Breaking News

ರಾಜ್ಯದಲ್ಲಿ ಗರಿಷ್ಠ ಸೋಂಕಿತರು : ದಾಖಲೆ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶನಿವಾರ 9,746 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಎರಡನೇ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3.61 ಲಕ್ಷಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್‌ 2ರಂದು ದಾಖಲಾಗಿದ್ದ 9,860 ಪ್ರಕರಣದ ಬಳಿಕ ಶನಿವಾರ ಎರಡನೇ ಅತಿ ಹೆಚ್ಚು ಸೋಂಕು ವರದಿಯಾಗಿದೆ. ಅಲ್ಲದೆ, ದಾಖಲೆಯ 9,102 ಮಂದಿ ಗುಣಮುಖರಾಗಿದ್ದಾರೆ. ಇನ್ನು ಶನಿವಾರ 128 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6,298ಕ್ಕೆ …

Read More »

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : ಪದವಿ ಪೂರ್ವಶಿಕ್ಷಣ ಇಲಾಖೆಯು 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಸೆ. 7 ರಿಂದ 19 ರವರೆಗೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ 1.30 ಹಾಗೂ 2.15 ರಿಂದ 5.30 ರ ಅವಧಿಯಲ್ಲಿ ನಡೆಯಲಿವೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾ ಪಟ್ಟಿ ಸಮಯ ಬೆಳಗ್ಗೆ 10.15 ರಿಂದ 1.30ರವರೆಗೆ, ಮಧ್ಯಾಹ್ನ 2.15 ರಿಂದ ಸಾಯಂಕಾಲ 5.30ರವರೆಗೆ ಸೆ.7ರ ಬೆಳಗ್ಗೆ ಉರ್ದು, ಸಂಸ್ಕೃತ, …

Read More »

ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

ಧಾರವಾಡ: ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ ಪೀರಸಾಬ್ ನದಾಫ (38) ಪತ್ನಿ ಹಾಗೂ ಆಕೆಯ ಪ್ರಿಯಕರನಿಂದ ಕೊಲೆಯಾದವನು. ಕಳೆದ ಮೂರು ವರ್ಷಗಳಿಂದ ಪೀರಸಾಬ್ ನದಾಫ ಪತ್ನಿ ಪರ್ವಿನ್ ಬಾನುಗೆ ಸೋಮಯ್ಯ ಪೂಜಾರ ಜೊತೆ ಅನೈತಿಕ ಸಂಬಂಧ ಇತ್ತು. ಇದೇ ವಿಷಯವಾಗಿ ಪತಿ ಪೀರಸಾಬ್ ಹಾಗೂ ಪತ್ನಿ ಪರ್ವಿನ್ ಬಾನು ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು …

Read More »

ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟç ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …

Read More »

ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ  ಪ್ರಲ್ಹಾದ್ ಜೋಶಿ  ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ   ರಮೇಶ್ ಜಾರಕಿಹೊಳಿ  ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರಿಬ್ಬರ ಮಾತುಕತೆಯ ವಿವರ ಇನ್ನೂ ಲಭ್ಯವಾಗಿಲ್ಲ. ಆದರೆ ಕಳೆದ 2 ತಿಂಗಳಲ್ಲಿ ಅವರಿಬ್ಬರದ್ದು ಇದು ಮೂರನೇ ಭೇಟಿ. ಒಂದು ಬಾರಿ ಹುಬ್ಬಳ್ಳಿಯಲ್ಲೇ ಇದೇ ರೀತಿ ರಾತ್ರಿ ವೇಳೆ ಭೇಟಿಯಾಗಿದ್ದರೆ ಮತ್ತೊಮ್ಮೆ ಬೆಂಗಳೂರಿನ ರಮೇಶ ಜಾರಕಿಹೊಳಿ ಅವರ ಮನೆಗೆ …

Read More »

ವಿವಿಧ ರಾಜ್ಯಗಳ 47 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿ,ಸೆ.5- ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 47 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದರು. ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಲಿಂಕ್ ಮೂಲಕ ಪ್ರಶಸ್ತಿಗಳನ್ನು ನೀಡಿ ಮಾತನಾಡಿದ ರಾಷ್ಟ್ರಪತಿಯವರು, ಉತ್ತಮ ಕಟ್ಟಡ, ದುಬಾರಿ ಸೌಲಭ್ಯಗಳು ಇರುವ ಶಿಕ್ಷಣ ಸಂಸ್ಥೆಗಳಿಂದ ಉತ್ತಮ ವಿದ್ಯಾರ್ಥಿಗಳು ಸೃಷ್ಟಿಯಾಗುವುದಿಲ್ಲ. ಬದಲಿಗೆ ಒಳ್ಳೆಯ ಶಿಕ್ಷಕರಿಂದ ಮಾತ್ರ ಉತ್ತಮ ವಿದ್ಯಾರ್ಥಿಗಳು ಸೃಷ್ಟಿಯಗುತ್ತಾರೆ. ಆ ಮೂಲಕ ಉತ್ತಮ …

Read More »

ಉಪ ಚುನಾವಣೆಗೆದಿನಾಂಕವನ್ನೇ ನಿಗದಿಪಡಿಸಿಲ್ಲ,ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ,

ಬೆಂಗಳೂರು, ಸೆ.5- ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿಪಡಿಸಿಲ್ಲ, ಆದರೂ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಕೆಲಸ ಗಳನ್ನು ಆರಂಭಿಸಿವೆ, ಬಿಜೆಪಿಗೆ ಇಲ್ಲಿ ಯಾವುದೇ ನೆಲೆ ಇಲ್ಲ, ಆದರೆ ಶಿರಾ ಕ್ಷೇತ್ರ, ಬಿಜೆಪಿ ಸಂಸದ ಆನೇಕಲ್ ನಾರಾಯಣ ಸ್ವಾಮಿ ಪ್ರತಿನಿಧಿಸುವ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬಿ ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಪ್ರಧಾನ …

Read More »

ಕೋವಿಡ್-19 ದಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಆಗುತ್ತಿಲ್ಲ.: ಅನಿಲ ಬೆನಕೆ

ಬೆಳಗಾವಿ:  ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನಷ್ಟೇ ಮಾಡದೇ ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕ ಅನಿಲ ಬೆನಕೆ ಅವರು ಹೇಳಿದರು. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ  ನಗರ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 …

Read More »

ನಟಿ ರಾಗಿಣಿ ಯಾರು ಅಂತಾ ನನಗೆ ಗೊತ್ತಿಲ್ಲ. :ಗೋವಿಂದ ಕಾರಜೋಳ

ಬಾಗಲಕೋಟೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಯಾರು ಅಂತಾ ನನಗೆ ಗೊತ್ತಿಲ್ಲ.  ಯಾರೇ ತಪ್ಪು ಮಾಡಿದ್ದರು  ಅಂತವರ ಮೇಲೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ರಾಜಕಾರಣಿ,  ಅಧಿಕಾರಿಗಳ ಮಕ್ಕಳೇ ಯಾರೇ  ಆಗಿದ್ರೂ ದೇಶದ ಕಾನೂನು ಎಲ್ಲರಿಗೂ ಒಂದೇ.  ಡ್ರಗ್ಸ್‌ ಹಗರಣದಲ್ಲಿ ಭಾಗಿಯಾಗಿರುವವ ತನಿಖೆ ನಡೆಯುತ್ತಿದೆ.ತನಿಖೆ ಮುಗಿಯುವವರೆಗೆ …

Read More »

ಮೇಘನಾ ರಾಜ್ ಬಳಿ ಕ್ಷಮೆ ಕೋರಿದ ಇಂದ್ರಜಿತ್ ………..

ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಬರೆದ ಪತ್ರದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕ್ಷಮೆ ಕೋರಿದ್ದಾರೆ.ಮಾತನಾಡಿದ ಇಂದ್ರಜಿತ್, ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು. ಈ ಸಂಬಂಧ ನಾನು ಬಹಿರಂಗ …

Read More »