Breaking News

ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ: ಸಚಿವ ಬಿ.ಸಿ. ಪಾಟೀಲ್

ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ …

Read More »

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗ ಆರಂಭ; ಕೊರೊನಾ 3ನೇ ಅಲೆಗೆ ಸಿದ್ಧತೆ

ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ಇಳಿಮುಖವಾಗುತ್ತಿರು ಮಧ್ಯೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬ ಎಚ್ಚರಿಕೆ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಇದೀಗ ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ಆರಂಭವಾಗಿದೆ. ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗಿಸಲಾಗುತ್ತಿದ್ದು, ದೆಹಲಿಯ ಏಮ್ಸ್ ಹಾಗೂ ಮಹಾರಾಷ್ಟ್ರದ ನಾಗ್ಪುರದಲ್ಲಿಯೂ ಪ್ರಯೋಗ ಆರಂಭವಾಗಿದೆ. 12-18 ವರ್ಷದ 175 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, 3 ಗ್ರೂಪ್ …

Read More »

ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಧಿಕಾ ಪಂಡಿತ್

ಬೆಂಗಳೂರು: ಕೊರೊನಾ ವೈರಸ್ ಮತ್ತು ಲಾಕ್‍ಡೌನ್‍ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಅವರು ಎಲ್ಲರಿಗೂ ಧೈರ್ಯ ತುಂಬಲು ಇನ್‍ಸ್ಟಾಗ್ರಾಮ್‍ನಲ್ಲಿ ಹೊಸ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಕೆಲವು ವಿಚಾರಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಹಾವಳಿಯಿಂದ ಅನೇಕರ ಬದುಕು ತತ್ತರಿಸಿ ಹೋಗಿದೆ. ಈ ಕಠಿಣ ಸಂದರ್ಭದಲ್ಲಿ ಅನೇಕ ನಟ, ನಟಿಯರು ಸಹಾಯ ಮಾಡಿದ್ದಾರೆ. ನಟ ಯಶ್ ಇತ್ತೀಚೆಗಷ್ಟೇ ಅವರು 1.5 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ಸಿನಿಮಾರಂಗದ …

Read More »

ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ: ಶೆಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಚರ್ಚೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಮನಸ್ಸಿಗೆ ಬೇಸರವಾಗಿದೆ. ಅಲ್ಲದೇ ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಯುವುದರಿಂದ ಸರ್ಕಾರದ ಇಮೇಜ್‌ಗೆ ಧಕ್ಕೆ ಬರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಯಡಿಯೂರಪ್ಪರಿಗೆ ವಯಸ್ಸಾದ್ರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಕ್ಕೆ ವಯಸ್ಸು ಅಡ್ಡಿ ಬಂದಿಲ್ಲ. ಹೈಕಮಾಂಡ್ ಮಟ್ಟದಲ್ಲೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ. …

Read More »

ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್

ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ  ಪ್ರಶ್ನಿಸಿದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ ಗ್ರಾಮದ …

Read More »

ಶತಕ ದಾಟಿದ ಪೆಟ್ರೋಲ್ ದರ, ಸೆಸ್ ದರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ

ಬೆಂಗಳೂರು, ಜೂ. 7-ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ‌ ರಾಜ್ಯ ಸರ್ಕಾರಗಳು ಶೇ‌.30-32 ರಷ್ಟು ಸೆಸ್ ವಿಧಿಸುತ್ತವೆ. ಸೆಸ್ ಪ್ರಮಾಣ ಇಳಿಕೆ ಮಾಡಿದರೆ ಡೀಸೆಲ್, ಪೆಟ್ರೋಲ್ ದರದಲ್ಲಿ ಲೀಟರ್ ಗೆ 3-4 ರೂ. ಇಳಿಕೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನರು ಸಂಕಷ್ಡದಲ್ಲಿದ್ದಾರೆ …

Read More »

ಪಿಯು ಪರೀಕ್ಷೆ ಇಲ್ಲ ; ಪರೀಕ್ಷಾ ಶುಲ್ಕವೂ ವಾಪಾಸಿಲ್ಲ

ಪಿಯು ಪರೀಕ್ಷೆಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಂದ ಪಡೆದಿರುವ ಪ್ರವೇಶ ಶುಲ್ಕ ಮರುಪಾವತಿಗೆ ನಿರಾಕರಿಸುತ್ತಿದೆ. ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ 190 ರೂ. ಪಡೆದಿದೆ. ಇದೇ ರೀತಿ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಂದ 500 ರೂ.ಪಡೆದಿದೆ. ಇನ್ನು ಕೆಲವು ವಿದ್ಯಾರ್ಥಿಗಳು ತಡವಾಗಿ ಶುಲ್ಕ ಪಾವತಿಸಿರುವುದಕ್ಕೆ ದಂಡ ಶುಲ್ಕವಾಗಿ 700 ರಿಂದ 1320 ರೂ.ಹೆಚ್ಚುವರಿಯಾಗಿ ಪಡೆದಿದೆ. ಈ ಬಾರಿ 6.25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ …

Read More »

ರೋಹಿಣಿ ಸಿಂಧೂರಿ ಗೈರು ಹಾಜರಿ ನಡುವೆ ಗೌತಮ್ ಬಗಾದಿ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕಾರ

ವಿವಾದಗಳ ಹಿನ್ನೆಲೆಯಲ್ಲಿ ವರ್ಗಗೊಂಡ ರೋಹಿಣಿ ಸಿಂಧೂರಿ ಅನುಸ್ಥಿತಿಯಲ್ಲಿ ಗೌತಮ್ ಬಗಾದಿ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನೂತನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಗೌತಮ್ ಬಗಾದಿ ಭಾನುವಾರ ಕಚೇರಿಗೆ ಆಗಮಿಸಿ ಸುಮಾರು ಅರ್ಧಗಂಟೆ ಕಾದರು. ಆದರೆ ವರ್ಗಗೊಂಡ ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬಾರದ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲೇ ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಗೌತಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದು, ಜಿ.ಪಂ ಸಿಇಓ ಉಪಸ್ಥಿತರಿದ್ದರು. ವಾಟ್ಸಪ್ ಮೂಲಕ ಮೈಸೂರು …

Read More »

ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು

ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ …

Read More »

ಮಗಳ ಜೊತೆ ಅಕ್ರಮ ಸಂಬಂಧ ಶಂಕೆ – ಯುವಕನ ಕೊಲೆಗೆ ಯತ್ನ

ಚಿಕ್ಕಬಳ್ಳಾಪುರ: ತನ್ನ ಮಗಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಅಂತ ತಂದೆಯೋರ್ವ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ನಗರ ಗೌರಿಬಿದನೂರು ತಾಲೂಕಿನ ಕಲ್ಲಿನಾಯಜನಹಳ್ಳಿ ಬಳಿ ನಡೆದಿದೆ. ಬಸವಾಪುರ ಗ್ರಾಮದ ಫೀರೋಜ್ ಖಾನ್(26) ಹಲ್ಲೆಗೊಳಗಾದವ. ಕಲ್ಲಿನಾಯಕನಹಳ್ಳಿಯ ಗಂಗಾಧರ್ ಎಂಬಾತ ಹಲ್ಲೆ ಮಾಡಿದವ. ಅಂದಹಾಗೆ ತನ್ನ ಮಗಳ ಜೊತೆ ಫಿರೋಜ್ ಖಾನ್ ಅಕ್ರಮ ಸಂಬಂಧ ಇಟ್ಟುಕೊಂಟಿದ್ದಾನೆ ಅಂತ ಅರಿತು ಗಂಗಾಧರ ದೊಡ್ಡಬಳ್ಳಾಪುರಕ್ಕೆ ಹೋಗಬೇಕು ಬಾ ಅಂತ ಫಿರೋಜ್ ಖಾನ್ ನನ್ನ ಕರೆಸಿಕೊಂಡಿದ್ದಾನೆ. …

Read More »