Breaking News

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …

Read More »

ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್, ಶಾಸಕರಾದ ಶ್ರೀ ಟಿ. ರಘುಮೂರ್ತಿ ಹಾಗೂ ಶ್ರೀ ಕೆ.ಸಿ. ವೀರೇಂದ್ರ ಅವರ ಜೊತೆಗೂಡಿ, ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಸಲಹೆಗಳು ಹಾಗೂ ಸೂಕ್ತ ಸೂಚನೆಗಳನ್ನು ನೀಡಲಾಯಿತು. ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು …

Read More »

ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಇಂದು ಬೆಳಗಾವಿ ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಮಹಾಸ್ವಾಮಿಗಳು, ಶಾಸಕ ಶ್ರೀ ಆಸೀಫ್ ಸೇಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀ ಸಿ.ಎಸ್. ಷಡಾಕ್ಷರಿ ಹಾಗೂ …

Read More »

ಸಾವಿರ ರೂಪಾಯಿಗೆ ಕಿರಿಕ್, ಹಣ ವಾಪಸ್ ಕೇಳಿದ್ದಕ್ಕೆ ಇಬ್ಬರ ಮೇಲೆ ಚಾಕು ಇರಿತ

ನೆಲಮಂಗಲ : ಪ್ರೀತಿಸುವಾಗ ಕೊಟ್ಟಿದ್ದ ಹಣವನ್ನು ವಾಪಸ್ ಕೇಳಿದ ಯುವಕನಿಗೆ ಪ್ರೇಯಸಿಯ ಸ್ನೇಹಿತರು ಚಾಕು ಇರಿದಿರುವ ಘಟನೆ ನೆಲಮಂಗಲ ಟೌನ್​​ನ ಜೆಪಿ ಹಾಸ್ಟೆಲ್ ಮುಂಭಾಗದ ವಿನಾಯಕ ಜ್ಯೂಸ್ ಸೆಂಟರ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಚೇತನ್ ಮತ್ತು ಸುದೀಪ್ ಎಂಬುವರ ಮೇಲೆ ನಾಲ್ವರು ಯುವಕರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಚೇತನ್ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದೀಪ್ ಬೆನ್ನಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಸುದೀಪ್ ನೆಲಮಂಗಲ …

Read More »

ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಟಾರ್ಗೆಟ್​ ಲಿಸ್ಟ್​ ಮಾಡಿದ್ದಾರೆ: ಶಾಸಕ ವಿಜಯಾನಂದ ಕಾಶಪ್ಪನವರ್​​​

ಬಾಗಲಕೋಟೆ : ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಪಟ್ಟಿ ಮಾಡಿದ್ದಾರೆ. ಬಿಜೆಪಿ ಏಜೆಂಟ್​ಗಳನ್ನು ಅವರ ಮನೆಗೆ ಕಳುಹಿಸಿ ಹೆದರಿಸಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ. ಹುನಗುಂದ ಪಟ್ಟಣದಲ್ಲಿ ಶನಿವಾರ (ಜು.12) ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಪಟ್ಟ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮ ಪತ್ರಿನಿಧಿಗಳೊಂದಿಗೆ ಅವರು ಮಾತನಾಡಿದರು. ಬಿಜೆಪಿಗೆ ಬರದೇ ಹೋದ್ರೆ ಸಿಬಿಐ, ಇಡಿ ದಾಳಿ ಮಾಡಿಸಿ ಅಕ್ರಮ ಆಸ್ತಿ ಹೊರಗೆಳಸ್ತೀವಿ ಅಂತಾರೆ, ಇದಕ್ಕೆ ನಾನು ಜಗ್ಗೋದಿಲ್ಲ, ಬಗ್ಗೋದಿಲ್ಲ, ಆ ಲಿಸ್ಟ್​​ನಲ್ಲಿ …

Read More »

ಹಿರಿಯ ಪತ್ರಕರ್ತ ಕೆ.ಬಿ. ಗಣಪತಿ ಹೃದಯಾಘಾತದಿಂದ ನಿಧನ

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಅವರು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಕಳೆದ 50 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಅವರು ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲರಾಗಿದ್ದವರು. ಮುಂಬೈನ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಿಂದ ವೃತ್ತಿ ಜೀವನ …

Read More »

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಕಾರು ಅಪಘಾತ; ಮೂವರು ಸಾವು

ರಾಮನಗರ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವನಿಗೆ ತೀವ್ರ ಗಾಯಗಳಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಬ್ರಿಡ್ಜ್​ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಗಂಭೀರ ಗಾಯಗೊಂಡ ಮತ್ತೋರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್​. ಪೇಟೆ ಮೂಲದವರಾಗಿದ್ದಾರೆ. ಮೃತರನ್ನು ಮುತ್ತುರಾಜು (55), ತಮ್ಮನಗೌಡ …

Read More »

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ ಶಿಕ್ಷಣ ಯಾರ ಸೊತ್ತೂ ಅಲ್ಲ. ಅವಕಾಶ ಮುಖ್ಯ : ಸಿ.ಎಂ ಬೆಂಗಳೂರು : ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ

ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ನೇಮಕ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮುಖ್ತಾರ ಇನಾಮದಾರ ಅವರು ಕಾರ್ಯದರ್ಶಿಯಾಗಿ ನೇಮಕ ಮಾಡಿ ಪ್ರದೇಶ ಕಾಂಗ್ರೇಸ್ ಕಮಿಟಿ ಆದೇಶ ಪತ್ರ ಹೊರಡಿಸಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್ ಅವರ ಅನುಮೋದನೆಯ ಮೇರೆಗೆ ಇಲ್ಲಿನ ಗಾಂಧಿ ನಗರದ ಮುಖ್ತಾರ ಇನಾಮದಾರ ಅವರನ್ನು “ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ” ಯನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ …

Read More »

ರಾಷ್ಟ್ರೀಯ ಲೋಕ್ ಅದಾಲತ್: 11,674 ಪ್ರಕರಣಗಳು ಇತ್ಯರ್ಥ, ಮತ್ತೆ ಒಂದಾದ 44 ದಂಪತಿಗಳು

ರಾಷ್ಟ್ರೀಯ ಲೋಕ್ ಅದಾಲತ್: 11,674 ಪ್ರಕರಣಗಳು ಇತ್ಯರ್ಥ, ಮತ್ತೆ ಒಂದಾದ 44 ದಂಪತಿಗಳು ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 11,674 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ …

Read More »