ಬೆಂಗಳೂರು: ಈ ವರ್ಷ ‘ಜಲಜೀವನ್ ಮಿಷನ್’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್ ಮಿಷನ್’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …
Read More »ಯಾರನ್ನು ಯಾರು ಬೆತ್ತಲೆ ಮಾಡುತ್ತಾರೋ?: ಕಾರಜೋಳ ವ್ಯಂಗ್ಯ
ಬೆಳಗಾವಿ: ‘ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ. ಕುಸ್ತಿಯನ್ನು ನೋಡೋಣ’. – ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ‘ಮುಂದಿನ ಮುಖ್ಯಮಂತ್ರಿ’ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ-ಡಾ.ಜಿ. ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. …
Read More »ಅಪ್ರಾಪ್ತ ಮಗಳು ಸೇರಿದಂತೆ ಪ್ರೇಮಿಗಳನ್ನು ಕಲ್ಲಿನಿಂದ ಜಜ್ಜಿ ಕೊಂದ ತಂದೆ!
ಅನ್ಯ ಕೋಮಿನ ಯುವಕನ ಜೊತೆಗಿದ್ದ ಮಗಳನ್ನು ನೋಡಿದ ತಂದೆ ಇಬ್ಬರು ಪ್ರೇಮಿಗಳನ್ನು ಬರ್ಬರವಾಗಿ ಕೊಂದ ಭೀಕರ ಘಟನೆ ಬಸವನಾಡು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಾದ ಬಸವರಾಜ ಬಡಿಗೇರಿ (19) ಹಾಗೂ ಖಾನಾಪುರ ಗ್ರಾಮದ 16 ವರ್ಷದ ಅಪ್ರಾಪ್ತ ಬಾಲಕಿ ದವಲಬಿ ತಂಬದ ಕೊಲೆಯಾದ ದುರ್ದೈವಿಗಳು. ಅನ್ಯ ಕೋಮಿನವನನ್ನು ಪ್ರೀತಿಗೆ ಅಪ್ರಾಪ್ತೆ ಮನೆಯಲ್ಲಿ ವಿರೋಧವಿತ್ತು. ಇಂದು ಮದ್ಯಾಹ್ನ ಇಬ್ಬರೂ ಒಟ್ಟಿಗೆ ಇದ್ದ …
Read More »ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಚಾಲನೆ
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆಗಾಗಿ ಉಚಿತವಾಗಿ ಟ್ಯಾಬ್ ನೀಡಲಾಗುವುದು. ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಟ್ಯಾಬ್ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.
Read More »ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ
ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …
Read More »ಕೋವಿಡ್ ನಿರ್ವಹಣೆ ಕುಳಿತು ಡಿಸಿಎಂ ಗೋವಿ ಕಾರಜೋಳ ಚರ್ಚೆ
ಚುನಾವಣೆಗೆ ಇನ್ನೂ ಒಂದು ಮುಕ್ಕಾಲುವರ್ಷವಿದೆ. ಈಗಲೇ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಂಗಿಕುಸ್ತಿ ಆರಂಭವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಗಳದ ಮಧ್ಯೆ ಡಾ.ಜಿ ಪರಮೇಶ್ವರ್ ಇಣುಕಿ ನೋಡುತ್ತಿದ್ದಾರೆ. ಅವರು ಕಷ್ಟದ ದಿನಗಳಲ್ಲಿ ಅಧ್ಯಕ್ಷರಾಗಿದ್ದರು. ಇನ್ನೇನು ಸಿಎಂ ಆಗಬೇಕು ಎನ್ನುವಷ್ಟರಲ್ಲಿ ಅವರನ್ನು ಸೋಲಿಸಿದ್ದರು. ಈಗ ಪರಮೇಶ್ವರ್ ಕೂಡ ಮುಖ್ಯಮಂತ್ರಿಯಾಗಬೇಕು ಎಂಬ ಚಿಂತನೆಯಲ್ಲಿದ್ದಾರೆ ಹಾಗಾಗಿ ಇಬ್ಬರ ಜಗಳದ ನಡುವೆ ಇವರು ಇಣುಕು ನೋಡುತ್ತಿದ್ದಾರೆ …
Read More »ಅಕ್ರಮ ಸಂಗ್ರಹ: 2261 ಚೀಲ ರಸಗೊಬ್ಬರ ಪತ್ತೆ
ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ₹11.05 ಲಕ್ಷ ಮೌಲ್ಯದ 2261 ಚೀಲ ವಿವಿಧ ಬಗೆಯ ರಸಗೊಬ್ಬರವನ್ನು ಕೃಷಿ ಇಲಾಖೆಯ ವಿಚಕ್ಷಣಾ ತಂಡದವರು ಸೋಮವಾರ ವಶಪಡಿಸಿಕೊಂಡಿದ್ದಾರೆ ಕಮತಗಿಯ ವಿನಾಯಕ ಕೃಷಿ ಕೇಂದ್ರ ಹಾಗೂ ಅನ್ನದಾನೇಶ್ವರಿ ಕೃಷಿ ಸೇವಾ ಕೇಂದ್ರಗಳ ಹೆಸರಿನ ಉಗ್ರಾಣಗಳಲ್ಲಿ ರಸಗೊಬ್ಬರದ ಚೀಲಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ವಿಚಕ್ಷಣಾ ತಂಡದ ಸಹಾಯಕ ನಿರ್ದೇಶಕರಾದ ಬಿ.ಜಿ.ಮಾಳೇದ, …
Read More »ಟಿಆರ್ಪಿ ಹಗರಣ: ಅರ್ನಬ್ ಆರೋಪಿ
ಮುಂಬೈ: ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯಕ್ಕೆ ಮುಂಬೈ ಪೊಲೀಸರು ಮಂಗಳವಾರ ಎರಡನೇ ಚಾರ್ಜ್ಶೀಟ್ ಸಲ್ಲಿಸಿದ್ದು, ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ. ಹಗರಣ ಕುರಿತು ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ನ ಕ್ರೈಂ ಇಂಟೆಲಿಜೆನ್ಸ್ ಯುನಿಟ್ (ಸಿಐಯು) ಈ ಚಾರ್ಜ್ಶೀಟನ್ನು ಸಲ್ಲಿಸಿದೆ. ‘ಚಾರ್ಜ್ಶೀಟ್ನಲ್ಲಿ ಹಲವು ಆರೋಪಿಗಳ ಹೆಸರುಗಳಿದ್ದು, ಅರ್ನಬ್ ಗೋಸ್ವಾಮಿ ಹಾಗೂ ಎಆರ್ಜಿ ಔಟ್ಲಿಯರ್ ಸಂಸ್ಥೆಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ’ ಎಂದು ಗೋಸ್ವಾಮಿ ಪರ …
Read More »ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿ
ಹೊಸದಿಲ್ಲಿ/ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ನಾಯಕತ್ವ ಕುರಿತಂತೆ ಚರ್ಚೆ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೋಮವಾರ ದೆಹಲಿಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಪದಾಧಿಕಾರಿಗಳ ನೇಮಕ ಹಾಗೂ ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗುವುದು. ನಾನು ಕಳೆದ ಒಂದು ವರ್ಷದಿಂದ …
Read More »ಹೈಕಮಾಂಡ್ ಗೆ ವರದಿ ಸಲ್ಲಿಸಿದ ಅರುಣ್ ಸಿಂಗ್; ಸಿ.ಟಿ. ರವಿ ವಿರುದ್ಧ ದೂರು ನೀಡಿದ್ರಾ ಬಿಜೆಪಿ ರಾಜ್ಯ ಉಸ್ತುವಾರಿ.?
ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ 3 ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ಸಲ್ಲಿಸಿದ್ದು, ಸಿಎಂ ಬಿ.ಎಸ್.ವೈ. ಪರ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅರುಣ್ ಸಿಂಗ್, ಓರ್ವ ಸಚಿವ, ಇಬ್ಬರು ಶಾಸಕರಿಂದ ಮಾತ್ರ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಸಿ.ಪಿ. ಯೋಗೇಶ್ವರ್, ಶಾಸಕ ಅರವಿಂದ್ ಬೆಲ್ಲದ್, …
Read More »