Breaking News

ಘಟಪ್ರಭಾ, ಮಲಪ್ರಭಾ ಜೊತೆಗೆ ಕೃಷ್ಣಾ ನದಿ ಪ್ರವಾಹದ ಭೀತಿ- ನಡುಗಡ್ಡೆ ಜನ ಸ್ಥಳಾಂತರ

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕೊಂಚ ಬಿಡುವು ನೀಡಿದರೂ, ಪ್ರವಾಹ ಮಾತ್ರ ತಗ್ಗುತ್ತಿಲ್ಲ. ಇದರಿಂದಾಗಿ ನಡುಗಡ್ಡೆ ಜನರು ತೀವ್ರ ಆತಂಕಗೊಂಡಿದ್ದು, ಸ್ಥಳಾಂತರ ಕಾರ್ಯ ಮುಂದುವರಿದಿದೆಜಮಖಂಡಿ ತಾಲೂಕಿನಲ್ಲಿ ಆತಂಕ ಹೆಚ್ಚಾಗಿದ್ದು, ಮುತ್ತೂರು ನಡುಗಡ್ಡೆ ಜನರಿಗೆ ಕಳೆದ ಪ್ರವಾಹದ ಕಹಿ ನೆನಪು ಕಣ್ಮುಂದೆ ಬರುತ್ತಿದೆ. ಇಲ್ಲಿನ ಜನ ಸದ್ಯ ನಡುಗಡ್ಡೆ ತೊರೆದು ತುಬಚಿ ಗ್ರಾಮಕ್ಕೆ ಸ್ಥಳಾಂತರಗೊಂಡಿದ್ದಾರೆ. ಶೂರ್ಪಾಲಿ, ತುಬಚಿ, ಮುತ್ತೂರು ಕಂಣವಾಡಿ ಗ್ರಾಮಗಳ ಕೆಲ ಪ್ರದೇಶಗಳು ನಡುಗಡ್ಡೆಯಾಗಿವೆ. ಈ ಬಾರಿಯೂ ಪ್ರವಾಹದ ಆತಂಕ …

Read More »

ಧೋನಿಗೆ ವಿದಾಯ ಪಂದ್ಯ – ಬಿಸಿಸಿಐ ಹೇಳಿದ್ದೇನು?

ಮುಂಬೈ: ನಿವೃತ್ತಿ ಘೋಷಣೆ ಮಾಡಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ವಿದಾಯ ಪಂದ್ಯವನ್ನು ಆಡಿಸಬೇಕು ಎಂಬ ಮಾತು ಎಲ್ಲೆಡೆ ಕೇಳಿಬರುತ್ತದೆ.ಅಗಸ್ಟ್ 15ರಂದು ಸಂಜೆ ಎಂಎಸ್ ಧೋನಿಯವರು ಕೇವಲ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿದ್ದರು. ಈ ಮೂಲಕ ಮತ್ತೆ ಧೋನಿಯವರನ್ನು ನೀಲಿ ಜೆರ್ಸಿಯಲ್ಲಿ ನೋಡಾ ಬಯಸಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಜೊತೆಗೆ ವಿದಾಯ ಪಂದ್ಯವಾಡದೇ ಧೋನಿ ನಿವೃತ್ತಿ ಹೊಂದಿದ್ದು, ಅವರ ಅಭಿಮಾನಿಗಳಿಗೆ ಬೇಸರ ತರಿಸಿತ್ತು. …

Read More »

ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ.

ತುಮಕೂರು: ಮಹಾಮಾರಿ ಕೊರೊನಾ ಮನುಷ್ಯತ್ವದ ಪರೀಕ್ಷೆ ಮಾಡ್ತಿದೆ. ಕೊರೊನಾದಿಂದ ತಮ್ಮವರೇ ತಮ್ಮ ಜೊತೆಗಿದ್ದವರೇ ತಮಗೆ ಬೇಕಾದವರೇ ಮೃತಪಟ್ಟರೂ ಅವರ ಅಂತ್ಯಸಂಸ್ಕಾರಕ್ಕೆ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ಇಂಥದ್ದೊಂದು ವಿಚಿತ್ರ ಸನ್ನಿವೇಶಕ್ಕೆ ತುಮಕೂರು ಸಾಕ್ಷಿ ಆಗಿದೆ.ಸಂಬಂಧಿಕರು ಬರದೇ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ. ಇದುವರೆಗೂ ಜಿಲ್ಲೆಯಲ್ಲಿ 3,470 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 108 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇವುಗಳಲ್ಲಿ 40 ಶವಗಳನ್ನು ಸಂಬಂಧಿಕರು ಸ್ವೀಕರಿಸಿಯೇ ಇಲ್ಲ. ಹೀಗಾಗಿ ಸ್ವಯಂಸೇವಕರ ಸಹಕಾರದೊಂದಿಗೆ …

Read More »

ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ:

ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …

Read More »

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?

ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್‌ ಸಚಿವ ಸ್ಥಾನಕ್ಕೆ ಲಾಬಿಗೆ …

Read More »

ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಹಾರಕ್ಕೆ 1 ಕೋಟಿ ರೂ. ದೇಣಿಗೆಯನ್ನು ನೀಡುವ ಮೂಲಕ ಮಾನವೀಯತೆ ಮೆರೆದ ಅಕ್ಷಯ್ ಕುಮಾರ್

ಮುಂಬೈ, – ಕೊರೊನಾ ದಿಂದಾಗಿ ನಲುಗುತ್ತಿರುವ ಜನರ ನೆರವಿಗಾಗಿ 25 ಕೋಟಿ ನೆರವು ನೀಡಿದ್ದ ಬಾಲಿವುಡ್ ನಟ ಅಕ್ಷಯ್‍ಕುಮಾರ್ ಅವರು ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಹಾರಕ್ಕೆ 1 ಕೋಟಿ ರೂ. ದೇಣಿಗೆಯನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಸ್ಸಾಂನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನರು ಮನೆ, ಆಸ್ತಿ- ಪಾಸ್ತಿ, ಧವಸಧಾನ್ಯಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ, ಇದನ್ನು ಅರಿತ ಅಕ್ಕಿ ಸಂತ್ರಸ್ತರ ನೆರವಿಗೆ ಮುಂದಾಗಿದ್ದು 1 ಕೋಟಿ ರೂ. ದೇಣಿಗೆ ನೀಡಿದ್ದಾರೆ, ಕಳೆದ …

Read More »

ಗಾನಗಾರುಡಿಗ ಎಸ್.ಪಿ. ಬಾಲಸುಬ್ರಮಣ್ಯಂರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ

ಚೆನ್ನೈ,- ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಗಾನಗಾರುಡಿಗ ಎಸ್.ಪಿ. ಬಾಲಸುಬ್ರಮಣ್ಯಂರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಎಸ್‍ಪಿಬಿ ಅವರಿಗೆ ಶ್ವಾಸಕೋಶದ ಸಮಸ್ಯೆಯೂ ಇರುವುದರಿಂದ ಅವರಿಗೆ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಆದರೂ ದಿನೇ ದಿನೇ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ, ವೆಂಟಿಲೇಟರ್ ಇಲ್ಲದೆ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನಪಟ್ಟೆವಾದರೂ ಅವರ ದೇಹ ಅದಕ್ಕೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ವೆಂಟಿಲೇಟರ್ ಇಲ್ಲದೆ ಎಸ್‍ಪಿಬಿ ಅವರು …

Read More »

ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!

ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ‌ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …

Read More »

ಕೋಟಿ ಕೋಟಿ ಸುರಿದು ರೆಡಿಮಾಡಿದ ಕೋವಿಡ್ ಸೆಂಟರ್‌ಗಳತ್ತ ತಲೆ ಹಾಕದ ಸೋಂಕಿತರು..!

ಬೆಂಗಳೂರು, : ಕೊರೊನಾ ಸೋಂಕಿ ತರಿಗೆ ಹೋಂ ಐಸೊಲೇಷನ್ ವ್ಯವಸ್ಥೆಯನ್ನು ಜಾರಿಗೆ ತಂದ ನಂತರ ಬಿಬಿಎಂಪಿ ಕೋಟ್ಯಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್‍ಗಳತ್ತ ಜನ ಮುಖ ಹಾಕುತ್ತಿಲ್ಲ. ನಗರದಲ್ಲಿ 12 ಕೋವಿಡ್ ಕೇರ್ ಸೆಂಟರ್‍ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಬಿಐಇಸಿನಲ್ಲಿ 10 ಸಾವಿರ ಹಾಸಿಗೆಗಳ ಸೆಂಟರ್ ನಿರ್ಮಿಸಲಾಗಿದ್ದು, 6 ಸಾವಿರ ಹಾಸಿಗೆ ಸಿದ್ಧವಿದೆ. ಆದರೆ, ಇಲ್ಲಿ ಕೇವಲ 700 ರಿಂದ 800 ಮಂದಿ ರೋಗಿಗಳು ದಾಖಲಾಗಿದ್ದಾರೆ. ಇದೇ …

Read More »

ಪೊಲೀಸ್ ಠಾಣೆಯಿಂದ ಸಿನಿಮಾ ಸ್ಟೈಲಲ್ಲಿ ಎಸ್ಕೇಪ್ ಆಗಿದ್ದ ಸರಗಳ್ಳ ಕೊನೆಗೂ ಲಾಕ್..!

ತುಮಕೂರು, ಆ20- ಕೋರಾ ಠಾಣೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸಿನಿಮೀಯ ರೀತಿಯಲ್ಲಿ ಪರಾರಿ ಯಾಗಿದ್ದ ಖತರ್ನಾಕ್ ಸರಗಳ್ಳ ಮತ್ತೆ ಸಿಕ್ಕಿಬಿದ್ದಿದ್ದಾನೆ. ಮಧುಗಿರಿ ತಾಲ್ಲೂಕಿನ ಕಾಟ ಗೊಂಡನಹಳ್ಳಿ ನಿವಾಸಿ ರಂಗಪ್ಪ ರಾಜ ಪ್ರತಾಪ ಪ್ರಭು (38) ಸಿಕ್ಕಿಬಿದ್ದ ಸರಗಳ್ಳ. ಕೊರೊನಾ ಭೀತಿಯ ಹಿನ್ನೆಲೆ ಯಲ್ಲಿ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸುವ ವೇಳೆ ಊಟದ ಎಲೆ ಎಸೆಯುವ ನೆಪದಲ್ಲಿ ರಂಗಪ್ಪ ಸಿನಿಮೀಯ ರೀತಿಯಲ್ಲಿ ಕೋರಾ ಠಾಣೆಯಿಂದ ಪರಾರಿಯಾಗಿದ್ದ.ಘಟನೆ ಹಿನ್ನೆಲೆಯಲ್ಲಿ ಕೋರಾ …

Read More »