Breaking News

ಮುಂದಿನ ವಾರದಿಂದ 11 ಜಿಲ್ಲೆಗಳೂ ಅನ್ ಲಾಕ್ ಸಾಧ್ಯತೆ

ಬೆಂಗಳೂರು: ಪಾಸಿಟಿವಿಟಿ ಅಧಿಕವಿದ್ದ 11 ಜಿಲ್ಲೆಗಳಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಮುಂದಿನ ವಾರ ಈ ಜಿಲ್ಲೆಗಳೂ ಅನ್ ಲಾಕ್ ಆಗುವ ಸಾಧ‍್ಯತೆಯಿದೆ. ಈ ಪೈಕಿ ಬೆಳಗಾವಿಯಲ್ಲಿ ಪಾಸಿಟಿವಿಟಿ ದರ ಶೇ.6, ಶಿವಮೊಗ್ಗದಲ್ಲಿ ಶೇ.5.5, ಮಂಡ್ಯದಲ್ಲಿ ಶೇ.7, ಹಾಸನದಲ್ಲಿ ಶೇ.9 ಇದ್ದರೆ, ಮೈಸೂರಿನಲ್ಲಿ ಈಗಲೂ 13.5 ಶೇ. ಪಾಸಿಟಿವಿಟಿ ದರವಿದೆ. ಇನ್ನು ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಕೊರೋನಾ ಸಂಪೂರ್‌ಐ ಹತೋಟಿಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ …

Read More »

ಸೋಂಕಿತರ ಸಂಖ್ಯೆ ಇಳಿಕೆ: ಸಾವಿರ ಬೆಡ್​ಗಳ ಜಿಂದಾಲ್ ಕೋವಿಡ್ ಆಸ್ಪತ್ರೆ ಸೇವೆ ಸ್ಥಗಿತ

ಬಳ್ಳಾರಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಮೈದಾನದಲ್ಲಿ ಆರಂಭಿಸಲಾಗಿದ್ದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಸೇವೆ ಸ್ಥಗಿತಗೊಳಿಸಲಾಗಿದೆ. ಕೊರೊನಾ ಎರಡನೇ ಅಲೆ ವ್ಯಾಪಕವಾಗಿದ್ದ ಹಿನ್ನೆಲೆ ಸಾವಿರ ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯುಳ್ಳ ಈ ತಾತ್ಕಾಲಿಕ ಕೋವಿಡ್​​ ಕೇರ್​ ಸೆಂಟರ್​ ಸ್ಥಾಪನೆ ಮಾಡಲಾಗಿತ್ತು. ಈಗ ರೋಗಿಗಳು ಇಲ್ಲದೆ ಬೆಡ್ ಖಾಲಿಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲಾಡಾಳಿತ ಆಸ್ಪತ್ರೆ ಸೇವೆಯನ್ನ ಸ್ಥಗಿತಗೊಳಿಸಿದೆ. ಈ ಕುರಿತು ನ್ಯೂಸ್​ಫಸ್ಟ್‌ಗೆ ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. …

Read More »

ಗ್ರಾಮ ಪಂಚಾಯಿತಿ ಸದಸ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಇವನ ಕಾಮಪುರಾಣ

ಬೆಂಗಳೂರು: ಮಾಡೆಲಿಂಗ್​ ಕೆಲಸದ ಆಮಿಷವೊಡ್ಡಿ ಯುವತಿಯನ್ನ ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಕೆಗೆ ಗನ್​ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಯುವತಿಯ ನಗ್ನ ಫೋಟೋಗಳನ್ನು ತೆಗೆದು ಜಾಲತಾಣದಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ಅತ್ಯಾಚಾರ ಆರೋಪಿ. ಈತನಿಗೆ ಫೇಸ್​ಬುಕ್​ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್​ ಕ್ಷೇತ್ರದಲ್ಲಿ …

Read More »

ಮನೆ ಕಾಂಪೌಂಡ್​​ನಲ್ಲಿದ್ದ ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ, ಸ್ಥಳೀಯರಲ್ಲಿ ಆತಂಕ

ಹಾಸನ: ಮನೆಯ ಕಾಂಪೌಂಡ್​​ನಲ್ಲಿದ್ದ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ನಡೆದಿದೆ.‌ ತಡರಾತ್ರಿ 2.30ರ ಸಮಯದಲ್ಲಿ ಗ್ರಾಮದೊಳಗೆ ಬಂದಿರುವ ಚಿರತೆ ಗರುಡನಗಿರಿ ರಸ್ತೆಯ ಮಲ್ಲೇಗೌಡ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಮಲಗಿದ್ದ ನಾಯಿಯನ್ನು ಎಳೆದೊಯ್ದಿದೆ. ಬೆಳಗ್ಗೆ ನಾಯಿ ಕಾಣಿಸದಿದ್ದಾಗ ಮಲ್ಲೇಗೌಡರು ಸಿಸಿಟಿವಿ ಪರಿಶೀಲಿಸಿದ್ದಾರೆ. ಚಿರತೆ ನಾಯಿಯನ್ನು ಹೊತ್ತೊಯ್ಯವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಗಾಗಿ ಕೂಡಲೇ ಚಿರತೆಯನ್ನು …

Read More »

ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ

ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಠಕ್ಕೆ ಬರಲಾಗದ ಭಕ್ತರು https://www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ …

Read More »

ಭಾರೀ ಮಳೆ- ಬೆಳಗಾವಿಯ 3 ಸೇತುವೆಗಳು ಜಲಾವೃತ ,ಗದ್ದೆಗೆ ಉರುಳಿದ ಕ್ರೂಸರ್

ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರಂಭದಲ್ಲೇ ಧಾರಾಕಾರ ಮಳೆಯಾಗುತ್ತಿದೆ. ಮಲೆನಾಡು ಭಾಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂರು ಸೇತುವೆಗಳು ಜಲಾವೃತವಾಗಿದೆ.     ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ವರ್ಷಧಾರೆಯಿಂದ, ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಮೂಡಲಗಿ ತಾಲೂಕಿನ ಹಲವು ಸೇತುವೆಗಳು ಜಾಲಾವೃತಗೊಂಡಿವೆ. ತಾಲೂಕಿನ ಸುಣಧೋಳಿ, ಕಮಲದಿನ್ನಿ, ಅವರಾದಿ …

Read More »

ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …

Read More »

ತಾವೊಬ್ಬ ದುರ್ಬಲ ನಾಯಕರೆಂದು ಮೋದಿ ಸಾಬೀತುಪಡಿಸಿದ್ದಾರೆ : ಸಿದ್ದು ವ್ಯಂಗ್ಯ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿಗೆ ಬಂದು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲವೆಂದು ಸ್ಪಷ್ಟಪಡಿಸಿದರೂ ಕೂಡ ರಾಜ್ಯ ಬಿಜೆಪಿಯ ಸ್ಥಿತಿ ಬೂದಿಯೊಳಗಿನ ಕೆಂಡದಂತಾಗಿದೆ. ನಾಯಕತ್ವ ಬದಲಾವಣೆಯ ವಿಚಾರವಾಗಿ ಶಾಸಕರ ಹಾಗೂ ಸಚಿವರುಗಳ ಭಿನ್ನಾಭಿಪ್ರಾಯದ ಹೇಳಿಕೆಗಳು ಇಂದು ಕೂಡ ಮುಂದುವರಿದಿದ್ದು, ರಾಜ್ಯ ಬಿಜೆಪಿಯ ಆಡಳಿತ ಚುಕ್ಕಾಣಿಯ ಭವಿಷ್ಯ ಹೇಗೆ ಎನ್ನುವ ಪ್ರಶ್ನೆ ಎದ್ದಿದೆ.   ಪರಸ್ಪರ ಕಚ್ಚಾಡುತ್ತಿರುವ @BJP4Karnataka …

Read More »

ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೋವಿಡ್ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ …

Read More »

ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?

ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್‌ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ! ಈ ಬಗ್ಗೆ ಸ್ವತಃ ಶಾಸಕ …

Read More »