ವಿಜಯನಗರ, ಮೇ 23; ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ತಗುಲಿದ ವ್ಯಕ್ತಿಗಳು ಮನೆಯ ಆರೈಕೆಯಲ್ಲಿ ಚಿಕಿತ್ಸೆ ಪಡೆಯುವಂತಿಲ್ಲ. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಬೇಕು ಎಂದು ಸರ್ಕಾರ ಹೇಳಿದೆ. ಆದರೆ ಜನರು ಇದಕ್ಕೆ ಒಪ್ಪುತ್ತಿಲ್ಲ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಲು ಅಧಿಕಾರಿಗಳು ವಾಹನ ಸಮೇತ ಆಗಮಿಸಿದಾಗ ಅವರ ಜೊತೆ ಜನರು ವಾಗ್ವಾದ ಮಾಡಿ ವಾಪಸ್ ಕಳಿಸಿದ ಘಟನೆ ಶನಿವಾರ ವಿಜಯನಗರದಲ್ಲಿ ನಡೆದಿದೆ. ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ …
Read More »ಡೀಸೆಲ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಟ್ಯಾಂಕ್‌ನಲ್ಲಿ ಡೀಸೆಲ್ ಅನ್‌ಲೋಡ್ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ
ಬ್ಯಾಡಗಿ: ಡೀಸೆಲ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಟ್ಯಾಂಕ್‌ನಲ್ಲಿ ಡೀಸೆಲ್ ಅನ್‌ಲೋಡ್ ಮಾಡುವ ಮೂಲಕ ಗ್ರಾಹಕರನ್ನು ಪೇಚಿಗೆ ಸಿಲುಕಿಸಿದ ಘಟನೆ ಪಟ್ಟಣದ ಹೊರವಲಯ(ಮೋಟೆಬೆನ್ನೂರ ರಸ್ತೆಯಲ್ಲಿ)ದಲ್ಲಿರುವ ನೇತ್ರಾವತಿ ಬಂಕ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದಷ್ಟೇ ತಮ್ಮದೇ ಸ್ವಂತ ಟ್ಯಾಂಕರ್‌ನ ಎರಡು ಕಂಪಾರ್ಟ್‌ಮೆಂಟ್ ನಲ್ಲಿ ಪೆಟ್ರೋಲ್, ಇನ್ನೆರಡು ಕಂಪಾರ್ಟ್‌ಮೆಂಟ್ ಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ತುಂಬಿಕೊಂಡು ಬರಲಾಗಿತ್ತು. ಆದರೆ, ರಾತ್ರಿ ವೇಳೆ ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಡೀಸೆಲ್ …
Read More »ಜೂಜಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟು ದಾಳಿ ಮಾಡಿಸಿದ್ದಾನೆಂದು ಸಿಟ್ಟಾಗಿ ಓರ್ವನ ಮೇಲೆ ಹಲ್ಲೆ ಮಾಡಿ, ಅಪಹರಿಸಿಕೊಂಡು ಹೋಗಿ ಕಾರು ಹಾಯಿಸಿ ಕೊಲೆಗೆ ಯತ್ನ
ಹುಬ್ಬಳ್ಳಿ: ಜೂಜಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟು ದಾಳಿ ಮಾಡಿಸಿದ್ದಾನೆಂದು ಸಿಟ್ಟಾಗಿ ಓರ್ವನ ಮೇಲೆ ಹಲ್ಲೆ ಮಾಡಿ, ಅಪಹರಿಸಿಕೊಂಡು ಹೋಗಿ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಸುಗಲ್ಲ ಗ್ರಾಮದ ರಹಿಮಾನಸಾಬ ಸೇರಿದಂತೆ ನಾಲ್ವರು ಹಾಗೂ ಹುಬ್ಬಳ್ಳಿಯ ಮೂವರು ಸೇರಿ ವೇ ಬ್ರಿಜ್‌ನಲ್ಲಿ ಕೆಲಸ ಮಾಡುತ್ತಿರುವ ಕುಸುಗಲ್ಲ ಗ್ರಾಮದ ಮೌಲಾಸಾಬ ಆರ್. ಶೇಖಸನದಿ ಎಂಬಾತನ ಕೊಲೆಗೆ ಯತ್ನಿಸಿದ್ದಾರೆ.ಜೂಜಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ದಾಳಿ …
Read More »ಆನ್ಲೈನ್ ಡೇಟಿಂಗ್ ಹೆಸರಲ್ಲಿ ವೇಶ್ಯಾವಾಟಿಕೆ: ಐವರು ಉಗಾಂಡ ಯುವತಿಯರ ಬಂಧನ
ಚೈತನ್ಯಪುರಿ: ಆನ್ಲೈನ್ ಡೇಟಿಂಗ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಉಗಾಂಡ ಮೂಲದ ಐವರು ಯುವತಿಯರನ್ನು ಹೈದರಾಬಾದ್ನ ಚೈತನ್ಯಪುರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಇನ್ಸ್ಪೆಕ್ಟರ್ ರವಿಕುಮಾರ್, ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಯುವತಿಯರನ್ನು ಬಂಧಿಸಿದ್ದೇವೆ. ಆರೋಪಿಗಳು ಲೊಕ್ಯಾಂಟೋ ಹೆಸರಿನ ಆನ್ಲೈಟ್ ಡೇಟಿಂಗ್ ಆಯಪ್ನಲ್ಲಿ ಫೋಟೋಗಳನ್ನು ಹರಿಬಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದರು. ಶೋಧ ಕಾರ್ಯಾಚರಣೆ ನಡೆಸಿ ಅವರ ದಂಧೆಯನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಪೊಲೀಸರು ಗ್ರಾಹಕರ ವೇಷದಲ್ಲಿ ಆಯಪ್ನಲ್ಲಿರುವ ನಂಬರ್ …
Read More »ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಹುದಲಿ ಸರಕಾರಿ ಶಾಲೆಯಶಿಕ್ಷಕಿ ಕೋವಿಡ್ ಗೆ ಬಲಿ
ಬೆಳಗಾವಿ: ಬೆಳಗಾವಿಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಮತ್ತೋರ್ವ ಶಿಕ್ಷಕಿ ಬಲಿಯಾಗಿದ್ದಾರೆ. ಹುದಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಮೃತ ಶಿಕ್ಷಕಿ 32 ವರ್ಷದ ಶ್ರೀದೇವಿ ಹುಕ್ಕೇರಿ ಎಂದು ತಿಳಿದುಬಂದಿದೆ. ಹುದಲಿ ಸರಕಾರಿ ಶಾಲೆಯ ಕನ್ನಡ ಭಾಷೆ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದ ಶ್ರೀದೇವಿಯವರು, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಬರಹಗಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಅವರು ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. …
Read More »ಏಟಿಎಂ ಚಾಲಕನನ್ನು ಕೊಂದು 75 ಲಕ್ಷ ರೂ. ದೋಚಿದ್ದ ನಾಲ್ವರ ಬಂಧನ
ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನ ಚಾಲಕನಿಗೆ ಹಣದ ಆಮಿಷವೊಡ್ಡಿ ಹತ್ಯೆ ಮಾಡಿ ಸಕಲೇಶಪುರದ ಘಾಟ್‌ನಲ್ಲಿ ಎಸೆದು 75 ಲಕ್ಷ ರೂ. ದೋಚಿದ ನಾಲ್ವರನ್ನು ಗೋವಿಂದಪುರ ಪೊಲೀಸರು ಪ್ರಕರಣ ನಡೆದ ಮೂರು ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಎನ್.ಕುಮಾರ್ (23), ಮಧುಸೂದನ್ (23) ಮೈಸೂರಿನ ಕೆ.ಆರ್.ನಗರದ ಪ್ರಸನ್ನ (31) ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಹೇಶ್ (22) ಬಂಧಿತರು. ಆರೋಪಿಗಳಿಂದ 3.5 …
Read More »ರಾಮ್‌ದೇವ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್
ನವದೆಹಲಿ, : ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್‌ದೇವ್ ಮಾತನಾಡಿದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದರಲ್ಲಿ ಅಲೋಪತಿ ಮತ್ತು ವೈಜ್ಞಾನಿಕ ವೈದ್ಯಕೀಯ ಪದ್ದತಿಗೆ ಅವಮಾನಕರ ಮಾತುಗಳನ್ನು ಆಡಿದ್ದಾರೆ ಎಂದು ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಬಾಬಾ ರಾಮ್‌ದೇವ್ ಅಲೋಪತಿ ಚಿಕಿತ್ಸೆಯನ್ನು ‘ಮೂರ್ಖತನದ ವಿಜ್ಞಾನ’ ಎಂದು ಜರಿದಿದ್ದರು. ಡ್ರಗ್ಸ್ ಕಂಟ್ರೋಲರ್ ಜನರಲ್ …
Read More »ಸೋಂಕಿತರು ಇನ್ನು ಮುಂದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕು ; ಆರೋಗ್ಯ ಸಚಿವರು
ಬೆಂಗಳೂರು : ಸೋಂಕಿತರು ಇನ್ನು ಮುಂದೆ ಹೋಂ ಐಸೋಲೇಷನ್ ನಲ್ಲಿ ಇರುವಂತಿಲ್ಲ. ಅವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸ್ವ್ಯಾಬ್ ಪರೀಕ್ಷೆ ವರದಿ 24 ರಿಂದ 36 ಗಂಟೆಯ ಒಳಗಾಗಿ ಸಿಗುವಂತೆ ಕ್ರಮ …
Read More »ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿ :ಸಚಿವ ಮುರುಗೇಶ್ ನಿರಾಣಿ
ರಾಮನಗರ, ಮೇ.23- ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು …
Read More »ಬೆಂಗಳೂರಿಗೆ ಬರೋ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ?
ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡುತ್ತಾ ಎಂಬ ಪ್ರಶ್ನೆ ಈಗ ಎದ್ದಿದೆ. ಹೌದು. ಸದ್ಯ ಈಗ ಜೂನ್ 7ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ನಂತರ ಏನು ಎನ್ನುವುದು ತಿಳಿದು ಬಂದಿಲ್ಲ. ಲಾಕ್‍ಡೌನ್ ತೆರವಾದ ಕೂಡಲೇ ಮತ್ತೆ ಊರಿನಿಂದ ಬೆಂಗಳೂರಿಗೆ ವಲಸೆ ಆರಂಭವಾಗಲಿದೆ. ಲಾಕ್‍ಡೌನ್ ಹೇರಿದ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಜೂನ್ 7ರ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ …
Read More »