Breaking News

ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ

ಬೆಂಗಳೂರು, ಸೆ. 14-ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ ನಡೆಯಲಿದೆ. ಮುಂದಿನ ವಾರ ಮಳೆಗಾಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಾಳಿನ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ವಾರಕ್ಕೊಮ್ಮೆ ಸಚಿವ ಸಂಪುಟ ಸಭೆ ನಡೆಯುವುದು ರೂಢಿಯಾದರೂ ಕಳೆದ ವಾರ ಸಂಪುಟ ಸಭೆ ನಡೆಯಲಿಲ್ಲ. ಈ ವಾರ ಸೆ.17ರ ಗುರುವಾರ ಮಹಾಲಯ ಅಮವಾಸ್ಯೆಯ ಸರ್ಕಾರಿ ರಜೆ ಇರುವುದರಿಂದ ಗುರುವಾರದ ಬದಲಾಗಿ ನಾಳೆ ಸಂಪುಟ ಸಭೆ ನಡೆಸಲಾಗುತ್ತಿದೆ. ಕೋವಿಡ್ ಇರುವ …

Read More »

ನಟ-ನಟಿಯರು, ಉದ್ಯಮಿ, ರಾಜಕಾರಣಿ ಹಾಗೂ ಗಣ್ಯರ ಮಕ್ಕಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿಸಿಬಿ ಸಿದ್ಧತೆ ನಡೆಸುತ್ತಿದೆ.

ಬೆಂಗಳೂರು, ಸೆ.14- ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟ-ನಟಿಯರು, ಉದ್ಯಮಿ, ರಾಜಕಾರಣಿ ಹಾಗೂ ಗಣ್ಯರ ಮಕ್ಕಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿಸಿಬಿ ಸಿದ್ಧತೆ ನಡೆಸುತ್ತಿದೆ. ಬಂಧನಕ್ಕೊಳಗಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳನ್ನು ನೀಡಿದ್ದಾರೆ. ಹಾಗೆಯೇ ಕೆಲ ನಟ-ನಟಿಯರು, ಉದ್ಯಮಿಗಳು ಹಾಗೂ ಗಣ್ಯರ ಮಕ್ಕಳ ಹೆಸರು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ನಟಿಯರ ಹೇಳಿಕೆ ಆಧಾರದ ಮೇಲೆ ಪಟ್ಟಿಯೊಂದನ್ನು ಸಿದ್ಧಪಡಿಸಿರುವ ಸಿಸಿಬಿ ಅದನ್ನು ಪರಿಶೀಲಿಸಿ ವಿಚಾರಣೆಗೆ …

Read More »

ರಾಗಿಣಿ ಸೇರಿ 6 ಮಂದಿಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು. ವಿಡಿಯೋ …

Read More »

ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿತಪ್ಪೇನು..?ರೇವಣ್ಣ

ಹಾಸನ ,ಸೆ.14- ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸಹಕಾರ ಕೋರಿ ಮುಖ್ಯಮಂತ್ರಿಗಳನ್ನು ಭೇಟಿಯಾದರೆ ತಪ್ಪೇನು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಶಾಸಕರ ಕ್ಷೇತ್ರಗಳಿಗೆ ಸಹಾಯ ಕೋರಲ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ರಾಜಕೀಯ ಒತ್ತಡದಿಂದ ಕಾನೂನು ಬಾಹಿರ ಕೆಲಸಗಳನ್ನು ಮಾಡಿದರೆ ಅಂತಹ …

Read More »

ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಆಕ್ರೋಶ

ಬೆಂಗಳೂರು,ಸೆ.14- ರಾಜ್ಯದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಸಪ್ತಾಹ ಕಾರ್ಯಕ್ರಮ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಗರದಲ್ಲಿಂದು ತಮ್ಮ ಆಕ್ರೋಶ ವ್ಯಕ್ತಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಕನ್ನಡ ಚಳವಳಿ ಕೇಂದ್ರ ಸಮಿತಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿ ಹಿಂದಿ ದಿವಸ್ ಆಚರಣೆಯನ್ನು ತೀವ್ರವಾಗಿ ವಿರೋಧಿಸಿದರು. ಆನಂದ್ ರಾವ್ ವೃತ್ತದ ಬಳಿ ಹಿಂದಿ ಸಪ್ತಾಹ ಕಾರ್ಯಕ್ರಮದ …

Read More »

ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ:ಎಸ್. ಆರ್.ಪಾಟೀಲ್

ಬೆಂಗಳೂರು, ಸೆ.14- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್ ಆರೋಪಿಸಿದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಬರೆದಿರುವ ರೈತರ ಭದ್ರತೆ, ದೇಶದ ಭದ್ರತೆ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಆಹಾರ ಭದ್ರತೆ ಸಾಧಿಸಿದೆ, ರೈತರ ಬದುಕು ಮಾತ್ರ ಸುಧಾರಣೆಯಾಗಿಲ್ಲ. ಕಾರ್ಮಿಕರ ಸಂಕಷ್ಟಗಳು …

Read More »

ಜಮೀರ್ ಪರ ಮಾತಾಡಿ ಸಿದ್ದರಾಮಯ್ಯನವರು ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಸಚಿವ ಜಗದೀಶ್ ಶೆಟ್ಟರ್​

ಧಾರವಾಡ : ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್​ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು ಕ್ಯಾಸಿನೋಗೂ ಹೋಗ ಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಅಂತಾ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. …

Read More »

ಡಿಸಿಎಂ ಕಾರಜೋಳ ನಿರಾಸಕ್ತಿ; ಕಾರ್ಖಾನೆ ಉಳಿವಿಗಾಗಿ ಬೀದಿಗಿಳಿದ ರೈತರು

ಬಾಗಲಕೋಟೆ: ಮುಧೋಳದ ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ಕೊನೆಗೂ ರೈತರು ಬೀದಿಗಿಳಿದಿದ್ದಾರೆ. ಮುಧೋಳದಿಂದ ಬಾಗಲಕೋಟೆವರೆಗೂ ಪಾದಯಾತ್ರೆ ಕೂಡ ಆರಂಭಿಸಿದ್ದಾರೆ. ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು, ರೈತರ ಬಾಕಿ ಹಣ ಪಾವತಿಗಾಗಿ ಈಗಾಗಲೇ ಜಿಲ್ಲಾಡಳಿತ ೪೦ ಕೋಟಿ ರೂ.ಗಳ ಸಕ್ಕರೆಯನ್ನು ಮಾರಾಟ ಮಾಡಿ ಹಣ ಪಾವತಿಸುವ ವ್ಯವಸ್ಥೆ ಮಾಡಿಕೊಂಡಿದೆ. ತಾಂತ್ರಿಕ ಕಾರಣಗಳಿಂದ ಇದುವರೆಗೂ ಬಾಕಿ ಹಣ ಪಾವತಿ ಆಗಿಲ್ಲ. ಯಾವುದೇ ಕಾರಣಕ್ಕೂ …

Read More »

ಬೆಳಗಾವಿ, ಹುಬ್ಬಳ್ಳಿ ಕಲ್ಯಾಣ ಜ್ಯುವೆಲರ್ಸ್ ಕಳ್ಳತನ:

ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆಯ ಕಲ್ಯಾಣ ಜ್ಯುವೆಲರಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿಜಯನಗರದದ ನಿವಾಸಿ ವಿರಕ್ತಾನಂದ ಅಲಿಯಾಸ್ ಸಂತೋಷ್ ಮಹದೇವಪ್ಪ ಕಟಗಿ, ಗದಗದ ಶರತ್ ಶ್ರೀಕಾಂತ್ ಕಾರಂತ ಬಂಧಿತರು. ಪೊಲೀರು ಬಂಧಿತರಿಂದ 8 ಲಕ್ಷ 27 ಸಾವಿರ ಮೌಲ್ಯದ 130.681 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಅಂಗಡಿಯೊಂದರಲ್ಲಿ ಗ್ರಾಹಕರಂತೆ ಚಿನ್ನಾಭರಣ ಖರೀದಿಗೆಂದು …

Read More »

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ರಾಮನಗರ:   ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ.   …

Read More »