Breaking News

ಮತ್ತೆ ಲಾಕ್‌ಡೌನ್ ಇಲ್ಲ; ಮೈಕ್ರೋ ಸೀಲ್‌ಡೌನ್‌ ಜಾರಿಗೆ ಚಿಂತನೆ..!

ಬೆಂಗಳೂರು : ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಡೆಯಲು ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾಗುವುದೇ ಎಂಬ ಚರ್ಚೆ ಆರಂಭವಾಗಿದೆ. ಆದರೆ ಈ ಹಿಂದಿನಂತೆ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗುವ ಸಾಧ್ಯತೆಗಳು ಇಲ್ಲ. ಆದರೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೈಕ್ರೋ ಸೀಲ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಕೋವಿಡ್‌ ನಿಯಂತ್ರಣ ಕುರಿತಂತೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ನಡೆಸಿದ ಸಂವಾದದಲ್ಲಿ ಈ ವಿಷಯ ಸೂಕ್ಷ್ಮವಾಗಿ …

Read More »

BSY ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮಂಡನೆ..!

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರವು ಸದನದ ವಿಶ್ವಾಸ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಅವಿಶ್ವಾಸ ಪ್ರಸ್ತಾಪಕ್ಕೆ ಅನುಮತಿ ಸಿಕ್ಕಿದೆ. ಕೋವಿಡ್‌ನಿಂದಾಗಿ ಆಡಳಿತಾರೂಢ ಬಿಜೆಪಿಯ ಹಲವು ಸಚಿವರು ಹಾಗೂ ಶಾಸಕರು ಸದನಕ್ಕೆ ಆಗಮಿಸುವುದು ಕಷ್ಟವಿರುವುದರಿಂದ ಈ ನಿರ್ಣಯ ಎದುರಿಸಿ ಗೆಲ್ಲುವುದು ಸಹಜವಾಗಿಯೇ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದೆ. ಗುರುವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ನೋಟಿಸ್‌ ನೀಡಲಾಗಿದ್ದು, …

Read More »

ಈ ವರ್ಷ ವ್ಯಾಕ್ಸಿನ್‌ ಅನುಮಾನ : ಜನರೇ ಎಚ್ಚರ

ಬೆಂಗಳೂರು : ಕೊರೋನಾ ಸೋಂಕಿಗೆ ಪ್ರಸಕ್ತ ವರ್ಷದಲ್ಲಿ ವ್ಯಾಕ್ಸಿನ್‌ ಬರುವುದು ಬಹುತೇಕ ಅನುಮಾನ. ಜತೆಗೆ, ಈ ಹಂತದಲ್ಲಿ ಲಾಕ್ಡೌನ್‌ ಮಾಡುವುದು ಸಹ ಪ್ರಯೋಜನಕಾರಿಯಲ್ಲ. ಹೀಗಾಗಿ ಸಾರ್ವಜನಿಕರೇ ಹೆಚ್ಚು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಕೊರೋನಾ ಟಾಸ್ಕ್‌ಫೋರ್ಸ್‌ ಸದಸ್ಯರಾದ ಡಾ.ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರೂ ಆದ ಮಂಜುನಾಥ್‌ ಅವರ ಪ್ರಕಾರ, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈಗಾಗಲೇ ಸೋಂಕು ಹರಡಿರುವುದರಿಂದ ಈ ಹಂತದಲ್ಲಿ …

Read More »

ಗೂಡ್ಸ್ ರೈಲು ಅಡಿಗೆ ಬಿದ್ದ ಎರಡು ವರ್ಷದ ಬಾಲಕ ಬಚಾವ್​ ಆಗಿದ್ದು ಹೇಗೆ ನೋಡಿ..

ಫರೀದಾಬಾದ್​: ಹರಿಯಾಣದ ಫರೀದಾಬಾದ್ ಜಿಲ್ಲೆಯ ವಲ್ಲಭಗಢ ರೈಲ್ವೆ ನಿಲ್ದಾಣದಲ್ಲಿ ಎರಡು ವರ್ಷದ ಬಾಲಕನೊಬ್ಬ ಗೂಡ್ಸ್ ರೈಲಿನ ಅಡಿಗೆ ಬಿದ್ದು ಅದೃಷ್ಟವಶಾತ್ ಒಂದಿನಿತೂ ಗಾಯವಿಲ್ಲದೆ ಬಚಾವ್ ಆಗಿದ್ದಾನೆ. ಈ ಕುರಿತ ವಿಡಿಯೋ ವೈರಲ್​ ಆಗಿದೆ. ಗೂಡ್ಸ್ ರೈಲ್​ ವೇಗವಾಗಿ ಸಂಚರಿಸುತ್ತಿದ್ದ ವೇಳೆ, ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹಳಿಯ ಮೇಲೆ ಈ ಬಾಲಕ ಆಡವಾಡುತ್ತಿದ್ದ. ದೂರದಿಂದ ಇದನ್ನು ಗಮನಿಸಿದ ಗೂಡ್ಸ್ ರೈಲಿನ ಲೋಕೊ ಪೈಲಟ್ ಕೂಡಲೇ ತುರ್ತು ಬ್ರೇಕ್ ಹಾಕಿದ್ದ. ಆದರೆ, ಅಷ್ಟರಲ್ಲಾಗಲೇ ಸಮಯ …

Read More »

ರಾಜ್ಯದ ಜನತೆಗೆ ಗುಡ್‌ ನ್ಯೂಸ್‌: ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಸಿಗಲಿದೆ ‘ಜನನ- ಮರಣ ಪ್ರಮಾಣ ಪತ್ರ’

ಮಂಗಳೂರು : ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 …

Read More »

ಉದ್ಯಮಿ ಪುತ್ರನ ಅಪಹರಣ: ಪೊಲೀಸರ ಮೇಲೆ ಹಲ್ಲೆ, ಆರೋಪಿಗೆ ಶೂಟ್‌

ಬೆಂಗಳೂರು : ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ಐದು ಲಕ್ಷ ರು.ಗಳಿಗೆ ಬೇಡಿಕೆ ಇಟ್ಟಿದ್ದ ಕಿಡಿಗೇಡಿಗೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಕೋಣನಕುಂಟೆ ನಿವಾಸಿ ಕೃಷ್ಣ ಅಲಿಯಾಸ್‌ ಆಟೋ ಕೃಷ್ಣ ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಹುಳಿಮಾವು ಸಮೀಪದ ಬೇಗೂರು-ಕೊಪ್ಪ ರಸ್ತೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದೆ. ಉದ್ಯಮಿ ಜೋಸೆಫ್‌ ಪುತ್ರ ಜೋಕಿಮ್‌ನನ್ನು ರಕ್ಷಿಸಲಾಗಿದೆ. ಬೇಗೂರು ಸುತ್ತಮುತ್ತ ಜೆಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಸಂತ್ರಸ್ತ ಜೊಕಿಮ್‌ ತಂದೆ ಜೋಸೆಫ್‌ …

Read More »

ಆನ್‍ಲೈನ್ ಅಪ್ಲಿಕೇಶನ್ ಬಳಸಿ ಕ್ರಿಕೆಟ್ ಬೆಟ್ಟಿಂಗ್- ಐವರ ಬಂಧನ

ಹಾಸನ: ಆನ್‍ಲೈನ್ ಅಪ್ಲಿಕೇಶನ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಆಕಾಶ್, ಕುಮಾರಸ್ವಾಮಿ, ಪೂರ್ಣಚಂದ್ರ, ಅವಿನಾಶ, ನಿರಂಜನ್ ಬಂಧಿತ ಆರೋಪಿಗಳು. ಇವರಲ್ಲಿ ಆಕಾಶ್ ಗ್ರಾಮ ಪಂಚಾಯಿತಿಯೊಂದರಲ್ಲಿ ಡಾಟಾ ಎಂಟ್ರಿ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಮೊಬೈಲ್, ನೋಟ್ ಬುಕ್ ವಶಕ್ಕೆ ಪಡೆಯಲಾಗಿದೆ. ಸತ್ಯಮಂಗಲ ಬಡಾವಣೆಯ ಕಾಂಪ್ಲೆಕ್ಸ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು …

Read More »

ಕಂಪ್ಲೀಟ್ ಲಾಕ್‍ಡೌನ್ ಮಾಡಿ:ಮಾಜಿಸ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯಗಳು ಕೊರೊನಾದೊಂದಿಗೆ ಬದುಕಿ ಎಂದು ಹೇಳುವ ಮೂಲಕ ನಮ್ಮ ಕೈಯಲ್ಲಿ ಸೋಂಕಿನ ನಿಯಂತ್ರಣ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ. ಶನಿವಾರ, ಭಾನುವಾರದ ಲಾಕ್‍ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಾಡಿದರೇ ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕಿದೆ ಎಂದು ಮಾಜಿಸ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಈ ಹಿಂದೆ ಲಾಕ್‍ಡೌನ್ ತೆಗೆದು ಹಾಕಿದಾಗ ಕೋವಿಡ್ ಹೆಚ್ಚಳ ಆಗಿತ್ತು. ಆದರೆ ಆಗ ಲಾಕ್‍ಡೌನ್ ಮುಂದುವರಿಸಬೇಕಿತ್ತು. …

Read More »

ಗೋಕರ್ಣದ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತ- ಭಾರೀ ಅನಾಹುತ ತಪ್ಪಿಸಿದ ಮರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ದೇವಸ್ಥಾನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗೋಕರ್ಣದ ಮಾಣೇಶ್ವರ ದೇವಸ್ಥಾನದ ಮೇಲ್ಭಾಗದಲ್ಲಿರುವ ಗುಡ್ಡ ಕುಸಿದಿದ್ದು, ಈ ವೇಳೆ ದೊಡ್ಡ ಕಲ್ಲುಬಂಡೆ ಜಾರಿದೆ. ಆದರೆ ಪಕ್ಕದಲ್ಲೇ ಬೃಹದಾಕಾರದ ಮರವಿದ್ದ ಕಾರಣ ಗುಡ್ಡದಿಂದ ಜಾರಿದ ಕಲ್ಲುಬಂಡೆ ಮರದ ಬಳಿ ನಿಂತಿದ್ದು, ದೊಡ್ಡ ಅನಾಹುತ …

Read More »

ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತ

ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36) ಮತ್ತು ಶಶಾಂಕ್ (10) ಎಂದು ಗುರುತಿಸಲಾಗಿದೆ. ರಿಪ್ಪನ್ ಪೇಟೆ ನಿವಾಸಿಗಳಾದ ಇವರು ಎರಡು ದಿನದ ಹಿಂದೆ ರಿಪ್ಪನ್ ಪೇಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಟಾಟಾ ಇಂಡಿಕಾ ಕಾರಿನಲ್ಲಿ …

Read More »