ಬೆಳಗಾವಿ: ನಕಲಿ ದಾಖಲೆ ಸೃಷ್ಠಿಸಿ ಬೇರಯವರ ಭೂಮಿ ಮಾರಾಟ ಮಾಡಿದ 80 ವರ್ಷದ ಅಜ್ಜಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಡಗಾಂವ ಗಣೇಶ ಕಾಲೋನಿ ನಿವಾಸಿ ಮಂದಾಕಿನಿ ಪರಿಶವಾಡಕರ ಬಂಧಿತ ಆರೋಪಿ. ಬೇರೊಬ್ಬರ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ತನ್ನದೆಂದು ಮಾರಾಟ ಮಾಡಿರುವ ಆರೋಪ ಇವರ ಮೇಲೆ ಇದೆ. ಕಣಬರ್ಗಿ ರಸ್ತೆಯ ಮಹಾಂತೇಶ ನಗರದಲ್ಲಿರುವ ಪ್ಲಾಟ್ ನಂ.2313 ಹಾಗೂ ಸಿಟಿಎಸ್ ನಂ.9449ರ ಜಾಗ ರತ್ನಾ ಯಶವಂತ ಮಲ್ಲೂಕರ ಅವರ ಹೆಸರಿನಲ್ಲಿತ್ತು. …
Read More »8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಬೆಳಗಾವಿ ಪೊಲೀಸರು
ಬೆಳಗಾವಿ: ಬೆಳಗಾವಿ ಪೊಲೀಸರು ಕಾರ್ಯಚರಣೆ ನಡೆಸುವ ಮೂಲಕ ಮೊಬೈಲ್ ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳನ್ನು ಬಂಧಿಸಿ, 40 ಮೋಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕುಟಕೋಳ ಪೋಲಿಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಿಂದ ಒಟ್ಟು 1 ಲಕ್ಷ ,34, ಸಾವಿರದ 200 ರೂಪಾಯಿ ಮೌಲ್ಯದ ವಸ್ತುಗಳು ವಶ ಪಡೆದಿದ್ದಾರೆ. ವಿವಿಧ ಕಂಪನಿಗಳ 4, ಲಕ್ಷ 94, ಸಾವಿರದ 200 …
Read More »ಬೆಳಗಾವಿ ಉತ್ತರ ವಲಯದ 8ನೇ ಕರ್ತವ್ಯ ಕೂಟ: ನಗರ ಘಟಕಕ್ಕೆ 13 ಬಹುಮಾನ
ಬೆಳಗಾವಿ: ಬೆಳಗಾವಿ ಉತ್ತರ ವಲಯ ಮಟ್ಟದ 8ನೇ ಕರ್ತವ್ಯ ಕೂಟ – 2026ರಲ್ಲಿ ಬೆಳಗಾವಿ ನಗರ ಪೊಲೀಸ್ ಘಟಕದ ತಂಡವು ಭಾಗವಹಿಸಿ, ವಿವಿಧ ತಾಂತ್ರಿಕ, ವೈಜ್ಞಾನಿಕ ಹಾಗೂ ವಿಶೇಷ ಪೊಲೀಸ್ ಕೌಶಲ್ಯಗಳ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಒಟ್ಟು 13 ಬಹುಮಾನಗಳನ್ನು ಪಡೆದುಕೊಂಡಿದೆ. ಈ ಮೂಲಕ ಬೆಳಗಾವಿ ನಗರ ಘಟಕವು (11 ಪದಕ + 2 ಟ್ರೋಫಿ) ಗಳೊಂದಿಗೆ ವಲಯ ಮಟ್ಟದಲ್ಲಿ ಸರ್ವೋತ್ತಮ ದ್ವಿತೀಯ ಸ್ಥಾನ ಪಡೆದು ಗೌರವಕ್ಕೆ ಪಾತ್ರವಾಗಿದೆ. …
Read More »ಬೆಳಗಾವಿ ಜಿಲ್ಲೆಯಲ್ಲಿ ಸೆ.5 ರಂದು ಪ್ರಜಾಸೇವೆ ಆಂದೋಲನ ಸಭೆ
ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಸಭೆ ಶನಿವಾರ (ಸೆ.5) ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪ್ರತಿ ಮಾಹೆಯ 1ನೇ ಹಾಗೂ 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಹಾಗೂ ಪ್ರತಿ ಮಾಹೆಯ 2ನೇ ಹಾಗೂ …
Read More »ಜಿಲ್ಲಾದ್ಯಂತ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಬೆಳಗಾವಿ: ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3 ರಂದು ಜಿಲ್ಲೆಯ ಎಲ್ಲ ತಾಲೂಕುಗಳ ಒಟ್ಟು 22 ಸ್ಥಳಗಳಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ವನ್ನು ಆಯೋಜಿಸಲಾಗಿದೆ. ಹೀಗಾಗಿ, ಸರ್ಕಾರಿ ನೌಕರರು ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಕ್ತದಾನ …
Read More »ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಜನಾಂದೋಲನ ಆಕ್ರೋಶ ಯಾತ್ರೆ
ಬಳ್ಳಾರಿ: ರಾಜ್ಯ ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಜನಾಂದೋಲನ ಆಕ್ರೋಶ ಯಾತ್ರೆ ನಡೆಸಲು ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈ ಮೂಲಕ ಬಳ್ಳಾರಿಯಲ್ಲಿ ಮತ್ತೊಂದು ಹೈವೋಲ್ಟೇಜ್ ರಾಜಕೀಯ ಯಾತ್ರೆಗೆ ವೇದಿಕೆ ಸಿದ್ಧಗೊಂಡಿದೆ. ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಗೆ ತಕ್ಕ ತಿರುಗೇಟು ನೀಡಲು ಕಾಂಗ್ರೆಸ್ ನಾಯಕರು ಪ್ರತಿತಂತ್ರ ರೂಪಿಸಿದ್ದಾರೆ. ಬಿಜೆಪಿ ನಾಯಕರ ಆರೋಪಗಳಿಗೆ ನೇರವಾಗಿ ಜನರ ಮುಂದೆಯೇ ಉತ್ತರ ನೀಡಲು ನಿರ್ಧರಿಸಿರುವ ಕಾಂಗ್ರೆಸ್, ಬಿಜೆಪಿ ಪಾದಯಾತ್ರೆ ಸಾಗಿದ ಮಾರ್ಗದಲ್ಲೇ ‘ಜನಾಂದೋಲನ ಆಕ್ರೋಶ ಯಾತ್ರೆ’ಯನ್ನು …
Read More »ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ ಆಕಸ್ಮಿಕ ಬೆಂಕಿ
ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಟಿಪ್ಪರ್ ಸುಟ್ಟು ಕರಕಲಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿ ಪ್ಲಾಂಟೇಶನ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಬೆಂಗಳೂರಿನಿಂದ ವಿ.ಕೋಟಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನೂ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚಾಲಕ ಸಂತೋಷ್ ಬೆಂಕಿ …
Read More »ಶಾಲೆಯಲ್ಲೇ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು
ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಮೃತ ದುರ್ದೈವಿ. ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕನ …
Read More »ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರನಗರದ ಪ್ರಶಾಂತನಗರದಲ್ಲಿ ನಡೆದಿದೆ ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಶ್ರೇಯಾ ಎಂದು ಗುರುತಿಸಲಾಗಿದೆ. ಶ್ರೇಯಾ ಮೂಡಬಿದ್ರೆಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿರುವ ಮನೆಗೆ ಬಂದಿದ್ದಳು. ಮನೆಯಲ್ಲಿದ್ದವರು ಹೊರಗಡೆ ತೆರಳಿದ್ದ ವೇಳೆ ಶ್ರೇಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮಗಳ ಸಾವಿನ ಸುದ್ದಿ ತಿಳಿದು …
Read More »ಸರಣಿ ಪ್ರಶ್ನೆ ಕೇಳಿ ಪ್ರಿಯಾಂಕ್ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪುನರುಚ್ಚರಿಸಿದ್ದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿರುವ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು …
Read More »
Laxmi News 24×7