Breaking News

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ನೆರವು: ಜಾತ್ರೆಗೆ ಸಜ್ಜಾಗುತ್ತಿದೆ ಶಿಂದೋಳಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅಭಿವೃದ್ಧಿ ಕಾಮಗಾರಿಗಳಿಗೆ …

Read More »

ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಜೆಟ್ ಪೂರ್ವಭಾವಿ ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸಚಿವರು ಪ್ರಸ್ತಾಪಿಸಿದರು. ವಿಡಿಯೋ ಸಂವಾದಲ್ಲಿ ಇಲಾಖೆಯ ಹಾಗೂ …

Read More »

ಮಂಡ್ಯ: ಕುತ್ತಿಗೆ ಕೊಯ್ದು ವ್ಯಕ್ತಿಯ ಭೀಕರ ಕೊಲೆ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿ ಇಂದು ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನ ಹತ್ಯೆಯಾಗಿದೆ. ಎಲ್. ಕೃಷ್ಣೇಗೌಡ (47) ಹತ್ಯೆಗೀಡಾದ ವ್ಯಕ್ತಿ. ಯಾರೋ ದುಷ್ಕರ್ಮಿಗಳು ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ಮದನಹಟ್ಟಿ ದೇವಾಲಯದ ಬಳಿ ಈ ಘಟನೆ ನಡೆದಿದೆ. ಕೃಷ್ಣೇಗೌಡರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು, ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗುತ್ತಿದೆ. ಬೆಳ್ಳಂಬೆಳಗ್ಗೆ ಹರಿದ ನೆತ್ತರನ್ನು ನೋಡಿ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. …

Read More »

16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ C.M.

ಬೆಂಗಳೂರು: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರು ಇದೀಗ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಮಾರ್ಚ್​ನಲ್ಲಿ ಮಂಡಿಸಲಿರುವ 2025-26 ಸಾಲಿನ ಆಯವ್ಯಯಗೆ ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಿದ್ದಾರೆ. ಬಜೆಟ್ ಮಂಡನೆಯಲ್ಲಿ ದಾಖಲೆ ಸೃಷ್ಟಿಸಿರುವ ಸಿಎಂ ಸಿದ್ದರಾಮಯ್ಯರ 15 ಆಯವ್ಯಯಗಳ ಸ್ವಾರಸ್ಯಕರ ಮಾಹಿತಿ ಇಲ್ಲಿದೆ. ಸಿಎಂ ಸಿದ್ದರಾಮಯ್ಯ 2025-26 ಸಾಲಿನ ಬಜೆಟ್ ಮಂಡನೆಗೆ ತಯಾರಿ …

Read More »

ನೀವು ಸೈಬರ್ ಅಪರಾಧದ ಬಲಿಪಶುಗಳೇ” ಡಯಲ್ 1930

ಬೆಳಗಾವಿ: ಬೆಳಗಾವಿ ನಗರದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅವುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಅದರ ಭಾಗವಾಗಿ 1930 ಸಹಾಯವಾಣಿಗೆ ಇಂದು ಚಾಲನೆ ನೀಡಲಾಯಿತು. ಬೆಳಗಾವಿ ನಗರದ ಹೃದಯಭಾಗ ರಾಣಿ ಚನ್ನಮ್ಮ ವೃತ್ತದಲ್ಲಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ 1930 ಸಹಾಯವಾಣಿಗೆ ಚಾಲನೆ ನೀಡಿದರು. ಚನ್ನಮ್ಮ ಪ್ರತಿಮೆ ಸುತ್ತಲೂ ಜಾಗೃತಿ ಫಲಕ ಅಳವಡಿಸಲಾಗಿದೆ. ಅದೇ ರೀತಿ ಬೃಹದಾಕಾರದ ಫ್ಲೆಕ್ಸ್​ನಲ್ಲಿ “ನೀವು …

Read More »

ಭದ್ರಾವತಿ ಶಾಸಕ ಸಂಗಮೇಶ್ ಮಗನ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ರಾಜಣ್ಣ

ಬೆಂಗಳೂರು: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ‘ಪುತ್ರರತ್ನ’ ಬಸವೇಶ್ ನಿನ್ನೆ ಭದ್ರಾವತಿಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕೆಟ್ಟ ಪದಗಳನ್ನು ಬಳಸಿ ಬೈದಾಡಿರುವ ಸಂಗತಿ ಕನ್ನಡಿಗರಿಗೆಲ್ಲ ಗೊತ್ತಿದೆ. ಒಂದು ಸುಸಂಸ್ಕೃತ ಕುಟುಂಬ ಯೋಚಿಸಲೂ ಸಾಧ್ಯವಿಲ್ಲದಂಥ ಕೆಟ್ಟ ಪದಗಳನ್ನು ಬಸವೇಶ್ ಅಧಿಕಾರಿಯ ವಿರುದ್ಧ ಬಳಸಿದ್ದಾನೆ. ಅವನು ಬಳಸಿದ ಭಾಷೆ ಮತ್ತು ಅಧಿಕಾರಿಯೊಂದಿಗೆ ನಡೆದುಕೊಂಡಿರುವ ರೀತಿಯನ್ನು ಸಹಕಾರ ಸಚಿವ ಕೆಎನ್ ರಾಜಣ್ಣ ತೀವ್ರವಾಗಿ ಖಂಡಿಸಿದ್ದಾರೆ. ಶಾಸಕನ ಮಗನಾಗಲೀ ಆಥವಾ …

Read More »

ಟಾಟಾ ಮೋಟಾರ್ಸ್ ಕಾರುಗಳ ಮೇಲೆ ಬಂಪರ್ ರಿಯಾಯಿತಿ

ಟಾಟಾ ಕಾರುಗಳು ಫೆಬ್ರವರಿ ರಿಯಾಯಿತಿ ಕೊಡುಗೆಗಳು: ಈ ತಿಂಗಳು ನೀವು ಟಾಟಾ ಕಂಪನಿಯ ಹೊಸ ಕಾರು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಟಾಟಾ ಮೋಟಾರ್ಸ್ ತನ್ನ 2024 ರ ಉತ್ಪಾದನಾ ವರ್ಷದ ಮಾದರಿಗಳ ಮೇಲೆ ಉತ್ತಮ ರಿಯಾಯಿತಿಗಳು ಮತ್ತು ವಿನಿಮಯ/ಸ್ಕ್ರ್ಯಾಪೇಜ್ ಬೋನಸ್ ಅನ್ನು ನೀಡುತ್ತಿದೆ. ಟಿಯಾಗೊ, ಟಿಗೋರ್, ಪಂಚ್, ನೆಕ್ಸಾನ್, ಆಲ್ಟ್ರೋಜ್, ಹ್ಯಾರಿಯರ್, ಸಫಾರಿ ಮುಂತಾದ ವಿವಿಧ ವಿಭಾಗಗಳ ಟಾಟಾ ಕಾರುಗಳ ಮೇಲೆ ನೀವು ಭಾರಿ …

Read More »

ಸರ್ಕಾರಿ ಕಟ್ಟಡಗಳ ಮೇಲೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋ ಹಾಕಿರುವುದ ಆಕ್ಷೇಪ

ಬೆಂಗಳೂರು: ರಾಜಕೀಯ ನಾಯಕರ ಫೋಟೋಗಳನ್ನು ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ ಹಾಕುವುದು ಕರ್ನಾಟಕ ಬಯಲು ಜಾಗಗಳನ್ನು ವಿರೂಪಗೊಳಿಸುವುದನ್ನು ತಡೆಯುವ ಕಾಯ್ದೆಯ ವ್ಯಾಪ್ತಿಗೆ ಬರಲಿದೆಯೇ ಎಂಬುದರ ಕುರಿತಂತೆ ವಿವರಣೆ ನೀಡುವಂತೆ ಬಿಬಿಎಂಪಿಗೆ ಇಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ, ಉದ್ಯಾನವನಗಳಲ್ಲಿ ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರ ಫೋಟೋಗಳನ್ನು ಬಿಬಿಎಂಪಿ ಹಣದಲ್ಲಿ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯ ನಿವಾಸಿ ಎಚ್.ಎಂ.ಆರ್ತೀಶ್ ಎಂಬವರು ಸಾರ್ವಜನಿಕ ಹಿತಾಸಕ್ತಿ …

Read More »

ಯತ್ನಾಳ್​ಗೆ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ರಾಜ್ಯ ಬಿಜೆಪಿ ಬಣ ಬಡಿದಾಟ ರಾಯಕೀಯ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಮ್ಮೆ ಬಿಸಿ ಮುಟ್ಟಿಸಲು, ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಮಧ್ಯಪ್ರವೇಶ ಮಾಡಿದೆ. ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ. ಪಕ್ಷದ ಶಿಸ್ತು ಪಾಲನೆ ಮಾಡದಿರುವ ಬಗ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಯತ್ನಾಳ್, 72 ಗಂಟೆಯೊಳಗೆ ಉತ್ತರಿಸುವಂತೆ …

Read More »

ಅಮಾನತಾದ ಖಾನಾಪುರದ ತಹಶೀಲ್ದಾರ್‌ ಪ್ರಕಾಶ್​ ಗಾಯಕವಾಡ

ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ. ಪ್ರಕಾಶ್​ ಗಾಯಕವಾಡ ಅಮಾನತಾದ ತಹಶೀಲ್ದಾರ್. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ್ ಹೆಚ್.​ಜಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜ.7ರಂದು ಪ್ರಕಾಶ್​ ಗಾಯಕವಾಡ ವಿರುದ್ಧ ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.8ರಂದು ಇವರ ಬೆಳಗಾವಿ ಮನೆ, ಖಾನಾಪುರದ ಬಾಡಿಗೆ ಮನೆ ಮತ್ತು ತಹಶೀಲ್ದಾರ್ ಕಚೇರಿ, …

Read More »