ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ …
Read More »ಸಾವಿನಲ್ಲೂ ಒಂದಾದ ದಂಪತಿ
ಬಳ್ಳಾರಿ: ಪತಿ ಸಾವನ್ನಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಪಂ ವ್ಯಾಪ್ತಿಯಾ ಅಪ್ಪೇನಹಳ್ಳಿಯಲ್ಲಿ ನಡೆದಿದೆ. ಪರಮೇಶ್ವರ, ಅಂಗಡಿ ವಾಮದೇವಮ್ಮ(60) ಮೃತರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ವರ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಅಂಗಡಿ ವಾಮದೇವಮ್ಮ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಕಳೆದ ಒಂದು ವಾರದ ಹಿಂದ ಪರಮೇಶ್ವರಗೆ ಕೊರೊನಾ ಸೋಂಕು ತಗುಲಿರುವುದು …
Read More »ವಿಜಯೋತ್ಸವದ ನೆಪದಲ್ಲಿ ಬಿಜೆಪಿ ಬೆಳಗಾವಿಯಲ್ಲಿ ನಡೆಸಿದ್ದ ಜನಸೇವಕ ಸಮಾವೇಶ ಈಗ ಪೊಲೀಸ್ ಆಯುಕ್ತರಿಗೆ ಸಂಕಷ್ಟ: ರಾಜ್ಯ ಹೈಕೋರ್ಟ್ ಪೊಲೀಸ್ ಆಯುಕ್ತರ ವಿರುದ್ಧ ಗರಂ
ಬೆಳಗಾವಿ – ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ವಿಜಯೋತ್ಸವದ ನೆಪದಲ್ಲಿ ಬಿಜೆಪಿ ಬೆಳಗಾವಿಯಲ್ಲಿ ನಡೆಸಿದ್ದ ಜನಸೇವಕ ಸಮಾವೇಶ ಈಗ ಪೊಲೀಸ್ ಆಯುಕ್ತರಿಗೆ ಸಂಕಷ್ಟ ತಂದಿಟ್ಟಿದೆ. ಸಾಂಕ್ರಾಮಿಕ ರೋಗ ಕೊರೋನಾ ಸಂದರ್ಭದಲ್ಲಿ ಇಂತಹ ಸಮಾವೇಶ ನಡೆಸಿರುವ ಕುರಿತು ರಾಜ್ಯ ಹೈಕೋರ್ಟ್ ಪೊಲೀಸ್ ಆಯುಕ್ತರ ವಿರುದ್ಧ ಗರಂ ಆಗಿದ್ದು, ಜೂನ್ 3ರೊಳಗೆ ವಿವರಣೆ ನೀಡುವಂತೆ ಸೂಚಿಸಿದೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಆಗಿನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ …
Read More »ಒಂದು ಔಷಧಿಗೆ 16 ಕೋಟಿ; ಮುಗ್ಧ ಮಗುವಿನ ಜೀವ ಉಳಿಸಿ ಮಾನವೀಯತೆ ಮೆರೆದ ಕಿಂಗ್ ಕೊಹ್ಲಿ
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ ಕೂಡ ಇತ್ತು. ಇಷ್ಟು ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ ಬೆನ್ನಲ್ಲೇ ಮಾಜಿ ಕ್ರಿಕೆಟ್ ಆಟಗಾರ್ತಿ ಶ್ರಾವಂತಿ ನಾಯ್ಡು ತಾಯಿಯ ಚಿಕಿತ್ಸೆಗೆ ಹಣದ ಕೊರತೆ ಉಂಟಾದಾಗ ವಿರಾಟ್ ಕೊಹ್ಲಿ 6.67 ಲಕ್ಷ ರೂಪಾಯಿಗಳನ್ನು ನೀಡಿ ಮಾನವೀಯತೆ ಮೆರೆದಿದ್ದರು. …
Read More »ನೀರಿನಲ್ಲೂ ಪತ್ತೆಯಾದ ಕೋವಿಡ್ ವೈರಸ್!
ಲಖನೌ : ಕೋವಿಡ್ ಎರಡನೇ ಅಲೆಗೆ ಸಿಲುಕಿ ದೇಶಕ್ಕೆ ದೇಶವೇ ತತ್ತರಿಸಿರುವ ನಡುವೆ, ಈಗ ಇನ್ನೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದ್ದು, ನೀರಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿರುವುದಾಗಿ ತಜ್ಞರು ಹೇಳಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಮತ್ತು ವಿಶ್ವ ಆರೋಗ್ಯ ಸಂಸ್ಥೆ ( ಡಬ್ಲ್ಯುಹೆಚ್ಒ ) ಜಂಟಿಯಾಗಿ ಕೊಳಚೆ ನೀರಿನಲ್ಲಿ ವೈರಸ್ ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿತ್ತು.ಇದಕ್ಕಾಗಿ ಉತ್ತರ ಪ್ರದೇಶದ ಕೆಲ ಭಾಗಗಳಿಂದ ಕೊಳಚೆ ನೀರು …
Read More »ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ಇನ್ನೂ ಪೂರ್ಣವಾಗಿಲ್ಲ: ಎಸ್‌ಪಿ
ವಿಜಯಪುರ: ‘ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರ ಇಬ್ಬರು ಬಾಲಕಿಯರನ್ನು ಅತ್ಯಾಚಾರ ಮಾಡಿ, ಕೊಲೆಗೈದಿರುವ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆದಿದೆ’ ಎಂದು ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರಾದ ಅಡಿವೆಪ್ಪ ಸಾಲಗಲ್, ಉಮೇಶ ನಡುವಿನಮನಿ, ದೇವೇಂದ್ರ ಹಾದಿಮನಿ, ಗುರುರಾಜ ಗುಡಿಮನಿ, ಸಂಜು ಕಂಬಾಗಿ ಮತ್ತಿತರರು ಆರೋಪಿಸಿದ್ದಾರೆ. ಈ ಸಂಬಂಧ ‘ಪ್ರಜಾವಾಣಿ’ಗೆ ಸೋಮವಾರ ಕರೆ ಮಾಡಿ ಮಾತನಾಡಿದ ಸಂಘಟನೆಗಳ ಮುಖಂಡರು, ‘ಬಾಲಕಿಯರ ಅತ್ಯಾಚಾರ, ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸುವ ಹುನ್ನಾರ ನಡೆದಿದೆ. ಇದು ಸಂಪೂರ್ಣ …
Read More »ಸಬ್ ಇನ್ಸ್ ಪೆಕ್ಟರ್ ಅರ್ಜುನ್ ನ್ನು ಜೈಲಿಗೆ ಕಳಿಸಲು ಸಂಸದ ಹನುಮಂತಯ್ಯ ಒತ್ತಾಯ
ಬೆಂಗಳೂರು: ‘ವಿಚಾರಣೆ ನೆಪದಲ್ಲಿ ದಲಿತ ಯುವಕನನ್ನು ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಅರ್ಜುನ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಜೊತೆಗೆ ಸೇವೆಯಿಂದಲೇ ವಜಾಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಒತ್ತಾಯಿಸಿದ್ದಾರೆ. ‘ಕಿರುಗುಂದ ಗ್ರಾಮದ ಕೆ.ಎಲ್.ಪುನೀತ್ ಜೊತೆ ಅರ್ಜುನ್ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಅವರು ನಡೆದುಕೊಂಡಿರುವ ರೀತಿ ಖಂಡನೀಯ. ಅವರ ಕ್ರೂರ ವರ್ತನೆಯ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಸರ್ಕಾರವು ಆರಂಭದಲ್ಲಿ ಯಾವುದೇ …
Read More »ಸ್ಥಳೀಯ ಸಂಸ್ಥೆಗಳಿಗೆ SDA, ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇರ ನೇಮಕಾತಿ
ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳ ನೇಮಕಾತಿ ವಿಧಾನ ಬದಲಿಸಿದೆ. ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ ನಿಯಮ ಜಾರಿಯಾಗಲಿದ್ದು, ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಪರೀಕ್ಷೆ ಇರುವುದಿಲ್ಲ. ನೇರ ನೇಮಕಾತಿ ಮೂಲಕ ಆಯ್ಲೆ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳ ಸಮಿತಿ ಆಯ್ಕೆ ತೀರ್ಮಾನ ಕೈಗೊಳ್ಳಲಿದೆ. ಲೋಕಸೇವಾ ಆಯೋಗದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಅಂಕಗಳ ಆಧಾರದ ಮೇಲೆ …
Read More »ಸೋಂಕಿತರನ್ನು ಕುಣಿದು, ರಂಜಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ : ಹೊನ್ನಾಳ್ಳಿಯ ಹೋರಿಯ ಡ್ಯಾನ್ಸ್ ಸಖತ್ ವೈರಲ್.!
ಹೊನ್ನಾಳ್ಳಿ : ಈಗಾಗಲೇ ಅನೇಕ ವಿಷಯಗಳಿಂದ ಸುದ್ದಿಯಾಗಿರುವಂತ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳ್ಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ, ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ, ಅವರನ್ನು ರಂಜಿಸಿ, ಸೋಂಕಿನ ಬಾಧೆಯಿಂದ ಕೆಲಕಾಲ ಮರೆಯುವಂತೆ ಮಾಡಿದ್ದಾರೆ. ಹೌದು.. ಹೊನ್ನಾಳ್ಳಿಯ ಹೋರಿ ಎಂದು ಸಹ ಪ್ರಸಿದ್ಧವಾಗಿರುವಂತ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಕೊರೋನಾ ಸೋಂಕಿತರಿಗೆ ಒಂದಷ್ಟು ಉಲ್ಲಾಸಭರಿತರನ್ನಾಗಿ ಮಾಡಿದ್ದಾರೆ. ಅದು ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ರಿಮೇಕ್ ಹಾಡನ್ನು ಹಾಕಿ, …
Read More »ಪ್ಯಾಕೇಜ್ ಪರಿಹಾರ ಸಿಗದವರಿಗೆ ಸಿಹಿ ಸುದ್ದಿ: 10 -12 ದಿನಗಳಲ್ಲಿ ಮತ್ತೊಂದು ವಿಶೇಷ ಪ್ಯಾಕೇಜ್; ಸಿಎಂ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ 10 -12 ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಹಣಕಾಸಿನ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಪರಿಹಾರ ದಿನ ಸಿಗದವರಿಗೆ ಇನ್ನೊಂದು ಪ್ಯಾಕೇಜ್ ನೀಡಲು ಪ್ರಯತ್ನಿಸುತ್ತೇನೆ ಎಂದು …
Read More »