Breaking News

ಡೌನ್‌ಆಗಿದ್ದ ತರಕಾರಿ ಬೆಲೆ ಈಗ ಅಪ್‌

ಧಾರವಾಡ: ಲಾಕ್‌ಡೌನ್‌ ಅವಧಿಯಲ್ಲಿ ನಿರೀಕ್ಷಿತ ಬೆಲೆ ಸಿಗದೇ, ಮಾರಾಟವಾಗದೇ ತಿಪ್ಪೆಯ ಪಾಲಾಗುತ್ತಿದ್ದ ತರಕಾರಿ ಹಾಗೂ ಸೊಪ್ಪಿಗೆ ಇದೀಗ ಅನ್‌ಲಾಕ್‌ ನಂತರ ಬಂಪರ್‌ ಬೆಲೆ ಬಂದಿದೆ. ಕೋವಿಡ್‌ ನಿಯಂತ್ರಣಕ್ಕೆ ಜಾರಿ ಮಾಡಿದ ಲಾಕ್‌ ಡೌನ್‌ ಹಾಗೂ ವ್ಯಾಪಾರಕ್ಕೆ ನೀಡಿದ ಸೀಮಿತ ಅವಧಿಯ ಪರಿಣಾಮ ನಗರದ ಹೊಸ ಎಪಿಎಂಸಿ ಆವರಣದಲ್ಲಿ ಪ್ರತಿದಿನ ನಡೆಯುವ ಹೋಲ್‌ಸೇಲ್‌ ತರಕಾರಿ ಮಾರುಕಟ್ಟೆ ಆವರಣದಲ್ಲಿ ಬೆಲೆ ಕುಸಿತ ಹಾಗೂ ಮಾರಾಟವಾಗದ ಕಾರಣ ತರಕಾರಿ ಹಾಗೂ ಸೊಪ್ಪು ತಿಪ್ಪೆಯ ಪಾಲಾಗುತ್ತಿತ್ತು. …

Read More »

ಬಿಗ್​ಬಾಸ್​ ಮನೆ ಒಳಗೆ ಬರ್ತಿದ್ದಂತೆ ಫೈಟ್ ಶುರು ಮಾಡಿದ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್!

ಬೆಂಗಳೂರು: ಕರೊನಾ ಕಾರಣದಿಂದಾಗಿ ಮಧ್ಯಂತರದಲ್ಲೇ ನಿಲ್ಲಿಸಲಾಗಿದ್ದ ಬಿಗ್​ಬಾಸ್ ಇದೀಗ ಮತ್ತೊಮ್ಮೆ ಸೆಕೆಂಡ್​ ಇನ್ನಿಂಗ್ಸ್ ಮೂಲಕ ವೀಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಈಗಾಗಲೇ ಎಲ್ಲ ಸ್ಪರ್ಧಾಳುಗಳು ಮನೆ ತಲುಪಿದ್ದು ಕಲರ್ಸ್​ ಕನ್ನಡ ವಾಹಿನಿ ಅದರ ವಿಟಿಯನ್ನೂ ತೋರಿಸಿದೆ. ಆದರೆ ಒಂದು ವಿಟಿಯಲ್ಲಿ ದಿವ್ಯಾ ಸುರೇಶ್ ಹಾಗೂ ದಿವ್ಯಾ ಉರುಡುಗ ಹೊಡೆದಾಡಿಕೊಳ್ಳುತ್ತಿರುವ ದೃಶ್ಯವಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಬಿಗ್​ಬಾಸ್ ನೋಡಿದಾಗ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್ ಸ್ನೇಹಿತರಂತೆಯೇ ಕಾಣಿಸಿಕೊಂಡಿದ್ದಾರೆ. …

Read More »

ನೀರವ್, ಮಲ್ಯ, ಚೋಕ್ಸಿಯಿಂದ ವಶಕ್ಕೆ ಪಡೆದ ಆಸ್ತಿಯಲ್ಲಿ 9,371 ಕೋಟಿ ರೂ.ಗಳನ್ನು ಬ್ಯಾಂಕ್​ಗಳಿಗೆ ವರ್ಗಾಯಿಸಿದ ಇಡಿ

ನವದೆಹಲಿ: ಬ್ಯಾಂಕ್​ಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್​ ಮಲ್ಯ, ನೀರವ್​ ಮೋದಿ ಮತ್ತು ಮೆಹುಲ್​ ಚೋಕ್ಸಿಗೆ ಸಂಬಂಧಿಸಿದ 18 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದ್ದು, ಇದು ಬ್ಯಾಂಕುಗಳು ಅನುಭವಿಸಿದ ಒಟ್ಟು ನಷ್ಟದ 80% ಆಗಿದೆ. ಬುಧವಾರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇಡಿ ಕೇವಲ ಆಸ್ತಿಯನ್ನು ವಶಕ್ಕೆ ಪಡೆದಿರುವುದಲ್ಲದೆ, 9,371.17 ಕೋಟಿ ರೂಪಾಯಿಯನ್ನು ಸಾರ್ವಜನಿಕ ಬ್ಯಾಂಕ್​ ಮತ್ತು ಕೇಂದ್ರ …

Read More »

ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರ

ನವದೆಹಲಿ: ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರಗೊಂಡಿದ್ದು, ಡೆಲ್ಟಾ ಪ್ಲಸ್ ಮಾದರಿಯಾಗಿ ಬದಲಾವಣೆಗೊಂಡಿದೆ. ಹೊಸ ಹೆಮ್ಮಾರಿ ಯುವಕರನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿದೆ ಎಂಬ ಆತಂಕಕಾರಿ ವಿಷಯ ಹೊರಬಿದ್ದಿದೆ. ಕರ್ನಾಟಕ ಸೇರಿದಂತೆ ದೇಶದ ನಾಲ್ಕುರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಮಾದರಿಯ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಇಬ್ಬರು ಇಂತಹ ಸೋಂಕಿನಿಂದ ಬಳಲುತ್ತಿದ್ದಾರೆ. ಈ ನಡುವೆ ಕೊರೊನಾ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ ಸುಮಾರು 11,000 ಜನರ ಪೈಕಿ …

Read More »

ಸಿಡಿ ಬಹಿರಂಗ ಕೇಸ್; ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದೇನು?

ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಸಂತ್ರಸ್ತ ಯುವತಿಯೊಂದಿಗೆ ಮಾತನಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯೊಂದಿಗೆ ಮಾತನಾಡಿದ್ದೇನೆ. ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಹೇಳಿದ್ದೇನೆ. ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದರು. ಸದ್ಯ ಸಿಡಿ ಬಹಿರಂಗ ಕೇಸ್ …

Read More »

ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯ ಯುವತಿಗೆ ಬಂಧನ ಭೀತಿ ಶುರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಸಿಡಿ ಯುವತಿಗೆ ಬಂಧನ ಭೀತಿ ಶುರುವಾಗಿದೆ. ರಮೇಶ್ ಜಾರಕಿಹೊಳಿ ದೂರು ಆಧರಿಸಿ ಎಸ್ ಐಟಿ ಅಧಿಕಾರಿಗಳು ಯುವತಿಯನ್ನು ಬಂಧಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಯುವತಿ ಪರ ವಕೀಲ ಸಂಕೇತ್ ಏಣಗಿ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ದಾಖಲಿಸಿದ್ದರೂ ಕೂಡ ಈವರೆಗೂ ಮಾಜಿ ಸಚಿವರ …

Read More »

ಮರ ಸ್ಥಳಾಂತರದ ವಿವರ ನೀಡಲು ಸೂಚನೆ

ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಿರುವ ನಿರ್ದಿಷ್ಟ ಸ್ಥಳದ ವಿವರ ಸಲ್ಲಿಸುವಂತೆ ಮರಗಳ ತಜ್ಞರ ಸಮಿತಿಗೆ (ಟಿಇಸಿ) ಹೈಕೋರ್ಟ್‌ ನಿರ್ದೇಶನ ನೀಡಿದೆ. ಟಿಇಸಿ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು. ‘ಮರಗಳು ಇರುವ ಜಾಗದಿಂದ ಸಮೀಪದ ಸ್ಥಳಗಳನ್ನು ಗುರುತಿಸಿ ಅಂದೇ ಸ್ಥಳಾಂತರ ಮಾಡಬೇಕಾಗುತ್ತದೆ. ನಿರ್ದಿಷ್ಟ ಜಾಗವನ್ನು ಟಿಇಸಿ ಅಂತಿಮಗೊಳಿಸಿದ ಬಳಿಕವೇ ಸ್ಥಳಾಂತರ ಮಾಡಬೇಕು’ ಎಂದು …

Read More »

1.99 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌! ಇ-ಆಡಳಿತ ಇಲಾಖೆಯಿಂದ ಪತ್ತೆ

ಸಿಂಧನೂರು: ನಿರ್ಗತಿಕ ರಿಗೆ ಅಂತ್ಯೋದಯ, ಕಡು ಬಡವರಿಗೆ ಬಿಪಿಎಲ್‌ ಕಾರ್ಡ್‌ ನೀಡಿ ಆಹಾರ ಧಾನ್ಯ ನೀಡುತ್ತಿರುವ ಇಲಾಖೆಯೇ ಆಂತರಿಕ ತಪಾಸಣೆ ವೇಳೆ ಬೆಚ್ಚಿಬಿದ್ದಿದೆ. 7.5 ಎಕರೆಗೂ ಮೇಲ್ಪಟ್ಟು ಜಮೀನು ಹೊಂದಿದವರೂ ಅನ್ನಭಾಗ್ಯಕ್ಕಾಗಿ ಕಡು ಬಡವರ ಪಟ್ಟಿಗೆ ಸೇರಿಕೊಂಡಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲ 18,848 ಅನರ್ಹ ಅಂತ್ಯೋದಯ, 1,99,277 ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಕೂಡ ಪತ್ತೆಯಾಗಿವೆ. ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಭೂಮಿ ದಾಖಲೆಗಳನ್ನು ಪರಿಶೀಲಿಸಿದಾಗ ಆಹಾರ ಇಲಾಖೆಗೆ ಈ ಆಘಾತಕಾರಿ ಸಂಗತಿ ಗೊತ್ತಾಗಿದೆ. …

Read More »

ಸಂಸದೆಮಂಗಳಾ ಅಂಗಡಿಯವರಿಗೆ ಹೊಸ ಜವಾಬ್ದಾರಿ

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ. ಜಯಭೇರಿ ಬಾರಿಸಿದ್ದರು.

Read More »

ಕೋವಿಡ್‌ ನಿಂದ ಪೋಷಕರನ್ನು ಕಳೆದುಕೊಂಡಿರುವ ಅನಾಥ ಮಕ್ಕಳಿಗೆ ಧನಸಹಾಯ: ಸಚಿವೆ ಜೊಲ್ಲೆ

ಧಾರವಾಡ: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿರುವ ಪ್ರತಿ ಮಕ್ಕಳ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ರೂ.ಗಳನ್ನು ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಕಮಲಾಪುರದಲ್ಲಿ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದ ನಂತರ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಹುಬ್ಬಳ್ಳಿ- ಧಾರವಾಡದಲ್ಲಿ ಮೂರು ಜನ …

Read More »