Breaking News

ಉದ್ಯೋಗ ಖಾತ್ರಿ ಯೋಜನೆಯಿಂದ ವಂಚಿತರಾದ ಆಶ್ರಯ ಮನೆಯ ಜನ; ಕೆಲಸವಿಲ್ಲದೆ ಗ್ರಾಮಸ್ಥರ ಪರದಾಟ

ಬೀದರ್: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಇನ್ನಿತರ ದಿನಗೂಲಿಕಾರರು ನಿತ್ಯ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಸಾವಿರಾರು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಬೀದರ್ ಜಿಲ್ಲೆಯ ಆಶ್ರಯ ಮನೆಯಲ್ಲಿ ವಾಸ ಮಾಡುವ ನೂರಾರು ಕುಟುಂಬಗಳು ಈ ಯೋಜನೆಯಿಂದ ದೂರ ಉಳಿದಿದ್ದು, ಕೆಲಸ ವಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. …

Read More »

ಸರ್ಕಾರಿ ಶಿಕ್ಷಕರ ವೇತನ ಕಡಿತಗೊಳಿಸಿ ಖಾಸಗಿ ಶಿಕ್ಷಕರಿಗೆ ಪ್ಯಾಕೇಜ್

ಬೆಂಗಳೂರು: ರಾಜ್ಯದ ಅನುದಾನರಹಿತ ಶಾಲಾ- ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ಚಿಂತಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಕೆಲವು ದಿನಗಳ ವೇತನ ಕಡಿತಗೊಳಿಸಿ ಆ ಹಣದಿಂದ ಪ್ಯಾಕೇಜ್ ನೀಡುವ ಬಗ್ಗೆ ಸಚಿವ ಎಸ್.ಸುರೇಶ್ ಕುಮಾರ್‌ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಅವರು, ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ವಿವಿಧ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಅಭ್ಯರ್ಥಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಭಾಗಿಯಾಗಿರುವ ಅಶ್ಲೀಲ ಸಿಡಿ ಪ್ರಕರಣದ ಶಂಕಿತ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್​ ಜೂನ್ 2ಕ್ಕೆ ಮುಂದೂಡಿದೆ. ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್​ನ 91ನೇ ಕೋರ್ಟ್​ ಆದೇಶ ನೀಡಿದೆ. ಬ್ಲಾಕ್​ಮೇಲ್ ಸಂಬಂಧ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳಾದ ನರೇಶ್​ ಗೌಡ ಮತ್ತು ಶ್ರವಣ್ ಈ ಸಂಬಂಧ​ ನ್ಯಾಯಾಲಯದ …

Read More »

B.I.M.S.ಅವ್ಯವಸ್ಥೆಯ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಬೆಳಗಾವಿ– ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಭೇಟಿ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯಲ್ಲಿ ಅಧಿಕಾರಿಗಳ ಸರಣಿ ಸಭೆ ಆರಂಭವಾಗಿದೆ. ಕೊರೋನಾ ನಿಯಂತ್ರಣದಲ್ಲಿ ಆಗುತ್ತಿರುವ ಅವ್ಯವಸ್ಥೆಯ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ವಿಶೇಷವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಯಾರ ನಿಯಂತ್ರಣವೂ ಇಲ್ಲದೆ ಕೊರೋನಾ ಅವ್ಯವಸ್ಥೆ ತೀವ್ರವಾಗಿದೆ. ಯಾರಿಗೆ ಬೆಡ್ ಸಿಗುತ್ತದೆ, ಎಷ್ಟು ಜನ ಸಾಯುತ್ತಿದ್ದಾರೆ, ಯಾರಿಗೆ ಚಿಕಿತ್ಸೆ ಸಿಗುತ್ತಿದೆ ಯಾವುದೂ ಜನಸಾಮಾನ್ಯರಿಗಿರಲಿ, ಮಂತ್ರಿಗಳಿಗೂ ತಿಳಿಯದಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಮಂತ್ರಿಗಳು, ಶಾಸಕರು ನಿರಂತರ …

Read More »

ಬೆಳೆದ ಬಾಳೆಗೆ ಸಿಗದ ಬೆಲೆ: ಉಚಿತವಾಗಿ ಹಂಚಿದ ಎಂ.ಬಿ.ಪಾಟೀಲ ಅಭಿಮಾನಿ ರೈತ

ವಿಜಯಪುರ: ಕೋವಿಡ್ ಸಂಕಷ್ಟದ ಕಾರಣಕ್ಕೆ ತಾವು ಬೆಳೆದ ಬಾಳೆಗೆ ಮಾರುಕಟ್ಟೆ ಸಿಗದಿದ್ದಾಗ ತಿಪ್ಪೆಗೆ ಸುರಿಯದೇ, ಹಣ್ಣನ್ನು ಹಳ್ಳಿಗಳಲ್ಲಿ ಹಂಚುವ ಮೂಲಕ ತಮ್ಮ ಕ್ಷೇತ್ರದ ಶಾಸಕರ ಸೇವೆಗೆ ಕೃತಜ್ಞತೆ ಸಲ್ಲಿಸಿ ರೈತರೊಬ್ಬರು ಮಾದರಿ ಆಗಿದ್ದಾರೆ. ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್ ಗ್ರಾಮದ ರೈತ ಬಸವರಾಜ ಕಾತ್ರಾಳ ಕ್ಷೇತ್ರದ ಶಾಸಕರಾದ ಎಂ.ಬಿ.ಪಾಟೀಲ ಅವರ ಅಪ್ಪಟ ಅಭಿಮಾನಿ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾವು ಲಕ್ಷಾಂತರ ರೂ. ಬಂಡವಾಳ ಹಾಕಿ, ಶ್ರಮ ವಹಿಸಿ 3 ಎಕರೆ …

Read More »

ಧಾರವಾಡ ರೈತರ ಜಮೀನಿಗೆ​ ಭೇಟಿ, ಹೊಲದಲ್ಲಿ ಕುಳಿತು ಸಮಸ್ಯೆ ಆಲಿಸಿದ ಡಿಕೆ ಶಿವಕುಮಾರ್​

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಧಾರವಾಡ ತಾಲೂಕಿನ ರಾಯಪುರ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ರೈತರ ಸದ್ಯದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ರು. ಅನ್ನದಾತರ ಜೊತೆ ಹೊಲದಲ್ಲಿಯೇ ಕುಳಿತು ಅವರ ಸಮಸ್ಯೆಗಳನ್ನ ಆಲಿಸಿದರು. ಸದ್ಯ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ರೆ ನಮಗೆ ಬೇಕಾದ ಬೀಜ ಸಿಗುತ್ತಿಲ್ಲ ಎಂದು ರೈತರು ಹೇಳಿದರು. 5 ಎಕರೆ ಮೇಲೆ ಎಷ್ಟೇ ಜಮೀನು ಇದ್ದರೂ ಸಹ ಸರ್ಕಾರ ಕೇವಲ …

Read More »

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ಗದಗ: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಬಸ್ಗಳ ಓಡಾಡ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಅಜ್ಜಿಯೊಬ್ಬರು ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಬರುವಂತೆ ವೃದ್ಧೆಗೆ ತಿಳಿಸಿದ್ದರು. ಹೀಗಾಗಿ ಅಜ್ಜಿ ಅಂಚೆ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಪೊಲೀಸರು ಅಜ್ಜಿಯನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ …

Read More »

ಮಗನ ಔಷಧಿಗೆ 280 ಕಿಲೋಮೀಟರ್ ಸೈಕಲ್ ತುಳಿದ ಅಪ್ಪ

ಮೈಸೂರು : ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ತಂದೆ ಸೈಕಲ್ ತುಳಿದಿರುವ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

71 ಶವಗಳನ್ನು ಗಂಗಾ ನದಿಯಿಂದ ಶಪಡಿಸಿಕೊಂಡು ಅಂತ್ಯಸಂಸ್ಕಾರ

ಬಲರಾಂಪುರ್: ಉತ್ತರಪ್ರದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆಯುವ ಆಘಾತಕಾರಿ ವಿಡಿಯೋ ಬಯಲಾಗಿದೆ. ಗಂಗಾ ನದಿ ತೀರದಲ್ಲಿ ಆಳವಿಲ್ಲದ ಸಮಾಧಿಗಳಲ್ಲಿ ಸಾವಿರಾರು ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಕೆಲವು ಮೃತದೇಹಗಳನ್ನು ನದಿಗೆ ಎಸೆಯಲಾಗಿದೆ ಎಂದು ಕೆಲವು ವಾರಗಳ ಹಿಂದೆ ವಿಶ್ವದಾದ್ಯಂತ ಸುದ್ದಿಯಾಗಿತ್ತು. ನದಿಗಳಲ್ಲಿ ಮೃತದೇಹಗಳನ್ನು ಎಸೆಯದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಉತ್ತರದ ಅನೇಕ ರಾಜ್ಯಗಳಿಗೆ ಆದೇಶಿಸಿದೆ. ಇಂತಹ ಘಟನೆ ಮರುಕಳಿಸದಂತೆ ನದಿ ತೀರಗಳಲ್ಲಿ ಗಸ್ತು ಹೆಚ್ಚಿಸುವಂತೆ ಕೇಂದ್ರದಿಂದ …

Read More »

ಹತ್ತು ವರ್ಷಗಳ ಬಳಿಕ ಮನೆಗೆ ಮರಳಿ ಬಂದ ಮಗ – ಕುಟುಂಬಸ್ಥರ ಸಂತೋಷ

ಕೊಪ್ಪಳ: ಹತ್ತು ವರ್ಷಗಳ ಮಗ ಬಳಿಕ ಜುಮಲಾಪೂರ ಗ್ರಾಮದ ಯುವಕನೊಬ್ಬ ಮರಳಿ ಮನೆಗೆ ಬಂದಿರುವ ಘಟನೆ ನಡೆದಿದ್ದು, ಕುಟುಂಬದವರೆಲ್ಲ ಸಂತಸ ಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಗುರುಬಸಪ್ಪ ಹಾಗೂ ಪಾರ್ವತಮ್ಮ ದಂಪತಿಯ ಪುತ್ರ ದೇವರಾಜ (30) ಹತ್ತು ವರ್ಷದ ನಂತರ ಮರಳಿ ಮನೆಗೆ ಬಂದಿದ್ದಾನೆ. ಬಾಲ್ಯದಲ್ಲಿ ತಂದೆ, ತಾಯಿ ಜೊತೆ ವಾಗ್ವಾದ ಮಾಡಿಕೊಂಡು ಊರು ಬಿಟ್ಟು ತೆರಳಿದ್ದು, ಇದೀಗ ಕೊರೊನಾದಿಂದಾಗಿ ಕಂಪೆನಿಗಳು ಮುಚ್ಚಿರುವ ಕಾರಣ ತಮ್ಮ ಸ್ನೇಹಿತರ ಸಹಾಯದಿಂದ …

Read More »