ಕೋಲಾರ: ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಸೋಮವಾರ ರಾತ್ರಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಕಾವ್ಯ ಮೃತ ದುರ್ದೈವಿ. 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆಗಿದ್ದರು. ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ವಾಸವಿದ್ದ ಕಾವ್ಯಾ, ನಿನ್ನೆ ರಾತ್ರಿ ನೇಣಿಗೆ ಕೊರಳೊಡ್ಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೋಡೋಕೆ ಸುಂದರವಾಗಿದ್ದು, ಒಳ್ಳೆಯ ಕೆಲವೂ ಗಿಟ್ಟಿಸಿಕೊಂಡಿದ್ದ ಯುವತಿ ದುರಂತ …
Read More »ಹೆಂಡತಿ ಮೇಲೇ ಅನುಮಾನ; ಕತ್ತು ಕೊಯ್ದು ಕೊಲೆ ಮಾಡಿದ ಪತಿರಾಯ!
ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರಬಹುದು ಎನ್ನುವ ಅನುಮಾನದಿಂದಾಗಿ ಗಂಡ, ಆಕೆಯ ಕತ್ತನ್ನೇ ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಣಿ (36) ಬೆಂಗಳೂರಿನ ಅರಕೆರೆ ಬಳಿಯ ಬಿಟಿಎಸ್ ಲೇಔಟ್ ಮಾಸವಿದ್ದ. ಹೆಂಡತಿ ಆಶಾ (32) ಜತೆ ಸೇರಿಕೊಂಡು ಪ್ರತಿನಿತ್ಯ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಆತನಿಗೆ ಇತ್ತೀಚೆಗೆ ಹೆಂಡತಿಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಅಕ್ರಮ …
Read More »ಶೀಲ ಶಂಕಿಸಿ ಪತ್ನಿ ಹತ್ಯೆ
ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದ್ದು, ಆರೋಪಿ ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು …
Read More »‘KPSC’ ಗೆ ಇಬ್ಬರು ಸದಸ್ಯರುಗಳನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯರುಗಳ ಸ್ಥಾನಕ್ಕೆ ಇಬ್ಬರನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಅಧಿಕಾರಿ ಸದಸ್ಯರಾಗಿ ಡಾ. ಶಾಂತಾ ಹೊಸಮನಿ, ರಕ್ತನಿಧಿ ವೈದ್ಯಾಧಿಕಾರಿ, ಕೆ ಸಿ ಜನರಲ್ ಆಸ್ಪತ್ರೆ ಇವರನ್ನು, ಅಧಿಕಾರೇತರ ಸದಸ್ಯರಾಗಿ ಡಾ. ಹೆಚ್ ಎಸ್ ನರೇಂದ್ರ ಇವರನ್ನು ನೇಮಕಗೊಳಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಡಾ, ಆನಂದ್ ಕೆ ಸುತ್ತೋಲೆ …
Read More »ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!
ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್ ಇನ್ನೋರ್ಚ ರೌಡಿ ಅನೀಸ್ ಎಂಬಾತನ …
Read More »NCB ಅಧಿಕಾರಿಗಳಿಂದ ಭರ್ಜರಿ ಬೇಟೆ: 2 ಟನ್ಗೂ ಹೆಚ್ಚು ಗಾಂಜಾ ವಶಕ್ಕೆ
ಬೆಂಗಳೂರು: ಬೆಂಗಳೂರು ವಲಯ ಎನ್ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ₹15 ಕೋಟಿ ಬೆಲೆಬಾಳುವ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್ನ ಪೆದ್ದ ಅಂಬರ್ಪೇಟ್ ಟೋಲ್ ಪ್ಲಾಜಾ ಬಳಿ ಟ್ರಕ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದ್ದು 2 ಟನ್ಗಿಂತಲೂ ಹೆಚ್ಚಿನ ಗಾಂಜಾವನ್ನ ಸೀಜ್ ಮಾಡಲಾಗಿದೆ. ಒಟ್ಟು 1,080 ಪ್ಯಾಕೆಟ್ಗಳಲ್ಲಿ ಗಾಂಜಾವನ್ನ ಸಾಗಾಟ ಮಾಡಲಾಗ್ತಿತ್ತು.. ಒಂದೊಂದು ಪ್ಯಾಕೆಟ್ನಲ್ಲಿ 2 ಕೆ.ಜಿ ಗಾಂಜಾ ಶೇಖರಿಸಲಾಗಿತ್ತು ಎನ್ನಲಾಗಿದೆ. ಹೈದರಾಬಾದ್ನಿಂದ …
Read More »ಹಂತ ಹಂತವಾಗಿ ಶಾಲಾ ಕಾಲೇಜು ತೆರೆಯಲು ತಜ್ಞರ ಸಮಿತಿ ಸೂಚನೆ: ಸಿಎಂ ಬಿಎಸ್ ವೈ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲೆ- ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಜ್ಞರ ಸಮಿತಿಯ ಸಭೆಯ ಬಳಿಕ ಮಾತನಾಡಿದ ಸಿಎಂ, ಕೊವಿಡ್ ನಂತರ ಆರೊಗ್ಯ ಸಮಸ್ಯೆ ಕಡೆಗೆ ಗಮನ ಹರಿಸಬೇಕು. 18 ವರ್ಷಕ್ಕಿಂತ ಹಿರಿಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿ ನಂತರ ಹಂತ ಹಂತವಾಗಿ ಕಾಲೇಜು ತೆರೆಯಲು ಸೂಚನೆ ನೀಡಿದ್ದಾರೆ ಎಂದರು. ಕೋವಿಡ್ ಮೂರನೇ ಅಲೆ …
Read More »ಡ್ರೋನ್ ಗಳಲ್ಲಿ ಔಷಧಿ ವಿತರಣೆ ಕಾರ್ಯ ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರಾರಂಭ
ಚಿಕ್ಕಬಳ್ಳಾಪುರ:ಭಾರತದಲ್ಲಿ ವೈದ್ಯಕೀಯ ಸೇವೆಗಳಿಗೆ ಬದಲಾವಣೆ ತರಲು ಸಾಬೀತುಪಡಿಸುವ ಈ ಕ್ರಮದಲ್ಲಿ, ಡ್ರೋನ್ ಮೂಲಕ ಔಷಧಿ ವಿತರಣೆಯ ಪ್ರಯೋಗವನ್ನು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಶಂಬುಕಾ ನಗರದಲ್ಲಿ ಪ್ರಾರಂಭಿಸಲಾಗಿದೆ. ಮುಂದಿನ 40 ರಿಂದ 45 ದಿನಗಳವರೆಗೆ ಬೆಂಗಳೂರು ಮೂಲದ ಥ್ರೊಟಲ್ ಏರೋಸ್ಪೇಸ್ ಸಿಸ್ಟಮ್ಸ್ (ಟಿಎಎಸ್) ಪ್ರಯೋಗಗಳನ್ನು ನಡೆಸಲಿದೆ. ಚಿಕ್ಕಬಳ್ಳಾಪುರದಲ್ಲಿ ಈ ಪ್ರಯೋಗಕ್ಕಾಗಿ ಎರಡು ಮೆಡಿಕಾಪ್ಟರ್ ಡ್ರೋನ್‌ಗಳನ್ನು ಬಳಸಲಾಗುತ್ತಿದೆ.ಮೊದಲ ಡ್ರೋನ್ 15 ಕಿ.ಮೀ ವ್ಯಾಪ್ತಿಯೊಂದಿಗೆ 1 ಕೆ.ಜಿ ವರೆಗೆ ತಲುಪಿಸುವ ಸಾಮರ್ಥ್ಯವನ್ನು …
Read More »ಕೋವಿಡ್ 3ನೇ ಅಲೆ- ಮಕ್ಕಳಿಗಾಗಿಯೇ ಪ್ರತ್ಯೇಕ ಆಸ್ಪತ್ರೆಗೆ ಚಿಂತನೆ: ಶಶಿಕಲಾ ಜೊಲ್ಲೆ
ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಆತಂಕ ಇರುವುದರಿಂದ ಬೆಂಗಳೂರಿನಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆ ಬಂದಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ‘ಈ ಕುರಿತು ಮುಖ್ಯಮಂತ್ರಿಯನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಅವರ ಅಂತಿಮ ಆದೇಶದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಮುದಾಯ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ
ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …
Read More »