Breaking News

ಒಪ್ಪಿಗೆಯಿಲ್ಲದೆ ಫೋಟೋ ಬಳಕೆ- ಆ್ಯಪ್ ಕಂಪನಿ ವಿರುದ್ಧ ಸಂಸದೆ ದೂರು

ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್‍ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್‍ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …

Read More »

ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ

ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ ಮಾಡಿದ ಘಟನೆ ತಡರಾತ್ರಿ ನಡೆದಿದೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ತಡರಾತ್ರಿ ಮಹಿಳೆಯೊಬ್ಬಳಿಗೆ ಉಸಿರಾಟದ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಕೆಲ ಹೊತ್ತಿನಲ್ಲಿಯೇ ಮಹಿಳೆ ಮೃತಪಟ್ಟಿದ್ದಾಳೆ,ಆದ್ರೆ ಅವಳಿಗೆ ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಆರೋಪಿಸಿ,ಮೃತ ಮಹಿಳೆಯ ಸಮಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮಹಿಳೆ ಸಾವನ್ನೊಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಗದ್ದಲ …

Read More »

ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ

ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ.   ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ …

Read More »

Latest 3 ವಿಕೆಟ್‌ ಕಿತ್ತು ರೋಚಕ ತಿರುವು ನೀಡಿದ ಚಹಲ್‌ –R.C.B.10 ರನ್‌ಗಳ ಗೆಲುವು

ದುಬೈ: ಆರಂಭದಲ್ಲಿ ಬ್ಯಾಟ್ಸ್‌ ಮನ್‌, ನಂತರ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಹೈದರಾಬಾದ್‌ ಸನ್‌ ರೈಸರ್ಸ್‌ ವಿರುದ್ಧದ ನಡೆದ ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 10 ರನ್‌ಗಳಿಂದ ಜಯಗಳಿಸಿದೆ.ಗೆಲ್ಲಲು 164 ರನ್‌ಗಳ ಗುರಿಯನ್ನು ಪಡೆದ ಹೈದರಾಬಾದ್‌ 19.4 ಓವರ್‌ ಗಳಲ್ಲಿ 153 ರನ್‌ಗಳಿಗೆ ಆಲೌಟ್‌ ಆಯ್ತು. ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಮೂರು ವಿಕೆಟ್‌ ಕಬಳಿಸಿ ಪಂದ್ಯಕ್ಕೆ ರೋಚಕ ತಿರುವ ನೀಡಿದರೆ ಸೈನಿ ಎರಡು ವಿಕೆಟ್‌ ಕೀಳುವ ಮೂಲಕ ಆರ್‌ಸಿಬಿ …

Read More »

ಲೂಸ್ ಮಾದ, ಕ್ರಿಕೆಟಿಗ ಅಯ್ಯಪ್ಪ, ಸೇರಿದಂತೆ ಕೆಲ ಗಣ್ಯರ ಮಕ್ಕಳಿಗೆ ಡ್ರಗ್ಸ್ ಸಪ್ಲೈ ಇಬ್ಬರಿಗೆ ನೋಟಿಸ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್‍ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಲೂಸ್ ಮಾದ ಖ್ಯಾತಿಯ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ಮಾಡಿದ್ದೇವೆ. ಯೋಗಿ, ಅಯ್ಯಪ್ಪ ಅಲ್ಲದೇ ಸೀರಿಯಲ್‌ …

Read More »

ಹಲವು ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯಬ್ಬರ,ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬಹುತೇಕ ಬೆಳೆಗಳು ನಾಶ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆ ಆರೆಂಜ್ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಲಬುರಗಿಯ ಮಂದಿ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, …

Read More »

ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ. …

Read More »

ಇಂದು 7,339 ಮಂದಿಗೆ ಕೊರೊನಾ – 9,925 ಡಿಸ್ಚಾರ್ಜ್

ಬೆಂಗಳೂರು: ಇಂದು ಹೊಸದಾಗಿ 7,339 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 122 ಮಂದಿ ಕೋವಿಡ್-19ಗೆ ಬಲಿಯಾಗಿದ್ದಾರೆ. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‍ನಲ್ಲಿ 7,339 ಮಂದಿಗೆ ಸೋಂಕು ಬಂದಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾಗಿದೆ. ಈ ಪೈಕಿ 95,335 ಸಕ್ರಿಯ ಪ್ರಕರಣಗಳಿದ್ದು, 4,23,377 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಇಂದು 9,925 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 122 ಮಂದಿ ಸಾವನ್ನಪ್ಪುವ …

Read More »

ಡ್ರಗ್ಸ್‌ ಕೇಸ್‌- ಐಎಸ್‌ಡಿಯಿಂದ ಲೂಸ್‌ ಮಾದ ಯೋಗಿ, ಅಯ್ಯಪ್ಪ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ) ಖ್ಯಾತ ನಟ ಲೂಸ್‌ ಮಾದ ಯೋಗಿ ಮತ್ತು ಕ್ರಿಕೆಟರ್‌ ಅಯ್ಯಪ್ಪ ಅವರನ್ನು ವಿಚಾರಣೆಗ ಒಳಪಡಿಸಿದೆ. ಎರಡು ದಿನಗಳ ಹಿಂದೆ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಕಚೇರಿಯಲ್ಲಿ ಐಎಸ್‌ಡಿ ಎಡಿಜಿಪಿ ಭಾಸ್ಕರ್‌ ರಾವ್‌ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಗಿಣಿ ಮತ್ತು ಲೂಸ್‌ …

Read More »

ಸೋದರಿಯ ಶವಸಂಸ್ಕಾರಕ್ಕೆ ಬಂದು ಬಾವನನ್ನು ಹತೈಗೈದ ಅಣ್ಣ

ಬೆಂಗಳೂರು: ಭಾನುವಾರ ಕಾಡುಗೋಡಿಯಲ್ಲಿ ನಡೆದ ಹೆಚ್.ಎ.ಎಲ್ ಉದ್ಯೋಗಿ ರಾಜೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆ ನಡೆದ ಆರು ಗಂಟೆಗಳಲ್ಲಿ ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಾನ್‍ಪಾಲ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್‍ಪಾಲ್ ತಂಗಿ ಜಾಸ್ಮಿನ್‍ಗೆ ಏಳು ವರ್ಷಗಳ ಹಿಂದೆ ರಾಜೇಶ್ ಜೊತೆ ವಿವಾಹ ಮಾಡಲಾಗಿತ್ತು. ಇವರಿಗೆ ಐದು ವರ್ಷದ ಗಂಡು ಹಾಗೂ ಮೂರು ತಿಂಗಳ ಹೆಣ್ಣು ಮಗು ಇದ್ದು, ಕಾಡುಗೋಡಿಯ ವೀರಸ್ವಾಮಿರೆಡ್ಡಿ ಬಡಾವಣೆಯಲ್ಲಿ ವಾಸವಾಗಿದ್ದರು. …

Read More »