Breaking News

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 76,472 ಹೊಸ ಕೇಸು, 34 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 76 ಸಾವಿರದ 472 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ 76,472 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,63,973ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ 021 …

Read More »

ಬಿಜೆಪಿ ಶಾಸಕ ಅಭಯ ಪಾಟೀಲಗೆ ಕೋವಿಡ್-19 ದೃಢ

ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ. ‘ಅವರು ಹೋಂ ಐಸೊಲೇಷ‌ನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಸಹೋದರ ಸಂತೋಷ ಪಾಟೀಲ ‘ಪ್ರಜಾವಾಣಿ’ಗೆ ಖಚಿತಪಡಿಸಿದರು. ಶಾಸಕರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.  

Read More »

ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಕನ್ನಡಿಗರು ಹರಸಾಹಸ ಪಡಬೇಕಾ…?

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ? ಎಂದು ನಿಖಿಲ್ ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರು ಅವರು ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ …

Read More »

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪರಿಗೆ ಮತ್ತೆ ಎದುರಾಗಿದೆ ಕೊರೊನಾ ಭೀತಿ..!

ಬೆಳಗಾವಿ: ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆಯಷ್ಟೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದ್ರೆ, ಮೂಲಗಳು ಹೇಳುವ ಪ್ರಕಾರ ಶಾಸಕರು ಆಸ್ಪತ್ರೆಗೆ ದಾಖಲಾಗಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಭೀತಿ ಶುರುವಾಗಿದೆ. ಹೌದು, ಇತ್ತಿಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೂಡ ಪಾಲ್ಗೊಂಡಿದ್ದರು ಎನ್ನುವುದು …

Read More »

ಬೆಳಗಾವಿ: 789 ಮಂದಿ ಗುಣಮುಖ, ಬಿಡುಗಡೆ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 290 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಮೂವರು ಹಾಗೂ ಖಾನಾಪುರ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು. 789 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದೆ.

Read More »

ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ. ‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ …

Read More »

ಇ-ಲೋಕ ಅದಾಲತ್‌ ಸೆ.7ರಿಂದ

ಬೆಳಗಾವಿ: ‘ಕೋವಿಡ್-19 ಕಾರಣದಿಂದಾಗಿ ಇ-ಲೋಕ ಅದಾಲತ್ ನಡೆಸಲಾಗುತ್ತಿದೆ. ಎಲ್ಲರಿಗೂ ಸಮಾನ ಅವಕಾಶ ಹಾಗೂ ನ್ಯಾಯ ಸಿಗಬೇಕು ಎನ್ನುವುದು ಮುಖ್ಯ ಉದ್ದೇಶವಾಗಿದೆ’ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಾಧೀಶ ಅರವಿಂದ ಕುಮಾರ ಹೇಳಿದರು. ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು. ‘ಇ-ಲೋಕ ಅದಾಲತ್‌ ಬಗ್ಗೆ ಇಲ್ಲಿವರೆಗೆ ನಾಲ್ಕು ಸಭೆಗಳನ್ನು ನಡೆಸಿದ್ದೇವೆ. ವಿಮಾ ಕಂಪನಿಗಳಿಗೆ ಸಂಬಂಧಿಸಿದ ವ್ಯಾಜ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಅಪಘಾತದಲ್ಲಿ …

Read More »

ಪರೀಕ್ಷೆ ನಡೆಸದೆ ಪದವಿ ಇಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆ ನಡೆಸದೆ, ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸೆಪ್ಟೆಂಬರ್ 30ರ ಒಳಗೆ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಪರೀಕ್ಷೆಗಳನ್ನು ನಡೆಸಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಜುಲೈ 6ರಂದು ಹೊರಡಿಸಿದ್ದ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆದರೆ, …

Read More »

ಸೆಪ್ಟೆಂಬರ್ 7 ರಿಂದ 2nd PUC ಪಿಯುಸಿ ಪೂರಕ ಪರೀಕ್ಷೆ

ಕಲಬುರಗಿ : ಕಲಬುರಗಿ ನಗರದ 11 ಮತ್ತು ತಾಲೂಕು ಹಂತದ 7 ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 7 ರಿಂದ 19ರ ವರೆಗೆ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಯುವ ಪರೀಕ್ಷೆಯಂತೆ ಗಂಭೀರತೆ ಕಾಯ್ದುಕೊಂಡು ಸುಲಲಿತವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸೂಚಿಸಿದರು. ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ …

Read More »

ಜನಧನದಿಂದ ಬಡತನ ನೀಗಲು ಯತ್ನ: ಯೋಜನೆ ಆರು ವರ್ಷ ಪೂರೈಸಿದ್ದಕ್ಕೆ ಮೋದಿ ಹರ್ಷ

ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ‘ಜನ ಧನ’ ಯೋಜನೆ ಬಡತನ ನಿವಾರಣೆಯ ಪ್ರಯತ್ನ. ಅದೊಂದು ದೂರಗಾಮಿ ಬದಲಾವಣೆ ತರುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಯವರು ಘೋಷಣೆ ಮಾಡಿರುವ ಯೋಜನೆಗೆ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್‌ ಮಾ ‘ಶುಕ್ರವಾರಕ್ಕೆ ಜನಧನ ಯೋಜನೆ ಜಾರಿಯಾಗಿ ಆರು ವರ್ಷಗಳು ಪೂರ್ತಿಯಾದವು. ಬ್ಯಾಂಕಿಂಗ್‌ ವ್ಯವಸ್ಥೆ ಹೊಂದಿಲ್ಲದವರಿಗೆ ಅದನ್ನು ನೀಡುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು. ಇದರಿಂದಾಗಿ ಧನ್ಮಾತ್ಮಕವಾದ ಬದಲಾಣೆಗಳು ಉಂಟಾಗಿವೆ. ಕೋಟ್ಯಂತರ ಮಂದಿಗೆ …

Read More »