Breaking News

ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ : ಕುರುಬೂರು ಶಾಂತಕುಮಾರ್

ಬೆಂಗಳೂರು : ರಸಗೊಬ್ಬರ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ ಗೋಮುಖ ವ್ಯಾಘ್ರ ನಡವಳಿಕೆ. ಯಾವುದೇ ಕಾರಣಕ್ಕೂ ರಸಗೊಬ್ಬರ ಬೆಲೆ ಏರಿಕೆ ಮಾಡುವುದಿಲ್ಲ ಹಳೆಯ ದರದಲ್ಲಿಯೇ ರಸಗೊಬ್ಬರಗಳು ಮಾರಾಟವಾಗುತ್ತದೆ. ರೈತರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳುತ್ತಲೇ ಬೆಲೆ ಏರಿಕೆ ಮಾಡಿ ರೈತರನ್ನು ಮೋಸಗೊಳಿಸಿದ್ದಾರೆ. ಹೊಸ ದರ ನಿಗದಿಯಾಗಿದೆ ಡಿಎಪಿ ಪ್ರತಿ ಚೀಲಕ್ಕೆ 1200 ರಿಂದ ಏರಿಕೆ …

Read More »

ಕೊರೊನಾ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ :ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು, ಮೇ 13-ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಸಂಬಂಧಿಸಿದ ಜಮೀನಿನ ರೈತರಿಗೆ ನೇರವಾಗಿ ಪರಿಹಾರ ಧನವನ್ನು ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಶಿವಮೊಗ್ಗ- ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ -13, ಮುಧುಗಿರಿ- ಆಂಧ್ರಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234, ಕೊಳ್ಳೆಗಾಲ- ಕೇರಳ …

Read More »

ಹರಿಹರ ಆಸ್ಪತ್ರೆಯಲ್ಲಿ ರೋಗಿಗೆ ಸಿಗದ ಸೂಕ್ತ ಚಿಕಿತ್ಸೆ: ಗೋಳಾಟದ ವಿಡಿಯೋ ವೈರಲ್

ದಾವಣಗೆರೆ, ಮೇ 12: ದಾವಣಗೆರೆ ಜಿಲ್ಲೆ ಹರಿಹರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ರೋಗಿಯೊಬ್ಬರ ಸಂಬಂಧಿಕರು ಗೋಳಾಡುವ ವಿಡಿಯೋ ವೈರಲ್ ಆಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಹಾಗೂ ಕೋವಿಡೇತರ ರೋಗಿಗಳು ಹೆಚ್ಚಾಗಿ ಬರುತ್ತಿದ್ದು, ಕೊರೊನಾ ಸೋಂಕಿಗೆ ಜನರು ಬಲಿಯಾಗುತ್ತಿದ್ದಾರೆ. ಚಿಕಿತ್ಸೆಗೆ ಬಂದರೆ ವೈದ್ಯರಾಗಲಿ, ದಾದಿಯರಾಗಲಿ ತಕ್ಷಣಕ್ಕೆ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಹಲವು ರೀತಿಯ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿದೆ. ಯಾವ ಆರೋಗ್ಯ ಅಧಿಕಾರಿಗಳು ಇತ್ತ …

Read More »

ಲಾಕ್‌ಡೌನ್: ಪೊಲೀಸ್ ಹೊಡೆತ ತಪ್ಪಿಸಲು ಸೈಕ್ಲಿಸ್ಟ್‌ಗಳ ಮಾಸ್ಟರ್ ಪ್ಲಾನ್

ಉಡುಪಿ, ಮೇ 12: ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಯಾರಾದರೂ ಬೈಕ್ ಅಥವಾ ವಾಹನಗಳಲ್ಲಿ ಹೊರಬಂದರೆ ಪೊಲೀಸರ ಲಾಠಿ ಏಟು ಬೀಳುವುದು ಗ್ಯಾರಂಟಿಯಾಗಿತ್ತು. ಆದರೆ, ಪೊಲೀಸರಿಂದ ಲಾಠಿ ಏಟು ತಪ್ಪಿಸುವುದಕ್ಕಾಗಿ ಉಡುಪಿಯ ವ್ಯಕ್ತಿಯೊಬ್ಬರು ತಾತ್ಕಾಲಿಕ ಹಿಂಭಾಗದ ರಕ್ಷಣೆ, ಹೆಲ್ಮೆಟ್ ಮತ್ತು ಮಾಸ್ಕ್ ನೊಂದಿಗೆ ಸೈಕಲ್ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತ್ರಕರ್ತ ನೋಲನ್ ಪಿಂಟೊ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಸೈಕಲ್‌ನಲ್ಲಿ ಹೋಗುವಾಗ ವ್ಯಕ್ತಿಯೊಬ್ಬ ತನ್ನ …

Read More »

ಆಮ್ಲಜನಕ ಕೊರತೆ: ಯೋಗಿ ಸರ್ಕಾರದ ಹುಳುಕು ಬಹಿರಂಗಪಡಿಸಿದ ಹೈಕೋರ್ಟ್

ಲಕ್ನೋ, ಮೇ 12: ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ನೀಡಿರುವ ಅಂಕಿ ಅಂಶಗಳ ದೋಷವನ್ನು ಅಲಹಾಬಾದ್ ಹೈಕೋರ್ಟ್ ಬಹಿರಂಗಪಡಿಸಿದೆ. ಆಸ್ಪತ್ರೆಯ ಹಾಸಿಗೆಗಳ ಲಭ್ಯತೆಯ ಬಗ್ಗೆ ಸರ್ಕಾರದ ಸಹಾಯವಾಣಿ ಮತ್ತು ಪೋರ್ಟಲ್ ನಡುವೆ ಸರಿಯಾದ ಹೊಂದಾಣಿಕೆಯಿಲ್ಲ,ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಉತ್ತರ ಪ್ರದೇಶ ಆಡಳಿತ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಯೋಗಿ ಸರ್ಕಾರದ ಹುಳುಕನ್ನು ಕೋರ್ಟ್ ಬಹಿರಂಗಪಡಿಸಿದೆ. ”ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯಾಗದೆ ಕೋವಿಡ್‌ …

Read More »

ಚೋಪ್ರಾ ರಚಿಸಿದ ಟೀಮ್‌ ಇಂಡಿಯಾ ತಂಡಕ್ಕೆ ಶಿಖರ್‌ ಧವನ್‌ ನಾಯಕ

ಹೊಸದಿಲ್ಲಿ: ಟೀಮ್‌ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿರುವಾಗಲೇ ಭಾರತದ ಮತ್ತೂಂದು ತಂಡ ಶ್ರೀಲಂಕಾಕ್ಕೆ ತೆರಳಿ ಸೀಮಿತ ಓವರ್‌ಗಳ ಸರಣಿಯನ್ನಾಡುವ ಸುದ್ದಿ ಭಾರೀ ಸಂಚಲನ ಮೂಡಿಸಿದೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ 17 ಸದಸ್ಯರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆಂದು ರಚಿಸಿದ್ದಾರೆ. ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರನ್ನು ನಾಯಕನನ್ನಾಗಿ ಆರಿಸಿದ್ದಾರೆ. ಹಾರ್ದಿಕ್‌ ಪಾಂಡ್ಯ ಉಪನಾಯಕರಾಗಿದ್ದಾರೆ. ಚೋಪ್ರಾ ತಂಡ: ಶಿಖರ್‌ ಧವನ್‌ (ನಾಯಕ), ಪೃಥ್ವಿ ಶಾ, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ …

Read More »

ಕೋವಿಡ್ ಕೇರ್ ಸೆಂಟರ್ ಗಳನ್ನಾಗಿ ಬದಲಾಯಿಸಲು ಸಿದ್ಧ: ಆದರೆ ಸಿಬ್ಬಂದಿ ಎಲ್ಲಿದೆ? ಹೋಟೆಲ್ ಮಾಲೀಕರ ಪ್ರಶ್ನೆ

ಬೆಂಗಳೂರು: ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನು ಮಾರ್ಪಡಿಸಲು ತಾವು ಸಿದ್ದರಿದ್ದೇವೆ. ಅದರೆ ಅಲ್ಲಿಗೆ ಬೇಕಾದ ಸೌಲಭ್ಯ ಹಾಗೂ ಸಿಬ್ಬಂದಿಗೆ ಏನು ವ್ಯವಸ್ಥೆ ಮಾಡುವಿರಿ ಎಂದು ಹೋಟೆಲ್ ಮಾಲೀಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಹೋಟೆಲ್ ಅಸೋಷಿಯೇಷನ್, ಜೊತೆ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಅಧಿಕಾರಿಗಳು ನಡೆಸಿದ ವರ್ಚ್ಯೂವಲ್ ಸಭೆಯಲ್ಲಿ ಈ ಪ್ರಶ್ನೆ ಎತ್ತಲಾಯಿತು. 10 ಹೋಟೆಲ್ ಗಳ 1000 ರೂಂ ಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಬದಲಾಯಿಸುತ್ತೇವೆ, ಸರ್ಕಾರ 2000 …

Read More »

ಇಸ್ರೇಲ್ ದಾಳಿಗೆ 10 ಹಮಾಸ್ ಬಂಡುಕೋರ ನಾಯಕರ ಸಾವು

ಗಾಜಾ: ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಜಾ ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ 10ರಷ್ಟು ಬಂಡುಕೋರ ನಾಯಕರನ್ನು ಹೊಡೆದುರುಳಿಸಲಾಗಿದ್ದು, ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಪಾಲೆಸ್ಟೈನ್‌ನ ಹಮಾಸ್ ಬಂಡುಕೋರರು, ಇಸ್ರೇಲ್ ಮೇಲೆ 1,000ಕ್ಕೂ ಹೆಚ್ಚು ರಾಕೆಟ್ ದಾಳಿಯನ್ನು ನಡೆಸಿದೆ. 2014ರಲ್ಲಿ ಇಸ್ರೇಲ್ ಹಾಗೂ ಪಾಲೆಸ್ಟೈನ್ ನಡುವೆ ನಡೆದ ಯುದ್ಧವು 50 ದಿನಗಳ ಕಾಲ ಮುಂದುವರಿದಿತ್ತು. ಈಗ ಹಿಂದಿನಗಿಂತಲೂ ಭೀಕರ ಪರಿಸ್ಥಿತಿ ನಿರ್ಮಾಣವಾಗುವ …

Read More »

ಲಸಿಕಾ ಅಭಾವ; ದೆಹಲಿಯಲ್ಲಿ ಮುಚ್ಚಿದ 100 ಲಸಿಕಾ ಕೇಂದ್ರಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಿಂತು ರಾಷ್ಟವ್ಯಾಪಿ ಲಸಿಕಾ ಉತ್ಸವ ನಡೆಯಬೇಕು ಎಂದು ಕರೆಕೊಟ್ಟರು. ಆದರೆ ಇದೀಗ ಅದೇ ದೆಹಲಿಯಲ್ಲಿ ಲಸಿಕೆಯ ಅಭಾವ ಉಂಟಾಗಿ 100 ಹೆಚ್ಚು ಲಸಿಕಾ ಕೇಂದ್ರಗಳು ಮುಚ್ಚಿಹೋಗಿವೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಗ್ರಿಸಲಾಗಿದ್ದ ಎಲ್ಲ ಲಸಿಕೆಗಳು ಖಾಲಿಯಾದ್ದರಿಂದ ನಗರದ 100 ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳನ್ನು ಮುಚ್ಚುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ …

Read More »

ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ : ಅರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಮೊದಲ ಲಸಿಕೆ ನೀಡುವುದನ್ನು ಮೇ. 14 ರಿಂದ ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯದ ಎಲ್ಲ ಲಸಿಕಾ ಕೇಂದ್ರಗಳು ಈ ಆದೇಶವನ್ನು ಪಾಲಿಸಲು ಅರೋಗ್ಯ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಪಡೆದಿರುವ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್‌ ಕೊಡಲು ಮೊದಲ ಆದ್ಯತೆಯನ್ನಾಗಿ ಮಾಡಿಕೊಳ್ಳಲಾಗಿದ್ದು, ಈಗ ರಾಜ್ಯದಲ್ಲಿ ಲಭ್ಯವಿರುವ ಲಸಿಕೆಯನ್ನು ಎರಡನೇ ಡೋಸ್‌ ನೀಡಲು ಮಾತ್ರ ಬಳಕೆ …

Read More »