Breaking News

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪರಿಗೆ ಮತ್ತೆ ಎದುರಾಗಿದೆ ಕೊರೊನಾ ಭೀತಿ..!

ಬೆಳಗಾವಿ: ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆಯಷ್ಟೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದ್ರೆ, ಮೂಲಗಳು ಹೇಳುವ ಪ್ರಕಾರ ಶಾಸಕರು ಆಸ್ಪತ್ರೆಗೆ ದಾಖಲಾಗಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಭೀತಿ ಶುರುವಾಗಿದೆ. ಹೌದು, ಇತ್ತಿಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೂಡ ಪಾಲ್ಗೊಂಡಿದ್ದರು ಎನ್ನುವುದು …

Read More »

ಬೆಳಗಾವಿ: 789 ಮಂದಿ ಗುಣಮುಖ, ಬಿಡುಗಡೆ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 290 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಮೂವರು ಹಾಗೂ ಖಾನಾಪುರ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು. 789 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದೆ.

Read More »

ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ. ‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ …

Read More »

ಇ-ಲೋಕ ಅದಾಲತ್‌ ಸೆ.7ರಿಂದ

ಬೆಳಗಾವಿ: ‘ಕೋವಿಡ್-19 ಕಾರಣದಿಂದಾಗಿ ಇ-ಲೋಕ ಅದಾಲತ್ ನಡೆಸಲಾಗುತ್ತಿದೆ. ಎಲ್ಲರಿಗೂ ಸಮಾನ ಅವಕಾಶ ಹಾಗೂ ನ್ಯಾಯ ಸಿಗಬೇಕು ಎನ್ನುವುದು ಮುಖ್ಯ ಉದ್ದೇಶವಾಗಿದೆ’ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಾಧೀಶ ಅರವಿಂದ ಕುಮಾರ ಹೇಳಿದರು. ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು. ‘ಇ-ಲೋಕ ಅದಾಲತ್‌ ಬಗ್ಗೆ ಇಲ್ಲಿವರೆಗೆ ನಾಲ್ಕು ಸಭೆಗಳನ್ನು ನಡೆಸಿದ್ದೇವೆ. ವಿಮಾ ಕಂಪನಿಗಳಿಗೆ ಸಂಬಂಧಿಸಿದ ವ್ಯಾಜ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅಪಘಾತದಲ್ಲಿ …

Read More »

ಪರೀಕ್ಷೆ ನಡೆಸದೆ ಪದವಿ ಇಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆ ನಡೆಸದೆ, ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸೆಪ್ಟೆಂಬರ್ 30ರ ಒಳಗೆ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಪರೀಕ್ಷೆಗಳನ್ನು ನಡೆಸಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಜುಲೈ 6ರಂದು ಹೊರಡಿಸಿದ್ದ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆದರೆ, …

Read More »

ಸೆಪ್ಟೆಂಬರ್ 7 ರಿಂದ 2nd PUC ಪಿಯುಸಿ ಪೂರಕ ಪರೀಕ್ಷೆ

ಕಲಬುರಗಿ : ಕಲಬುರಗಿ ನಗರದ 11 ಮತ್ತು ತಾಲೂಕು ಹಂತದ 7 ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 7 ರಿಂದ 19ರ ವರೆಗೆ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಯುವ ಪರೀಕ್ಷೆಯಂತೆ ಗಂಭೀರತೆ ಕಾಯ್ದುಕೊಂಡು ಸುಲಲಿತವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸೂಚಿಸಿದರು. ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ …

Read More »

ಜನಧನದಿಂದ ಬಡತನ ನೀಗಲು ಯತ್ನ: ಯೋಜನೆ ಆರು ವರ್ಷ ಪೂರೈಸಿದ್ದಕ್ಕೆ ಮೋದಿ ಹರ್ಷ

ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ‘ಜನ ಧನ’ ಯೋಜನೆ ಬಡತನ ನಿವಾರಣೆಯ ಪ್ರಯತ್ನ. ಅದೊಂದು ದೂರಗಾಮಿ ಬದಲಾವಣೆ ತರುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಯವರು ಘೋಷಣೆ ಮಾಡಿರುವ ಯೋಜನೆಗೆ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್‌ ಮಾ ‘ಶುಕ್ರವಾರಕ್ಕೆ ಜನಧನ ಯೋಜನೆ ಜಾರಿಯಾಗಿ ಆರು ವರ್ಷಗಳು ಪೂರ್ತಿಯಾದವು. ಬ್ಯಾಂಕಿಂಗ್‌ ವ್ಯವಸ್ಥೆ ಹೊಂದಿಲ್ಲದವರಿಗೆ ಅದನ್ನು ನೀಡುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು. ಇದರಿಂದಾಗಿ ಧನ್ಮಾತ್ಮಕವಾದ ಬದಲಾಣೆಗಳು ಉಂಟಾಗಿವೆ. ಕೋಟ್ಯಂತರ ಮಂದಿಗೆ …

Read More »

ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು DC ಎತ್ತಂಗಡಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ಅಭಿರಾಂ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಕಲಬುರ್ಗಿ ಡಿಸಿ ಶರತ್ ಅವರನ್ನ ನೇಮಕ ಮಾಡಲಾಗಿದೆ. ಶರತ್ ಅವರು ಈ ಹಿಂದೆ ಮಂಡ್ಯ ಜಿಪಂ ಸಿಇಓ ಆಗಿದ್ದರು. ನಂಜನಗೂಡು ತಾಲೂಕಾಧಿಕಾರಿ ಡಾ.ನಾಗೇಂದ್ರ ಅವರ ಮೃತದೇಹ …

Read More »

ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ

ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ. 2021ರ ಫೆಬ್ರವರಿ 3 ರಿಂದ 5 ರವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿದ್ದು ಫೆಬ್ರವರಿ 6, 7 ರಂದು ಸಾರ್ವಜನಿಕರಿಗೆ ಪ್ರವೇಶ ನೀಡಲಾಗುವುದು. ದೆಹಲಿಯಲ್ಲಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ …

Read More »

₹ 5 ಕೋಟಿ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಭೂಮಿಪೂಜೆ

ಹುಣಸಗಿ: ‘ಪ್ರಸಕ್ತ ಸಾಲಿನ ಕೋವಿಡ್ ಸಂದರ್ಭದಲ್ಲಿಯೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆದಿದ್ದು, ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಶಾಸಕ ರಾಜುಗೌಡ ಹೇಳಿದರು. ಹುಣಸಗಿ ತಾಲ್ಲೂಕಿನ ಯರಿಕ್ಯಾಳ ಗ್ರಾಮದ ಬಳಿ ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ‘ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಸುಮಾರು ₹ 200 ಕೋಟಿ ವೆಚ್ಚದಲ್ಲಿ ಈ ಬಾರಿ ಸಿ.ಸಿ ರಸ್ತೆ, ಕಾಲುವೆ …

Read More »