Breaking News

ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು:  ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ.   v ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ …

Read More »

ಅಥಣಿಯಲ್ಲಿ ಹಾಸು ಹೊಕ್ಕಾಗಿರುವ ಶರಣ ಸಂಸ್ಕೃತಿ: ಶಿವಬಸವ ಸ್ವಾಮೀಜಿ

ಅಥಣಿ: ‘ಇಲ್ಲಿ ಶರಣ ಸಂಸ್ಕೃತಿ ಹಾಸುಹೊಕ್ಕಾಗಿದೆ. ಹೊರಗಿನಿಂದ ಬಂದವರೆಲ್ಲರನ್ನೂ ತಮ್ಮವರೆಂದು ಪ್ರೀತಿ, ವಿಶ್ವಾಸ ಕೊಟ್ಟು ಜಾತಿ, ಮತವೆನ್ನದೆ ಎಲ್ಲರನ್ನೂ ಅಪ್ಪಿಕೊಳ್ಳುವ ಗುಣ ಈ ಮಣ್ಣಿನದಾಗಿದೆ’ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು. ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಅವರ 128ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಭಾರತೀಯ ಆಹಾರ ಪದ್ಧತಿಯಲ್ಲಿ ದಿವ್ಯ ಔಷಧಿಗಳಿವೆ. ಆದಾಗ್ಯೂ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಸೋಂಕಿನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು. …

Read More »

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ :ಡಿಸಿಎಂ ಲಕ್ಷ್ಮಣ ಸವದಿ

ರಾಯಚೂರು : ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು. ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ …

Read More »

ಸಂಪುಟ ಪುನಾರಚನೆ : ಯಾರು ಇನ್, ಯಾರು ಔಟ್..?

ಬೆಂಗಳೂರು,ಸೆ.  ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಠರು ಮುಂದಾಗಿದ್ದು, ಹೆಚ್ಚು ಕ್ರಿಯಾಶೀಲರಲ್ಲದ ಹಾಗೂ ಒಂದು ವರ್ಷದಲ್ಲಿ ನಿರೀಕ್ಷೆಯಷ್ಟು ಸಾಧನೆ ಮಾಡದ 6 ರಿಂದ 8 ಸಚಿವರನ್ನು ಕೈಬಿಟ್ಟು, ಸಂಪುಟ ಪುನಾರಚನೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಹೀಗಾಗಿ ಮೂರು ದಿನಗಳ ಕಾಲ ನವದೆಹಲಿಗೆ ತೆರಳಿರುವ ಅವರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರು ಸೇರಿದಂತೆ ಮತ್ತಿತರರನ್ನು ಭೇಟಿಯಾಗಿ ಮಾತುಕತೆ …

Read More »

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ …

Read More »

ವಿಶ್ವಕರ್ಮ ಸಮುದಾಯ ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು: ಸತೀಶ ಜಾರಕಿಹೊಳಿ.

ವಿಶ್ವಕರ್ಮ ಸಮುದಾಯ ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು: ಸತೀಶ ಜಾರಕಿಹೊಳಿ ಬೆಳಗಾವಿ: ವಿಶ್ವಕರ್ಮ ಸಮುದಾಯದವರು ಸಾಮಾಜಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿ್ದರು. ಸಮೀಪದ ಹೊನಗಾ ಗ್ರಾಮದಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯಾವುದೇ ಸಮುದಾಯ ಬೆಳೆಯಲು ಶಿಕ್ಷಣ ಪ್ರಾಮುಖ್ಯತೆ ವಹಿಸುತ್ತಿದೆ. ಹೀಗಾಗಿ ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸಬೇಕು ಎಂದ ಅವರು ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯವಾಗಿ ಮುಂದೆ ಬರಬೇಕು ಎಂದರು. ಸಮುದಾಯದ …

Read More »

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿರೋಧ ಇಲ್ಲ, ಅವರಿಗೆ ಆಯಸ್ಸು ಆರೋಗ್ಯ ಸಿಗಲಿ ಅಂತ ನಾನೂ ಹೇಳ್ತೀನಿ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿರೋಧ ಇಲ್ಲ, ಅವರಿಗೆ ಆಯಸ್ಸು ಆರೋಗ್ಯ ಸಿಗಲಿ ಅಂತ ನಾನೂ ಹೇಳ್ತೀನಿ. ಆದರೆ ಅವರು ಮಾಡದಿರುವ ಸಾಧನೆಗಳನ್ನು ಅಬ್ಬರದ ಜಾಹೀರಾತು, ಪ್ರಚಾರದ ಮೂಲಕ ಬಿಂಬಿಸಿರುವುದಕ್ಕೆ ನನ್ನ ವಿರೋಧವಿದೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ   ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೋದಿ ಪ್ರಧಾನಿಯಾದ ಮೇಲೆ ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ನೋಟು ಅಮಾನ್ಯೀಕರಣ, ಜಿಎಸ್​ಟಿ ಜಾರಿ ಮಾಡಿದ …

Read More »

ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ.?

ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ದಲಿತರು ತಮ್ಮ ಮಾಲ್ಕಿ ಜಮೀನಿನಲ್ಲಿ ತಮಗೆ ಅನುಕೂಲ ಆಗುವ ಗೋಸ್ಕರ ರಸ್ತೆಯನ್ನು ಮಾಡಿಕೊಳ್ಳುವುದಕ್ಕೆ ಹೋದರೆ ಗ್ರಾಮದ ಬೇರೆ ಜಾತಿಯ ಪ್ರಭಾವಿ ವ್ಯಕ್ತಿಗಳು ತಮ್ಮ ತಮ್ಮ ಪ್ರಭಾವ ಬೀರಿ ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡುತ್ತಿದ್ದಾರೆ   ಇದೇ ಸಂದರ್ಭದಲ್ಲಿ ಗ್ರಾಮದ ದಲಿತ ಯುವಕರು ಮಾತನಾಡಿ ಹಲವಾರು ವರ್ಷದಿಂದ ರಸ್ತೆ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು ಇಲ್ಲಿ ದಲಿತರ ಜಮೀನು …

Read More »

ಸಾಹುಕಾರ್ ಮಾಡ್ತಾರಾ ಮಹಾರಾಷ್ಟ್ರದಲ್ಲಿ ಸರ್ಕಾರ್……!

ಹೊಸದಿಲ್ಲಿ: ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ.   ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ನಾಯಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ …

Read More »

ಗಡಿಯಲ್ಲಿ ಯುದ್ಧದ ಕಾರ್ಮೋಡ, ಲಡಾಖ್‌ನಲ್ಲಿ ಒಂದು ಲಕ್ಷ ಯೋಧರು!

ನವದೆಹಲಿ : ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನ ಪ್ಯಾಂಗಾಂಗ್‌ ಸರೋವರದ ದಕ್ಷಿಣ ದಂಡೆಯನ್ನು ವಶಪಡಿಸಿಕೊಳ್ಳಲು ವಿಫಲ ಯತ್ನ ನಡೆಸಿದ್ದ ಚೀನಾದ ಸೇನೆ ಇದೀಗ ಅಲ್ಲಿ 10 ಸಾವಿರ ಯೋಧರನ್ನು ಜಮಾವಣೆ ಮಾಡಿದೆ. ಅದರೊಂದಿಗೆ ಲಡಾಖ್‌ನ ನೈಜ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ)ಯ ಗುಂಟ ಚೀನಾ ನಿಯೋಜಿಸಿದ ಸೈನಿಕರ ಸಂಖ್ಯೆ 52 ಸಾವಿರಕ್ಕೆ ಏರಿಕೆಯಾಗಿದೆ. ಭಾರತ ಕೂಡ ಇದಕ್ಕೆ ಸರಿಸಮ ಪ್ರಮಾಣದಲ್ಲೇ ಸೇನೆಯನ್ನು ನಿಯೋಜಿಸಿದ್ದು, ಗಡಿಯಲ್ಲಿ ಯುದ್ಧಸದೃಶ ವಾತಾವರಣ ಇನ್ನಷ್ಟುಕಾವು ಪಡೆದಿದೆ ಎಂದು …

Read More »