Breaking News

ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭ; ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ.   ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು …

Read More »

ತುಂಬಿದ ತುಂಗಾ; 21 ಕ್ರಸ್ಟ್ ಗೇಟ್ ಓಪನ್

ಶಿವಮೊಗ್ಗ : ಹಠಕ್ಕೆ ಬಿದ್ದಂತೆ ಮುಂಗಾರು ಸುರಿಯುತ್ತಿರುವ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದೆ. ಈಗಾಗಲೇ ಶಿವಮೊಗ್ಗ ತಾಲೂಕು ಗಾಜನೂರು ಗ್ರಾಮದ ಬಳಿಯ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಹರಿಸಲಾಗುತ್ತಿದೆ. ಅಣೆಕಟ್ಟಿನ 21 ಕ್ರಸ್ಟ್ ಗೇಟ್‍ಗಳ ಮೂಲಕ 7,300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 2.85 ಕ್ಯೂಸೆಕ್ ನೀರು ಸಂಗ್ರಹ ಸಾಮಥ್ರ್ಯವನ್ನು ಹೊಂದಿದೆ. 1,500 ಕ್ಯೂಸೆಕ್ ನೀರು ನದಿಗೆ ಹಾಗೂ ಉಳಿದ 5,800 …

Read More »

ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

Read More »

ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …

Read More »

ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ:

ಗೋಕಾಕ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೊಲ್ ಡೀಸೆಲ್ ಬೆಲೆಯನ್ನು ಏರಿಸುತ್ತಲೆ ಇದೆ ಇದಕ್ಕೆ ರಾಜ್ಯಾದ್ಯಂತ ಕಾಂಗ್ರೇಸ್ ಪಕ್ಷದ ನಾಯಕರು ಪ್ರತಿಭಟನೆ ಗಳನ್ನ ಮಾಡುತ್ತಾ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಂದು ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿ ಕೊಂಡಿದ್ದು ಜನರು ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ನರೇಂದ್ರ ಮೋದಿಯನ್ನ ವಿಭಿನ್ನ ರೀತಿಯಲ್ಲಿ ಟ್ರೊಲ್ ಕೂಡ ಮಾಡಿದ್ದಾರೆ. ಪೆಟ್ರೊಲ್ …

Read More »

ತಂದೆಗೆ ಕಾಡಿದ ಅನಾರೋಗ್ಯ.. ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಪುತ್ರನ ಬಂಧನ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು. ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ …

Read More »

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.. ನಲಪಾಡ್ ಸೇರಿ 10 ಜನರು ವಶಕ್ಕೆ​

ಕೋಲಾರ: ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್​​ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆ ಯೂತ್ ಕಾಂಗ್ರೆಸ್​​ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಕೋಲಾರ ನಗರದ ನಚಿಕೇತ ನಿಲಯ ಮುಂಭಾಗದಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಹ್ಯಾರೀಸ್, ಯೂತ್ ಕಾಂಗ್ರೆಸ್​​​ ಜಿಲ್ಲಾ …

Read More »

ಹೃದಯ ತಜ್ಞ ಅಂತ್ಹೇಳಿ ಮಹಿಳೆಗೆ ಫೇಕ್​​ ಡಾಕ್ಟರ್​​ನಿಂದ ₹80 ಲಕ್ಷ ದೋಖಾ

ಬೆಂಗಳೂರು: ಹೃದಯ ತಜ್ಞ ಅಂತ ಮಹಿಳೆ ಮುಂದೆ ಪೋಸ್​​ ಕೊಟ್ಟಿದ್ದ ನಕಲಿ ವೈದ್ಯನೊಬ್ಬ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಬಿಸ್ ಹಾರ್ಮನ್ ಎಂಬಾತ ಮಹಿಳೆಗೆ ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಗಂಡನನ್ನು ಕಳೆದುಕೊಂಡಿದ್ದ 50 ವರ್ಷದ ಮಹಿಳೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಇನ್​​​ಸ್ಟಾಗ್ರಾಂನಲ್ಲಿ ಹೃದಯ ತಜ್ಞರ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಗೆ ವಂಚಕ ಮಾಬಿಸ್ ಹಾರ್ಮನ್ ಪ್ರೊಫೈಲ್ …

Read More »

ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ. ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ …

Read More »

ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಟಿಂಗ್ ಆದ ನಂತರ ಯುವತಿ ನನಗೆ …

Read More »