Breaking News

ಗಂಡನನ್ನೇ ಕೊಂದು ಹೂತು ಹಾಕಿದ ಪತ್ನಿ

ಚಿಕ್ಕೋಡಿ: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಗಂಡನನ್ನೇ ಹೆಂಡತಿ ಕೊಲೆ ಮಾಡಿ ಹೂತು ಹಾಕಿದ ಘಟನೆ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ತಡವಾಗಿ ಪತ್ತೆಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‌ ತಾಲೂಕಿನ ನೇರ್ಲೆ ಗ್ರಾಮದ ಸಚಿನ ಸದಾಶಿವ ಭೋಪಳೆ(35) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿದ ಪತ್ನಿ ಅನಿತಾ ಭೋಪಳೆ(33) ಸಹಚರ ಸಹೋದರ ಹಂಚಿನಾಳ ಗ್ರಾಮದ ಕೃಷ್ಣಾತ್‌ ರಾಜಾರಾಮ ಘಾಟಗೆ(26) ಹಾಗೂ ಪತ್ನಿಯ ಸಹೋದರಿ ಕಾಗಲ್‌ ತಾಲೂಕಿನ ಸಿದ್ಧನೇರ್ಲಿ ಗ್ರಾಮದ ವನಿತಾ …

Read More »

473 ಮಂದಿಗೆ ಕೋವಿಡ್ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಶನಿವಾರ 473 ಮಂದಿಗೆ ಸೋಂಕು ತಗುಲಿದ್ದು, 331 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.473 ಹೊಸ ಪ್ರಕರಣಗಳಿಂದ 14235 ಸೋಂಕಿತರು ಆಗಿದ್ದು, ಒಂದೇ ದಿನ 331 ಮಂದಿ ಗುಣಮುಖರಾಗಿ ಇಲ್ಲಿಯವರೆಗೆ 10145 ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ವಾರ್ಡ್‌ನಲ್ಲಿ ಸದ್ಯ 3887 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 1,08,624 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 26,960 …

Read More »

ಪತಿ ಕೊಂದು ಎಮ್ಮೆ ಸತ್ತಿದೆ ಅಂತ ಹೂತು ಹಾಕಿದ್ದ ಕೇಸ್; ನಾಲ್ವರು ಆರೋಪಿಗಳ ಬಂಧನ

ಚಿಕ್ಕೋಡಿ: ಪತಿಯನ್ನು ಕೊಂದು ಎಮ್ಮೆ ಸತ್ತಿದೆ ಅಂತಾ ಹೊಲದಲ್ಲಿ ಹೂತು ಹಾಕಿದ್ದ ಆರೋಪದ ಮೇಲೆ ಪತ್ನಿ ಸೇರಿದಂತೆ ಆಕೆಯ ಸಂಬಂಧಿಕರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಮೃತ ಸಚಿನ್ ಪತ್ನಿ ಅನಿತಾ, ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ್​(29), ಗಣೇಶ ರೇಡೇಕರ(21),ಬಂಧಿತ ಆರೋಪಿಗಳು. ಅನಿತಾ ತಮ್ಮ ಪತಿಯನ್ನು ಹತ್ಯೆ ಮಾಡಿ ಸಹೋದರ, ಸಹೋದರಿಯ ಸಹಾಯದಿಂದ ಹೊಲದಲ್ಲಿ ಜೆಸಿಬಿಯಲ್ಲಿ ಗುಂಡಿತೋಡಿಸಿದ್ದ ಜಾಗದಲ್ಲಿ ಹೂತು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. …

Read More »

ಅಭಿವೃದ್ಧಿಯೇ ನಮ್ಮ ಗುರಿ: ರಮೇಶ ಜಾರಕಿಹೊಳಿ

ಗೋಕಾಕ: ‘ಜನರಿಗೆ ಮೂಲ ಸೌಕರ್ಯ ಒದಗಿಸಲು ಸಂಕಲ್ಪ ತೊಟ್ಟಿದ್ದೇವೆ. ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿ’ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ದುರದುಂಡಿ ಗ್ರಾಮದಲ್ಲಿ ಆರ್‌ಡಿಪಿಆರ್‌, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3ರಡಿ ದುರದುಂಡಿ- ಬಡಿಗವಾಡ-ಮಲ್ಲಾಪೂರ ಪಿಜಿ ರಸ್ತೆ ಸುಧಾರಣೆ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಬಿಜೆಪಿಯು ಸಮಗ್ರ ಪ್ರಗತಿ ಬಯಸಿದ್ದು, ಇದರ …

Read More »

ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಆಂಧ್ರ ಮತ್ತೆ ನಂ.1: 17ನೇ ಸ್ಥಾನಕ್ಕೆ ಕರ್ನಾಟಕ ಕುಸಿತ!

ನವದೆಹಲಿ : ಉದ್ಯಮಸ್ನೇಹಿ ವಾತಾವರಣ ಹೊಂದಿರುವ ರಾಜ್ಯಗಳ ವಾರ್ಷಿಕ ರಾರ‍ಯಂಕಿಂಗ್‌ ಶನಿವಾರ ಪ್ರಕಟಗೊಂಡಿದ್ದು, ಆಂಧ್ರಪ್ರದೇಶ ಸತತ 3ನೇ ಬಾರಿಗೆ ಮೊದಲ ಸ್ಥಾನ ಗಳಿಸಿದೆ. ಆದರೆ ಕಳೆದ ಸಲ 8ನೇ ಸ್ಥಾನದಲ್ಲಿದ್ದ ಕರ್ನಾಟಕ ಈ ಸಲ 17ನೇ ಸ್ಥಾನಕ್ಕೆ ಇಳಿದಿದೆ. 2019ರ ಔದ್ಯಮಿಕ ಸುಧಾರಣೆ ಕ್ರಿಯಾಯೋಜನೆಗಳನ್ನು ರಾಜ್ಯಗಳು ಜಾರಿಗೊಳಿಸಿದ್ದನ್ನು ಆಧರಿಸಿ ಉದ್ದಿಮೆ ಹಾಗೂ ಆಂತರಿಕ ವ್ಯಾಪಾರ ಇಲಾಖೆ ಈ ಶ್ರೇಯಾಂಕ ಸಿದ್ಧಪಡಿಸಿದೆ. ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಿಸುವ ಉದ್ದೇಶದಿಂದ ಕಳೆದ 5 …

Read More »

ವಾಣಿಜ್ಯನಗರಿಯಲ್ಲಿ ಮುಂದುವರೆದ ಗಾಂಜಾ ಘಾಟು: ಮತ್ತಿಬ್ಬರು ಅಂದರ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸರು ಗಾಂಜಾ ಪ್ರಕರಣಗಳನ್ನು ಬೆನ್ನಟ್ಟುತ್ತಿದ್ದು, ಬಗೆದಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಮೂರು ಪ್ರಕರಣಗಳನ್ನು ಪೊಲೀಸರು ಭೇಧಿಸಿದ್ದು, ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ನೂರ್ ಅಹ್ಮದ್ ಹಾಗೂ ಅಕ್ಷಯ ವೇರ್ಣೆಕರ ಬಂಧಿತ ಆರೋಪಿಗಳು. ನಗರದಲ್ಲಿ ನಡೆಯುತ್ತಿರುವ ಗಾಂಜಾ ಹಾವಳಿಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ಬಗೆದಷ್ಟು ಪ್ರಕರಣಗಳು ಪತ್ತೆಯಾಗುತ್ತಿದ್ದು, ಉಪನಗರ ಠಾಣೆ ಪೊಲೀಸರು ಇಂದು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಗಾಂಜಾ ಹಾಗೂ ಸಾಗಾಟಕ್ಕೆ …

Read More »

ಪೆಟ್ರೋಲ್ ಟ್ಯಾಂಕರ್ ಹರಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಕುರಿಗಳಿಗೆ ಗಂಭೀರ ಗಾಯ

ಗದಗ: ಚಾಲಕನ ಅಜಾಗರೂಕತೆಯಿಂದ ಪೆಟ್ರೋಲ್ ಟ್ಯಾಂಕರ್ ಹರಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಕುರಿಗಳಿಗೆ ಗಂಭೀರ ಗಾಯವಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹೊಸಡಂಬಳ ಹಾಗೂ ಕದಂಪುರ ಮಧ್ಯೆ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹನುಮಂತ ಪೂಜಾರ ಅವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ರಾತ್ರಿ ವೇಳೆ ಕುರಿಗಳು ರಸ್ತೆ ದಾಟುವಾಗ ಗದಗ ನಿಂದ ಮುಂಡರಗಿ ಕಡೆಗೆ ವೇಗವಾಗಿ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ಕುರಿಗಳ ಮೇಲೆ …

Read More »

ನಂದಿನಿ ಸಿಹಿ ಮಾರಾಟ : ಭಾರೀ ಬಂಪರ್

ಬೆಂಗಳೂರು  : ಗೌರಿ ಗಣೇಶ ಹಬ್ಬ ಮತ್ತು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ನಂದಿನಿ ಸಿಹಿ ಉತ್ಸವಕ್ಕೆ ರಾಜ್ಯಾದ್ಯಂತ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದು ತಿಂಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ ಶೇ.68ರಷ್ಟುಹೆಚ್ಚಳವಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ಮಾಹಿತಿ ನೀಡಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ನಂದಿನಿ ಹಾಲು ಸೇರಿದಂತೆ ಚೀಸ್‌, ಪನ್ನೀರ್‌ ಮತ್ತು ಸಿಹಿ ಉತ್ಪನ್ನಗಳ ಮಾರಾಟದಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿತ್ತು. ಆದರೆ, ಗೌರಿ ಗಣೇಶ ಮತ್ತು …

Read More »

ಬೆನ್ನು ನೋವಿನ ನೆಪ ಹೇಳಿ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿ

ಬೆಂಗಳೂರು: ಡ್ರಗ್ಸ್ ಮಾಫಿಯಾ ಜಾಲದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ನಾನು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ವಿಚಾರಣೆ ವೇಳೆ ಹಲವು ಸತ್ಯಸಂಗತಿಗಳು ಬೆಳಕಿಗೆ ಬರುತ್ತಿದೆ. ಬೆಂಗಳೂರಿನ ಡೈರಿ ಸರ್ಕಲ್‍ನ ಕಿದ್ವಾಯಿ ಆಸ್ಪತ್ರೆ ಬಳಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನು ಶನಿವಾರ ಸಿಸಿಬಿ ವಿಚಾರಣೆ ಮಾಡಿಲ್ಲ. ನನಗೆ ಜ್ವರ, ಬೆನ್ನು ನೋವಿ ಎಂದು ನೆಪ ಹೇಳಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ …

Read More »

ಸ್ಯಾಂಡಲ್‍ವುಡ್‍ನ ಡ್ರಗ್ಸ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಡ್ರಗ್ಸ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಿಸಿಬಿ ವಿಚಾರಣೆಯ ವೇಳೆ ಹೊಸ ಹೊಸ ವಿಷಯಗಳು ಹೊರ ಬರುತ್ತಿವೆ. ಸದ್ಯ ಈ ಡ್ರಗ್ಸ್ ಕೇಸ್‍ನಲ್ಲಿ ಆರೋಪಿ ನಂಬರ್ 2 ಆಗಿರುವ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತ ರವಿಶಂಕರ್ ಅರೆಸ್ಟ್ ಆದ ಬಳಿಕ ಒಬ್ಬೊಬ್ಬರಾಗಿ ಅರೆಸ್ಟ್ ಆಗುತ್ತಿದ್ದಾರೆ. ರವಿಶಂಕರ್ ಬಾಯಿಬಿಡುತ್ತಿದ್ದಂತೆ ನಟಿ ರಾಗಿಣಿ ಸಹ ಸಿಸಿಬಿ ಬಂಧನದಲ್ಲಿದ್ದಾರೆ. ನಂತರ ಶಿವಪ್ರಕಾಶ್ ಪಾತ್ರ …

Read More »