಗಳೂರು, ಜು. 27: ಅಧಿಕಾರದ ಆಸೆಗೆ ಬಿದ್ದು ಮಾತೃ ಪಕ್ಷಕ್ಕೆ ಮಣ್ಣೆರಚಿ ಬಿಜೆಪಿ ಸರ್ಕಾರವನ್ನು ಸ್ಥಾಪಿಸಿದ್ದ ಬಾಂಬೆ ಗ್ಯಾಂಗ್ ವಿಚಲಿತಕ್ಕೆ ಒಳಗಾಗಿದೆ. ಪ್ರಭಾವಿ ಖಾತೆಗಳನ್ನು ಕರುಣಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ಬದುಕನ್ನೇ ಮುಡಿಪಿಟ್ಟ ಬಿಎಸ್ವೈ ಅವರಿಂದಲೇ ರಾಜೀನಾಮೆ ಪಡೆದ ಬಿಜೆಪಿ ಪಕ್ಷ ಪಕ್ಷಾಂತರಿಗಳಿಗೆ ಮುಂದಿನ ದಿನಗಳಲ್ಲಿ ಎಷ್ಟು ಮರ್ಯಾದೆ ಕೊಡಬಹುದು ಎಂಬ ಪ್ರಶ್ನೆ ಎದುರಾಗಿದೆ. ಹಬ್ಬದ ಕೂಳಿಗೆ ಆಸೆ ಬಿದ್ದು ವರ್ಷದ ಕೂಳು …
Read More »ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ
ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …
Read More »ಮತ್ತೆ ಹೋರಾಟಕ್ಕೆ ಸಜ್ಜಾದ ಸಾರಿಗೆ ನೌಕರರು, ಫ್ರೀಡಂ ಪಾರ್ಕ್ನಲ್ಲಿ ಧರಣಿ
ಬೆಂಗಳೂರು, ಜು.27- ರಾಜ್ಯದ 4 ಸಾರಿಗೆ ನಿಗಮಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಜುಲೈ 29 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆಸಲಿವೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್.ಡಿ.ರೇವಪ್ಪ, ಕಳೆದ ಏಪ್ರಿಲ್ನಲ್ಲಿ ಸಾರಿಗೆ ನೌಕರರ ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ, ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕಾರ್ಮಿಕರನ್ನು ತೀವ್ರವಾದ ಶಿಕ್ಷೆಗೆ ಗುರಿಪಡಿಸಲಾಗಿದೆ. 4 ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾ, ವರ್ಗಾವಣೆ , …
Read More »ಕೊಪ್ಪಳದಲ್ಲಿ ಕೊರೊನಾ ಮೂರನೇ ಅಲೆಯ ಮುನ್ಸೂಚನೆ; ಆರು ಮಕ್ಕಳಲ್ಲಿ ಕೊರೊನಾ ಸೋಂಕು ಧೃಡ
ಕೊಪ್ಪಳ: ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲೆಡೆ ಕಟ್ಟುನಿಟ್ಟಾದ ಕ್ರಮಗಳನ್ನು ಮತ್ತೆ ಜಾರಿಗೊಳಿಸಬೇಕಾದ ಅನಿವಾರ್ಯತೆ ಕಾಣಿಸುತ್ತಿದೆ. ಅನ್ಲಾಕ್ ನಂತರ ಜನ ಸಂಪೂರ್ಣ ಮೈಮರೆತು ಮೋಜು ಮಸ್ತಿಯಲ್ಲಿ ತೊಡಗಿರುವುದರಿಂದ ಮೂರನೇ ಅಲೆ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಹೀಗಿರುವಾಗಲೇ ಕೊಪ್ಪಳದಲ್ಲಿ ಆರು ಮಕ್ಕಳಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಮತ್ತಷ್ಟು ಆತಂಕಕ್ಕೆ ಗುರಿ ಮಾಡಿದೆ. ಕೊಪ್ಪಳದ ಅಮೂಲ್ಯ ದತ್ತು ಕೇಂದ್ರದಲ್ಲಿನ ಆರು ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದತ್ತು ಕೇಂದ್ರದ …
Read More »ಇಂದೇ ಸಿಎಂ ಆಯ್ಕೆ, ನಾಳೆ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಆಗಮಿಸಿದ್ದು, ಇವರಿಬ್ಬರೂ ಕೆಲ ಕಾಲ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಹಸ್ಯ ಮಾತುಕತೆ ನಡೆಸಿದರು. ಇದೇ ವೇಳೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್ ಮತ್ತು ಕಿಶಾನ್ ರೆಡ್ಡಿ ಬರ್ತಿದ್ದಾರೆ. ಕೇಂದ್ರ …
Read More »ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಆಗಮನ; ಕೇಂದ್ರದ ವೀಕ್ಷಕರನ್ನು ಸ್ವಾಗತಿಸಿದ ಬಿಜೆಪಿ ನಾಯಕರು
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ತಿಳೀಸಿದ್ದಾರೆ. ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ …
Read More »ಇವತ್ತಿಂದ ಬಿಜೆಪಿ ಅವನತಿ ಆರಂಭ, ಪಕ್ಷ ಸರ್ವನಾಶ: ರುದ್ರಮುನಿ ಸ್ವಾಮೀಜಿ
ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ವೀರಶೈವ- ಲಿಂಗಾಯತ ನಾಯಕ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಮುಂದುವರಿಸಬೇಕು. ಈಗ ಪಡೆದಿರುವ ರಾಜಿನಾಮೆಯನ್ನು ವಾಪಸ್ ಪಡೆಯಬೇಕು ಎಂದು ರುದ್ರಮುನಿ ಸ್ವಾಮೀಜಿ ಮಂಗಳವಾರ ಬಿಜೆಪಿಯ ಹೈಕಮಾಂಡ್ ವಿರುದ್ದ ಗುಡುಗಿದ್ದಾರೆ. ಮುಖ್ಯಮಂತ್ರಿಸ್ಥಾನದಿಂದ ಬಿಎಸ್ ಯಡಿಯೂರಪ್ಪ ಅವರನ್ನು ಇಳಿಸಿ ಇಡೀ ರಾಜ್ಯದಲ್ಲೇ ಅತ್ಯಂತ ಪ್ರಬಲ ಸಮುದಾಯವನ್ನು ಎದುರು ಹಾಕಿಕೊಳ್ಳಲಾಗಿದೆ. ಈ ಕಾರಣದಿಂದ ಪಕ್ಷಕ್ಕೆ ನಷ್ಟವಾಗುತ್ತದೆ ಎಂದು ಹೇಳಿದರು. ಯಡಿಯೂರಪ್ಪ ಅವರು ಕೇವಲ ಲಿಂಗಾಯತರ ನಾಯಕರಾಗಿ ಮಾತ್ರ ಇರಲಿಲ್ಲ, …
Read More »ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ; ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕೈ ಪಕ್ಷಕ್ಕೆ ಸೇರ್ಪಡೆ
ಹುಬ್ಬಳ್ಳಿ: ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರನೂ ಆಗಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಜುಲೈ 30ರಂದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜುಲೈ 30ರ ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕೈ ಪಾಳಯಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಹುಬ್ಬಳ್ಳಿಯ ಗೋಕುಲ್ ಗಾರ್ಡನ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ. ಕೆಪಿಸಿಸಿ ಅಧ್ಯಕ್ಷ …
Read More »ಮಂಗಳವಾರ ಸಂಜೆ 7 ಘಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ನಲ್ಲಿ ನಡೆಯಲಿರುವ …
Read More »ಸಂಕಷ್ಟಗಳನ್ನು ಮೆಟ್ಟಿನಿಂತು ಶಿಕ್ಷಕಿಯಾದ ಯುವತಿಗೆ ರಾಜಭವನಕ್ಕೆ ಆಹ್ವಾನಿಸಿದ ರಾಜ್ಯಪಾಲರು..!
ಕುಮಿಲಿ: ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಹೈಸ್ಕೂಲ್ ಶಿಕ್ಷಕಿಯಾದ ಕೇರಳದ ಛೋಟ್ಟುಪರಾ ನಿವಾಸಿ ಸೆಲ್ವಮರಿಯನ್ನು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅಭಿನಂದಿಸಿದ್ದು, ರಾಜಭವನಕ್ಕೆ ಆಹ್ವಾನಿಸಿದ್ದಾರೆ. ಬಾಲ್ಯದ ದಿನಗಳಿಂದಲೂ ಸೆಲ್ವಮರಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ರಜಾದಿನಗಳಲ್ಲಿ ತಮ್ಮ ತಾಯಿಯ ಜತೆ ಏಲಕ್ಕಿ ತೋಟದಲ್ಲಿ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿ ನಿಲ್ಲುತ್ತಿದ್ದ ಸೆಲ್ವಮರಿ, ಕೆಲಸದ ನಡುವೆಯೂ ಓದಿನಲ್ಲೂ ಶ್ರಮವಹಿಸಿ ಇಂದು ಹೈಸ್ಕೂಲ್ ಶಿಕ್ಷಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಟುಂಬದ ಸಂಕಷ್ಟಗಳನ್ನು ಇನ್ನಷ್ಟು ದೂರ …
Read More »
Laxmi News 24×7