ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು: ಈರಣ್ಣ ಕಡಾಡಿ

ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಕೃಷಿಗೆ ಸಂಬಂಧಿಸಿದ ನೀತಿಗಳು ಕೃಷಿಕರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ಎತ್ತಿ ಕಟ್ಟುತ್ತಿವೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು. ರೈತ ಪರ …

Read More »

ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ

ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.

Read More »

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು. ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು. ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು. ‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. …

Read More »

ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ :ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ರಾಜ್ಯ ರೈತ ಸಂಘದ ವಿವಿಧ ಬಣಗಳು, ಕೇಂದ್ರಿಯ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ( ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್), ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯ ವೇದಿಕೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿ …

Read More »

ಬಾಗಿಲು ತೆರೆದು ಅಂಗಡಿ ಮುಂದೆ ಸಾಷ್ಟಾಂಗ ನಮಸ್ಕಾರ

ಚಾಮರಾಜನಗರ: ಬಂದ್ ಗೆ ಕರೆ ನೀಡಿದ್ದರೂ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಅಂಗಡಿ ಮುಂದೆ ಕನ್ನಡ ಪರ ಹೋರಾಟಗಾರ ನಿಜಧ್ವನಿ ಗೋವಿಂದ ರಾಜು ಸಾಷ್ಟಾಂಗ ನಮಸ್ಕಾರ ಹಾಕಿ ಬಾಗಿಲು ಮುಚ್ಚಲು ಮನವಿ ಮಾಡಿದರು. ಪ್ರತಿಭಟನಾಕಾರರ ಕೋರಿಕೆ ಮೇರೆಗೆ ಅಂಗಡಿ ಬಾಗಿಲು ಹಾಕಲಾಯಿತು. ನಗರದಲ್ಲಿ ಬೈಕ್‌ ರ್ಯಾಲಿ ನಡೆಸುತ್ತಿರುವ ರೈತರು ತೆರೆದಿದ್ದ ಅಂಗಡಿಗಳ ಮುಚ್ಚಿಸುತ್ತಿದ್ದಾರೆ‌. ನಗರದ ಸಂತೇಮರಳ್ಳಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಅನ್ನು ಮುಚ್ಚಲು ಕೈ ಮುಗಿದು …

Read More »

ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ

ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,  ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. …

Read More »

ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು..

ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು.. ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ರಸ್ತೆಯ ಗುಂಡಿಯಲ್ಲಿ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಮಳೆಯಿಂದ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡುಗಳು ಬಿದ್ದು ಜನರು ಓಡಾಡಲು ಆಗದ ಸ್ಥಿತಿ ಇದೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ ಹಾಗೂ …

Read More »

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು. ತನ್ನ ವಿಶಿಷ್ಟ ಶೈಲಿಯ ಹಾಡುಗಾರಿಕೆಯಿಂದ ಅಭಿಮಾನಿಗಳನ್ನು …

Read More »

ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ..

ಹುಬ್ಬಳ್ಳಿ:ಇಂದು ಕೇಂದ್ರ ಸರ್ಕಾರದ ವಿರುದ್ಧ ಭಾರತ ಬಂದ್ ಗೆ ಹಲವಾರು ರೈತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬಂದ್ ಗೆ ಕರೆಯನ್ನು ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.. ಇಂದು ಬೆಳ್ಳಿಗ್ಗೆ ಇಂದಲೇ ವಿವಿಧ ಸಂಘಟನೆಗಳು ರಸ್ತೆಗೆ ಇಳಿದಿದ್ದು ಅಂಗಡಿ ಮುಂಗಟ್ಟುಗಳನ್ನು ತೆಗೆದವರಿಗೆ ಹೂ ಕೊಡುವುದರ ಮೂಲಕ ಬಂದ್ ಗೆ ಬೆಂಬಲ ಕೊಡಬೇಕು ಎಂದು ಮನವಿಯನ್ನು ಮಾಡಿಕೊಂಡರು. ಇನ್ನು ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ …

Read More »

ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್

ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …

Read More »